ಮಂಡ್ಯ ಸಾಹಿತ್ಯ ಸಮ್ಮೇಳನ: ಸರ್ಕಾರಕ್ಕೆ ಸೆಡ್ಡು ಹೊಡೆದು ಬಾಡೂಟ ಹಂಚಿದ ಜನಪರ ಮುಖಂಡರು

Date:

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಬೇಕೇ ಬೇಕು ಎಂದು ಗಟ್ಟಿದನಿಯಲ್ಲಿ ಕರ್ನಾಟಕದ ಆಹಾರ ಸಂಸ್ಕೃತಿ ಪರವಾಗಿ ಬೇಡಿಕೆ ಇಟ್ಟಿದ್ದ ಹೋರಾಟಗಾರರು ಕೊನೆಗೂ ಗೆದ್ದಿದ್ದಾರೆ.

ಆಹಾರದ ಅಸಮಾನತೆ ತೊಲಗಿಸಲು ಒತ್ತಾಯಿಸಿದ್ದ ಜನಪರ ಮುಖಂಡರು, ಕೊನೆಗೂ ಪೊಲೀಸರ ಪ್ರಬಲ ವಿರೋಧದ ನಡುವೆಯೇ ಭರ್ಜರಿ ಬಾಡೂಟವನ್ನು ಸಾರ್ವಜನಿಕರಿಗೆ ವಿತರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಡ್ಯ ಸಾಹಿತ್ಯ ಸಮ್ಮೇಳನದ ಆಯೋಜಕರಾದ ಕನ್ನಡ ಸಾಹಿತ್ಯ ಪರಿಷತ್, ಸಮ್ಮೇಳನದ ಕೊನೆಯ ದಿನವಾದ ಭಾನುವಾರ ಮಧ್ಯಾಹ್ನ ಊಟದೊಂದಿಗೆ ಮೊಟ್ಟೆಯನ್ನು ವಿತರಿಸಲಿದೆ ಎಂಬ ಸುದ್ದಿ ಹರಿದಾಡಿತ್ತಾದರೂ, ಕೊನೆವರೆಗೂ ವಿತರಿಸಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರಿಂದ ಆಕ್ರೋಶಗೊಂಡ ಮಂಡ್ಯದ ಜನಪರ ಸಂಘಟನೆಗಳ ಮುಖಂಡರು, ಭಾನುವಾರ ಮಧ್ಯಾಹ್ನದ ವೇಳೆಗೆ ಸಮ್ಮೇಳನದ ಊಟ ಹಂಚುತ್ತಿದ್ದ ಸ್ಥಳಕ್ಕೆ ಕೋಳಿ ಸಾರು, ಮುದ್ದೆ ಹಾಗೂ ಮೊಟ್ಟೆ, ಚಿಕನ್ ಕಬಾಬ್ ಅನ್ನು ತಂದು, ಜನರಿಗೆ ಹಂಚಲು ಮುಂದಾದರು. ಈ ವೇಳೆ ಆಹಾರ ಕೌಂಟರ್‌ ಬಳಿಯಲ್ಲಿ ಭದ್ರತೆ ನೋಡಿಕೊಳ್ಳುತ್ತಿದ್ದ ಪೊಲೀಸರು, ಎಲ್ಲ ಆಹಾರಗಳನ್ನು ಹೋರಾಟಗಾರರಿಂದ ಕಿತ್ತುಕೊಳ್ಳಲು ಯತ್ನಿಸಿದರೂ ಕೂಡ, ಯಶಸ್ಸಾಗಲು ಬಿಡಲಿಲ್ಲ.

