ಮಂಡ್ಯ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ 20 ವರ್ಷ ಜೈಲು

Date:

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ 2019ರಲ್ಲಿ ಕೃತ್ಯ ನಡೆದಿತ್ತು. ಬಾಲಕಿಗೆ ಆಮಿಷವೊಡ್ಡಿ ಕರೆದೊಯ್ದಿದ್ದ ಆರೋಪಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಬೆಳ್ಳೂರು ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಕೃತ್ಯ ಎಸಗಿದ್ದ ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ತನಿಖೆ ನಡೆಸಿ, ಜಾರ್ಜ್‌ಶೀಟ್‌ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿರುವ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ ದಿಲೀಪ್ ಕುಮಾರ್, ಅಪರಾಧಿಗೆ 20 ವರ್ಷ ಜೈಲು, 50,000 ರೂ. ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡುವಂತೆ ನಿರ್ದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...