ಮಂಡ್ಯ | ರೀಲ್ಸ್‌ ಮಾಡುತ್ತಿದ್ದ ಪತ್ನಿಯ ಮೇಲೆ ಅನುಮಾನ; ಯುವತಿಯನ್ನು ಕೊಂದ ದುರುಳ ಪತಿ

Date:

ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್‌ ಮಾಡುತ್ತಿದ್ದ ಪತ್ನಿಯ ನಡತೆ ಮೇಲೆ ಅನುಮಾನಗೊಂಡಿದ್ದ ದುರುಳ ಪತ್ನಿಯೊಬ್ಬ ಆಕೆಯನ್ನು ಹತ್ಯೆಗೈರುವ ದುರ್ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯ ಕೃತ್ಯಕ್ಕೆ ಹತ್ಯೆಗೊಳಗಾದ ಯುವತಿಯ ತಂದೆಯೂ ಸಹಕಾರ ನೀಡಿದ್ದಾನೆ ಎಂದು ತಿಳಿದುಬಂದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯಕೊಪ್ಪಲು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಒಂದೇ ಗ್ರಾಮದವರಾಗಿದ್ದ ಮೃತ ಪೂಜಾ ಮತ್ತು ಆಕೆಯ ಪತಿ, ಆರೋಪಿ ಶ್ರೀನಾಥ್ ಪರಸ್ಪರ ಪ್ರೀತಿಸಿ ಒಂಬತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು. ಪೂಜಾ ಅವರು ಆಗ್ಗಾಗ್ಗೆ ರೀಲ್ಸ್‌ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದರು. ಇದರಿಂದ ಪೂಜಾಳ ನಡತೆ ಬಗ್ಗೆ ಶಂಕಿಸಿದ್ದ ಆರೋಪಿ ಶ್ರೀನಾಥ್, ಆಕೆ ವಿವಾಹೇತರ ಸಂಬಂಧ ಹೊಂದಿರಬಹುದು ಎಂದು ಅನುಮಾನ ಪಡುತ್ತಿದ್ದ. ಆಗಸ್ಟ್‌ 7ರಂದು ಗಲಾಟೆ ಮಾಡಿ, ಆಕೆಯ ದುಪ್ಪಟ್ಟದಿಂದ ಆಕೆಯ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಕೊಲೆ ಬಗ್ಗೆ ತನ್ನ ಮಾವ (ಪೂಜಾಳ ತಂದೆ) ದೊರೆಸ್ವಾಮಿಗೆ ತಿಳಿಸಿದ್ದಾನೆ.

ನಂತರ ಮಾರನೇ ದಿನ (ಆಗಸ್ಟ್‌ 8) ಆರೋಪಿ ಶ್ರೀನಾಥ್ ಮತ್ತು ಮಾವ ದೊರೆಸ್ವಾಮಿ ಇಬ್ಬರೂ ಸೇರಿ ತರಕಾರಿ ತುಂಬುವ ಬ್ಯಾಗ್​​ನಲ್ಲಿ ಪೂಜಾಳ ದೇಹವನ್ನು ತುಂಬಿಕೊಂಡು ಮನೆಯಿಂದ ಒಂದು ಕಿಲೋ ಮೀಟರ್ ದೂರದಲ್ಲಿರೋ ಕಾವೇರಿ ನದಿಗೆ ಕೊಂಡೊಯ್ದಿದ್ದಾರೆ. ಅಲ್ಲಿ, ಮೃತದೇಹಕ್ಕೆ ಕಲ್ಲು ಕಟ್ಟಿ ನದಿಗೆ ಎಸೆದಿದ್ದಾರೆ. ಆ ಜಾಗದಲ್ಲಿ ಹೆಚ್ಚು ಮೊಸಳೆಗಳಿದ್ದು, ಮೊಸಳೆಗಳು ಮೃತದೇಹವನ್ನು ತಿಂದುಹಾಕುತ್ತವೆ ಎಂದು ದುರುಳರು ಭಾವಿಸಿದ್ದರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಬುಧವಾರ ಆಕೆಯ ಮೃತದೇಹ ನದಿ ದಡದಲ್ಲಿ ಕಂಡುಬಂದಿದೆ. ಮೃತದೇಹವನ್ನು ನೋಡಿದ ಫಾರೆಸ್ಟ್ ಗಾರ್ಡ್ ಒಬ್ಬರು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರನ್ನೂ ಬಂಧಿಸಿದ್ದಾರೆ. ಅರಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...