ಸಮ್ಮೇಳನದ ಆವರಣಕ್ಕೆ ತಂದಿದ್ದ ಬಾಡೂಟವನ್ನು ಸಮ್ಮೇಳನ ನಡೆಯುತ್ತಿದ್ದ ಸಾರ್ವಜನಿಕರಿಗೆ ಬಡಿಸುವಲ್ಲಿ ಯಶಸ್ವಿಯಾದರು. ಸಮಾನ ಮನಸ್ಕ ವೇದಿಕೆಯ ಕೆಲವು ಮುಖಂಡರು ಊಟ ಹಂಚುತ್ತಲೇ ‘ಬಾಡೇ ನಮ್ಮ ಗಾಡು’ ಎಂಬ ಘೋಷಣೆ ಕೂಡ ಹಾಕಿದರೆ, ಕೆಲವು ಮುಖಂಡರು ‘ಇದು ಆಹಾರ ಅಸಮಾನತೆ ಎತ್ತಿ ಹಿಡಿದ ಸಮ್ಮೇಳನ’ ಎಂಬ ಬ್ಯಾಡ್ಜ್‌ ಧರಿಸಿದ್ದರು.

WhatsApp Image 2024 12 22 at 3.57.37 PM

ಊಟದಲ್ಲಿ ತಾರತಮ್ಯ ಮಾಡಿದ ಕಸಾಪ ಆಡಳಿತದ ವಿರುದ್ದ ಆಕ್ರೋಶವನ್ನೂ ಹೊರ ಹಾಕಿ, ಶನಿವಾರ ಸಂಜೆ ಸಮ್ಮೇಳನದ ಮಹಾದ್ವಾರದ ಬಳಿ ಪ್ರತಿಭಟನೆ ನಡೆಸಿದ್ದ ಜನಪರ ಹೋರಾಟಗಾರರು, ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಕೊಡದಿದ್ದರೇ, ನಾವೇ ಬಾಡೂಟ ಹಾಕಿಸುತ್ತೇವೆ. ಮನೆ ಮನೆಗೆ ತೆರಳಿ ಕೋಳಿ ಸಂಗ್ರಹ ಮಾಡುತ್ತೇವೆ ಎಂದು ಕಸಾಪ ಹಾಗೂ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದರು.

ಸಮ್ಮೇಳನ 4

ಬಾಡೂಟ ಹಂಚುವ ವೇಳೆ ಜನಪರ ಹೋರಾಟಗಾರರಾದ ಕರುನಾಡ ಸೇವಕರ ಸಂಘಟನೆಯ ಎಂ.ಬಿ.ನಾಗಣ್ಣಗೌಡ, ವಕೀಲ ಲಕ್ಷ ಣ್ ಚೀರನಳ್ಳಿ, ದಲಿತ ಸಂಘರ್ಷ ಸಮಿತಿಯ ಎಂ.ವಿ. ಕೃಷ್ಣ,ಕೆಎಸ್‌ಎಸ್‌ನ ನರಸಿಂಹ ಮೂರ್ತಿ, ಸಿಐಟಿಯುನ ಸಿ.ಕುಮಾರಿ, ಟಿ.ಎಲ್ ಕೃಷ್ಣೇಗೌಡ, ಟಿ.ಡಿ. ನಾಗರಾಜ್, ಸಮಾನ ಮನಸ್ಕರ ವೇದಿಕೆ ಮುಕುಂದ, ನಿವೃತ್ತ ಪ್ರಾಧ್ಯಾಪಕ, ಚಿಂತಕರಾದ ಎಂ.ವಿ. ಕೃಷ್ಣ, ಪ್ರಾಂತ ಕೃಷಿ ಕೂಲಿಕಾರರ ಸಂಘದ ಯಶವಂತ್, ‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಅಭಿಗೌಡ ಹನಕೆರೆ, ಜಾಗೃತ ಕರ್ನಾಟಕದ ಸಂತೋಷ್ ಮಂಡ್ಯ, ಜಗದೀಶ್ ಜಾಣ ಜಾಣೆಯರು ಸೇರಿದಂತೆ ಹಲವರಿದ್ದರು.

oota
ಊಟ 4
WhatsApp Image 2024 12 22 at 4.07.51 PM 1
WhatsApp Image 2024 12 22 at 3.57.38 PM 1
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...