ಮಂಡ್ಯ | ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ; ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಬೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗ್ರಾಮದಲ್ಲಿ 2023ರ ಜೂನ್ ತಿಂಗಳಿನಲ್ಲಿ ಸಂಗೊಳ್ಳಿ ರಾಯಣ್ಣ ಯುವ ಬ್ರಿಗೇಡ್‌ ಸದಸ್ಯರು ಮತ್ತು ಗ್ರಾಮಸ್ಥರು ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ನಿರ್ಮಿಸಿದ್ದರು. ಆ ಪ್ರತಿಮೆಯನ್ನು ಕೆಲ ದುಷ್ಕರ್ಮಿಗಳು ಹಾನಿಗೊಳಿಸಿದ್ದಾರೆ. ಪ್ರತಿಮೆಯ ಕತ್ತಿ, ಕೈ, ಕಾಲು ಸೇರಿದಂತೆ ವಿವಿಧ ಭಾಗಗಳನ್ನು ಭಗ್ನಗೊಳಿಸಿದ್ದಾರೆ.

ಘಟನೆಯ ಬಗ್ಗೆ ತಿಳಿಸಿರುವ ಗ್ರಾಮದ ಮುಖಂಡ ಹಿರೇಗೌಡ, “ಸರ್ವ ಸಮುದಾಯ ನಾಯಕ ಮತ್ತು ಸ್ವತಂತ್ರಕ್ಕಾಗಿ ಹೋರಾಡಿದ ದೇಶಭಕ್ತ ಸಂಗೊಳ್ಳಿ ರಾಯಣ್ಣನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಪ್ರತಿಮೆಯನ್ನು ಪ್ರತಿಷ್ಟಾಪನೆ ಮಾಡಲಾಗಿತ್ತು. ಆದ್ರೆ ಕಳೆದ ರಾತ್ರಿ ಕಿಡಿಗೇಡಿಗಳು ಪ್ರತಿಮೆಯನ್ನು ವಿರೋಪಗೊಳಿಸಿ, ವಿಕೃತಿ ಮೆರೆದಿದ್ದಾರೆ. ದೇಶಕ್ಕಾಗಿ ಬಲಿದಾನವಾದ ಮಹನೀಯರ ಮೇಲೆ ವಿಕೃತಿ ಮೆರೆದಿರುವುದು ಖಂಡನೀಯ. ದುಷ್ಕರ್ಮಿಗಳನ್ನ ತಕ್ಷಣವೇ ಬಂಧಿಸಬೇಕು. ಕಾನೂನು ರೀತ್ಯಾ ಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಯಣ್ಣ ಒಂದು ಸಮುದಾಯಕ್ಕೆ ಸೀಮಿತವಲ್ಲ. ಅವರ ತತ್ವ, ಆದರ್ಶ, ಹೋರಾಟದ ಹಾದಿ ಎಲ್ಲರಿಗೂ ಸಲ್ಲುವಂತದ್ದು. ಇಂತಹ ಮಹನೀಯರಿಗೆ ಅಪಮಾನ ಮಾಡುವುದು ಸೂಕ್ತವಲ್ಲ. ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...