ಮಂಡ್ಯ | ದ್ವಿಚಕ್ರ ವಾಹನಕ್ಕೆ ಅಡ್ಡ ಬಂದಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಸವಾರ: ಎಫ್ಐಆರ್ ದಾಖಲು

Date:

ದ್ವಿಚಕ್ರ ವಾಹನಕ್ಕೆ ಅಡ್ಡಬಂದಳು ಎಂಬ ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿನಿಯ ಮೇಲೆ ಸವಾರನೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಮಂಡ್ಯ ನಗರದ ಸುಭಾಷ್ ನಗರ 3ನೇ ಕ್ರಾಸ್ ನಲ್ಲಿ ಮಾ. 6ರ ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ ನಡೆದಿದೆ.

ಹಳದಿ ಟೀಶರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದ ಶಾಲಾ ವಿದ್ಯಾರ್ಥಿನಿಯು ತನ್ನ ಸೈಕಲ್ ಮೂಲಕ ಅವಸರದಲ್ಲಿ ಶಾಲೆಗೆ ತೆರಳುವಾಗ ಅಡ್ಡ ಬಂದಳೆಂದು ಆಕ್ರೋಶಗೊಂಡು, KA-11 EW 4842 ವಿದ್ಯುತ್ ಚಾಲಿತ ಸ್ಕೂಟರ್‌ನಲ್ಲಿ ಬಂದ ಹಿರಿಯ ಬೈಕ್ ಸವಾರ ವಿದ್ಯಾರ್ಥಿನಿಯನ್ನು ಬೆದರಿಸಿದ್ದಲ್ಲದೇ, ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.

ಹಲ್ಲೆಯ ವೇಳೆ ವಿದ್ಯಾರ್ಥಿನಿಯು ಕಣ್ಣೀರಿಟ್ಟಿದ್ದಾಳೆ. ಘಟನೆಯ ದೃಶ್ಯವನ್ನು ಕಾರಿನಲ್ಲಿದ್ದವರೋರ್ವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲಾ ವಿದ್ಯಾರ್ಥಿನಿ ಎಂಬುದನ್ನು ನೋಡದೇ ಆಕೆಯನ್ನು ದಬಾಯಿಸಿ, ಏರುಧ್ವನಿಯಲ್ಲಿ ಬೆದರಿಸುವ ಮೂಲಕ ಸಾರ್ವಜನಿಕವಾಗಿಯೇ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲೇ ವಿದ್ಯಾರ್ಥಿನಿ ಮೇಲೆ ಹಲ್ಲೆ ಮಾಡಿರುವ ಈತನ ಮೇಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಣೆ ಹಾಗೂ ಮಂಡ್ಯ ಪೊಲೀಸರು ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಎಫ್ಐಆರ್ ದಾಖಲು

ವಿದ್ಯಾರ್ಥಿನಿಗೆ ಹಲ್ಲೆ ನಡೆಸಿದ ದೃಶ್ಯದ ಹರಿದಾಡಿದ ಬಳಿಕ, ಹಲ್ಲೆ ನಡೆಸಿದವನ ವಿರುದ್ಧ ಸಂತ್ರಸ್ತ ವಿದ್ಯಾರ್ಥಿನಿಯ ಪೋಷಕರು, ಪೊಲೀಸರಿಗೆ ದೂರು ನೀಡಿದ್ದಾರೆ.

ಹಲ್ಲೆ ನಡೆಸಿದವನನ್ನು ಸ್ಥಳೀಯ ನಿವಾಸಿ ರಮೇಶ ಎಂದು ಗುರುತಿಸಲಾಗಿದ್ದು, ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯ ಪೊಲೀಸರು, ಐಪಿಸಿ 1860 ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...