ಮಂಡ್ಯ | ಅಬಕಾರಿ ಅಧಿಕಾರಿಗಳ ವಿರುದ್ಧ ₹40 ಲಕ್ಷ ಲಂಚದ ಆರೋಪ; ಲೋಕಾಯುಕ್ತ ತನಿಖೆ ಆರಂಭ

Date:

ಮಂಡ್ಯ ಜಿಲ್ಲೆಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ಪರವಾನಗಿ ನೀಡಲು ಅಬಕಾರಿ ಅಧಿಕಾರಿಗಳು ₹40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂಬ ಆರೋಪ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತ ಪುನೀತ್ ನೀಡಿದ ದೂರಿನಿಂದ ಈ ಪ್ರಕರಣ ತೀವ್ರತೆ ಪಡೆದುಕೊಂಡಿದೆ.

ಮದ್ದೂರು ತಾಲೂಕಿನ ಚಂದೂಪುರ ಗ್ರಾಮದ ನಿವಾಸಿ, ಕಾಂಗ್ರೆಸ್ ಕಾರ್ಯಕರ್ತ ಪುನೀತ್ ತಮ್ಮ ತಾಯಿ ಲಕ್ಷ್ಮಮ್ಮನ ಹೆಸರಿನಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ತೆರೆಯಲು ಪರವಾನಗಿಗಾಗಿ ಅಬಕಾರಿ ಇಲಾಖೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದರು. ಆದಾಗ್ಯೂ, ಇಲಾಖೆಯ ಅಧಿಕಾರಿಗಳು “ಅನುಮತಿ ಪಡೆದು ಅರ್ಜಿ ಸಲ್ಲಿಸಿಲ್ಲ” ಎಂಬ ಕಾರಣದೊಂದಿಗೆ ಅರ್ಜಿಯನ್ನು ತಿರಸ್ಕರಿಸಿದರು.

ಅರ್ಜಿಯನ್ನು ಮತ್ತೆ ಸ್ವೀಕರಿಸಬಹುದೆಂಬ ಆಶೆಯಿಂದ ಪುನೀತ್ ಖುದ್ದಾಗಿ ಅಬಕಾರಿ ಇಲಾಖೆಗೆ ತೆರಳಿ ತಮ್ಮ ಅರ್ಜಿಯನ್ನು ಪುನಃ ಸಲ್ಲಿಸಿದರು. ಆದರೆ ಈ ಬಾರಿ, ಅಬಕಾರಿ ಇಲಾಖೆಯ ಮಂಡ್ಯ ಜಿಲ್ಲಾಧಿಕಾರಿ ರವಿಶಂಕರ್ ಮತ್ತು ಇನ್‌ಸ್ಪೆಕ್ಟರ್ ಶಿವಶಂಕರ್ ₹40 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆಂದು ಪುನೀತ್ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲಂಚವನ್ನು ನೀಡಲು ನಿರಾಕರಿಸಿದ ಬಳಿಕ ₹30 ಲಕ್ಷ, ಬಳಿಕ ₹20 ಲಕ್ಷ ರೂಪಾಯಿಗಳ ಲಂಚಕ್ಕಾಗಿ ಒತ್ತಡ ಹಾಕಲಾಗಿದೆʼ ಇಷ್ಟಕ್ಕೂ ಲಂಚ ನೀಡಲು ಒಪ್ಪದಿರುವ ಕಾರಣ, ನಮ್ಮ ಅರ್ಜಿಯನ್ನು ಮತ್ತೊಮ್ಮೆ ತಿರಸ್ಕರಿಸಲಾಗಿದೆ” ಎಂದು ಪುನೀತ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಡ್ಯ | ಎಲ್ಲ ಸರ್ಕಾರದಿಂದ ರೈತರು, ಕಾರ್ಮಿಕರ ಶೋಷಣೆ: ರೈತ ಮುಖಂಡ ಕೆಂಪೂಗೌಡ

ಲಂಚದ ಬೇಡಿಕೆಯಿಂದ ಬೇಸತ್ತ ಪುನೀತ್, ಮಂಡ್ಯ ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಿದರು. ಈ ವೇಳೆ, ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳನ್ನು ಕೂಡಾ ಲೋಕಾಯುಕ್ತ ಅಧಿಕಾರಿಗಳಿಗೆ ಒದಗಿಸಿದ್ದು, ತನಿಖೆ ಆರಂಭಿಸಲಾಗಿದೆ.

ಈ ಪ್ರಕರಣವು ಜಿಲ್ಲೆಯಲ್ಲಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಅಧಿಕಾರಿಗಳು ಸಾರ್ವಜನಿಕರಿಂದ ಲಂಚದ ಮೂಲಕ ಹಣ ಕೀಳಲು ಪ್ರಯತ್ನಿಸುತ್ತಿರುವುದು ಅಸಹ್ಯಕರ ಬೆಳವಣಿಗೆಯಾಗಿದೆ.

“ನಾನು ನನಗೆ ನ್ಯಾಯ ಸಿಗಲು ಕಾಯುತ್ತಿದ್ದೇನೆ. ರಾಜ್ಯದ ಎಲ್ಲ ಜನರು ನನಗೆ ಬೆಂಬಲ ನೀಡುತ್ತಿದ್ದಾರೆ,” ಎಂದು ಪುನೀತ್ ತಿಳಿಸಿದ್ದಾರೆ. ಇದೀಗ ಅವರು ಲೋಕಾಯುಕ್ತದಿಂದ ಪೂರ್ಣವಾದ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಈಗ ತನಿಖೆ ಆರಂಭಿಸಿದ್ದು, ಆರೋಪಿಗಳಿಗೆ ನ್ಯಾಯಾಲಯದ ಮುಂದೆ ಹಾಜರಾಗಲು ಸೂಚಿಸಿದ್ದಾರೆ. ಸಾರ್ವಜನಿಕರಿಗೆ ಸತ್ಯತೆ ಬಯಲು ಮಾಡಲು ಲೋಕಾಯುಕ್ತರಿಂದ ತಕ್ಷಣವೇ ಸಂಪೂರ್ಣ ತನಿಖೆ ನಡೆಸಬೇಕೆಂಬುದು ದೂರುದಾರರ ನಿರೀಕ್ಷೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...