ಮಂಡ್ಯ | ಮಾರ್ಚ್‌ 3ರಂದು ಪಲ್ಸ್‌ ಪೋಲಿಯೋ; ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ

Date:

ಮಂಡ್ಯ ಜಿಲ್ಲಾದ್ಯಂತ ಮಾರ್ಚ್‌ 3ರಂದು ನಡೆಯಲಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಕುಮಾರ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಮಂಡ್ಯ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಅಭಿಯಾನದ ಸಿದ್ಧತೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಶನಿವಾರ ಎಲ್ಲ ಶಾಲೆಗಳಲ್ಲಿ ಜಾಗೃತಿ ಅಭಿಯಾನವನ್ನು ನಡೆಸಲಾಗುವುದು. ಪ್ರತಿ ಶಾಲೆಗೆ ಒಬ್ಬ ವಿದ್ಯಾರ್ಥಿಯನ್ನು ರಾಯಭಾರಿಯಾಗಿ ನೇಮಿಸಬೇಕು ಮತ್ತು ಅಭಿಯಾನವನ್ನು ಮುನ್ನಡೆಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಳಿಗ್ಗೆ 8ಕ್ಕೆ ಶಾಲೆಯನ್ನು ತೆರೆಯುವಂತೆ ಹಾಗೂ ಮಕ್ಕಳಿಗೆ ಪೋಲಿಯೋ ಹನಿಗಳನ್ನು ನೀಡಲು ಬರುವ ಸಿಬ್ಬಂದಿಗಳಿಗೆ ಎಲ್ಲ ಮೂಲ ಸೌಲಭ್ಯಗಳನ್ನು ಒದಗಿಸಬೇಕು” ಎಂದು ಶಾಲಾ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಮಿತಿ, 0-5 ವರ್ಷದೊಳಗಿನ ಮಕ್ಕಳನ್ನು ಪಲ್ಸ್ ಪೋಲಿಯೋ ಕೇಂದ್ರಗಳಿಗೆ ಕರೆತರಲು ವ್ಯವಸ್ಥೆ ಮಾಡುವುದು, ಮನೆಯಲ್ಲಿ ಹೆರಿಗೆಯಾದ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವುದು, ಮಹಿಳಾ ಸ್ವಸಹಾಯ ಗುಂಪುಗಳನ್ನು ಪಲ್ಸ್ ಪೋಲಿಯೋ ಅಭಿಯಾನದಲ್ಲಿ ತೊಡಗಿಸಿಕೊಳ್ಳುವುದು, ಅಸಂಘಟಿತ ವಲಯದ ಕಾರ್ಮಿಕ ಕುಟುಂಬಗಳು ಮತ್ತು ಅಲೆಮಾರಿ ಸಮುದಾಯಗಳಿಗೆ ಸಂಪೂರ್ಣ ವ್ಯಾಪ್ತಿಯನ್ನು ಖಾತ್ರಿಪಡಿಸುವುದು ಸೇರಿದಂತೆ ಸಭೆಯಲ್ಲಿ ಮುಂತಾದ ನಿರ್ಧಾರಗಳನ್ನು ತೆಗೆದುಕೊಂಡರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕೃಷಿಯನ್ನು ಡಬ್ಲ್ಯುಟಿಒದಿಂದ ಹೊರಗಿಡಲು ಒತ್ತಾಯ; ಪಂಜಿನ ಮೆರವಣಿಗೆ

ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್ ಸಂಸ್ಥೆಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ಮತ್ತು ತಮ್ಮ ಸಂಸ್ಥೆಗಳಲ್ಲಿ ಪಲ್ಸ್ ಪೋಲಿಯೋ ಬೂತ್‌ಗಳನ್ನು ತೆರೆಯಲು ನಿರ್ದೇಶಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...