ಮಂಡ್ಯ | ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ವಿದ್ಯಾರ್ಥಿನಿ ಆತ್ಮಹತ್ಯೆ

Date:

ತಮ್ಮ ಅಪ್ರಾಪ್ತ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಶೇಖ್‌ ಅಕೀಬ್‌ ಎಂಬಾತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಂಡ್ಯ ನಿವಾಸಿ ಸುಲ್ತಾನ ಖಾನಂ ಮನವಿ ಮಾಡಿದ್ದರು. ಆದರೆ ತಮ್ಮ ಅಪ್ರಾಪ್ತ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಂಡ್ಯ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದ್ದು, “ನಾನು ಮತ್ತು ನನ್ನ ಗಂಡ ಆಶ್ರಫ್‌ ಖಾನ್‌ ಅವರಿಗೆ ಒಟ್ಟು 3 ಮಂದಿ ಮಕ್ಕಳಿದ್ದು, ಅವರಲ್ಲಿ ಮೊದಲಿಬ್ಬರು ಗಂಡು ಮಕ್ಕಳಾಗಿದ್ದು, ಕೊನೆಯವಳೇ ನನ್ನ ಮಗಳು. ಈಗ ಅವಳು ಮಂಡ್ಯ ಶುಗರ್‌ ಫ್ಯಾಕ್ಟರಿ ಸರ್ಕಲ್‌ ಬಳಿ ಇರುವ ಸೇಂಟ್‌ ಜೋಸೆಫ್‌ ಪ್ರೌಢಶಾಲೆಯಲ್ಲಿ 9 ನೇ ತರಗತಿಯಲ್ಲಿ ಓದುತ್ತಿದ್ದಾಳೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

“ನಮ್ಮ ಮನೆಯಿಂದ ಶಾಲೆಗೆ ಸುಮಾರು ಒಂದೂವರೆ ಕಿಮೀ ಅಂತರ ಇರುವುದರಿಂದ ಶಾಲೆಗೆ ಹೋಗಿ ಬರಲು ಸೈಕಲ್‌ ತೆಗೆದು ಕೊಟ್ಟಿದ್ದೇವೆ. ಹಾಗಾಗಿ ನನ್ನ ಮಗಳು ಸೈಕಲ್‌ನಲ್ಲಿ ಶಾಲೆಗೆ ಓಡಾಡುತ್ತಾಳೆ. ಈ ವೇಳೆ ಶೇಖ್‌ ಅಕಿಬ್‌ ಎಂಬಾತ ಮಂಡ್ಯ ಸಿಟಿ ಸಬ್ಬರಿಯಾಬಾದ್‌ ಮೊಹಲ್ಲಾ ನಿವಾಸಿಯಾಗಿದ್ದು, ಸುಮಾರು 9 ತಿಂಗಳುಗಳಿಂದ ನನ್ನ ಮಗಳ ಸ್ಕೂಲ್‌ ಬಳಿ ಹೋಗಿ ನನ್ನ ಮಗಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದು, ನೀನು ನನ್ನನ್ನು ಪ್ರೀತಿಸದೇ ಹೋದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಹೆದರಿಸಿ, 14 ವರ್ಷದ ನನ್ನ ಮಗಳನ್ನು ತನ್ನ ಕಾರಿನಲ್ಲಿ ಕೂರಿಸಿಕೊಂಡು ಓಡಾಡುತ್ತಿದ್ದಾನೆ” ಎಂದು ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ 3

“ನನ್ನ ಮಗಳನ್ನು ಕರೆದುಕೊಂಡು ಓಡಾಡುತ್ತಿರುವುದನ್ನು ನಾನೇ ನನ್ನ ಕಣ್ಣಾರೆ ಕಂಡಿದ್ದೇನೆ. ಬಳಿಕ ಅವರ ಮನೆಯವರನ್ನು ಪತ್ತೆ ಹಚ್ಚಿ ಅವರ ತಾಯಿ ಮತ್ತು ಅಕ್ಕನನ್ನು ಕರೆಸಿ ಈ ರೀತಿ ಮಾಡದಂತೆ ಬುದ್ದಿವಾದ ಹೇಳಿದ್ದೇನೆ. ಆದರೂ ಶೇಖ್‌ ಅಕಿಬ್‌ ತನ್ನ ದುರ್ವರ್ತನೆ ಬದಲಾಯಿಸಿಕೊಳ್ಳದೆ ನನ್ನ ಅಪ್ರಾಪ್ತ ಮಗಳನ್ನು ಪೀಡಿಸುವುದು, ಛೇಡಿಸುವುದು, ಹಲವು ಫೋನ್‌ ನಂಬರ್‌ಗಳಿಂದ ಫೋನ್‌ ಮಾಡಿ ಪ್ರೀತಿಸುವಂತೆ ಪೀಡಿಸುತ್ತಿದ್ದಾನೆ” ಎಂದು ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಜ. 31ರಂದು ‘ಪ್ರಾದೇಶಿಕ ಭಾಷೆಗಳಲ್ಲಿ ವಿಜ್ಞಾನ ಸಂವಹನ’ ಕುರಿತು ವಿಚಾರ ಸಂಕಿರಣ

“ನನ್ನ ಮಗಳನ್ನು ಪೀಡಿಸುವುದಲ್ಲದೇ ಫೋನ್‌ ಪೇ ಅಕೌಂಟ್‌ಗೆ ಹಣ ಹಾಕುವುದು ಮಾಡುತ್ತಿದ್ದಾನೆ. ಈ ಹಣವನ್ನು ಅವನಿಗೆ ಹಿಂತಿರುಗಿಸಿದರೂ ಕೂಡ ಮತ್ತೆ ಮತ್ತೆ ಹಣವನ್ನು ಹಾಕುತ್ತಿದ್ದಾನೆ. ಇದು ನನ್ನ ಮಗಳಿಗೆ ಮತ್ತು ನಮ್ಮ ಕುಟುಂಬಕ್ಕೆ ತೊಂದರೆ ಕೊಡುವ ದುರುದ್ದೇಶವೇ ಆಗಿದೆ. ನನ್ನ ಅಪ್ರಾಪ್ತ ಮಗಳಿಗೆ ಶೇಖ್‌ ಅಕಿಬ್‌ ಹೆದರಿಸಿ ಬೆದರಿಸಿ ಪೀಡಿಸುತ್ತಿದ್ದಾನೆ. ಹಾಗಾಗಿ ಈತನ್ನು ಕೂಡಲೇ ಬಂಧಿಸಿ ಈತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ನನ್ನ ಮಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು” ಎಂದು ಮನವಿ ಮಾಡಿದ್ದರು.

ಇದರೆಲ್ಲದರ ನಡುವೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ತಪ್ಪಿತಸ್ಥನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...