ಮಂಡ್ಯ | ಆಯ ತಪ್ಪಿ ನಾಲೆಗೆ ಉರುಳಿದ ಬೈಕ್‌; ವಿದ್ಯಾರ್ಥಿಗಳು ಸಾವು

Date:

  • ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್‌
  • ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ನಿಯಂಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿಯಾದ ಪರಿಣಾಮ, ಇಬ್ಬರು ವಿದ್ಯಾರ್ಥಿಗಳು ನಾಲೆಗೆ ಬಿದ್ದು ಮೃತಪಟ್ಟಿರುವ ಘಟನೆ ಮಂಡ್ಯ ತಾಲೂಕಿನ ಭೂತನಹೊಸೂರು ಬಳಿ ನಡೆದಿದೆ.

ಪ್ರಜ್ವಲ್ (18) ಮತ್ತು ವರುಣ್ (14) ಮೃತ ವಿದ್ಯಾರ್ಥಿಗಳು. ಪ್ರಜ್ವಲ್ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುತ್ತಿದ್ದರೆ, ವರುಣ್ ಏಳನೇ ತರಗತಿ ವಿದ್ಯಾರ್ಥಿಯಾಗಿದ್ದ.

ಭೂತನಹೊಸೂರು ಗ್ರಾಮದಿಂದ ಮಂಡ್ಯಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಬೈಕ್‌ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಯ ಕಾಲುವೆಗೆ ಬಿದ್ದಿದೆ. ವರುಣ್ ಹಿಂಬದಿ ಕುಳಿತಿದ್ದು, ಆತನೂ ಕಾಲುವೆಗೆ ಬಿದ್ದಿದ್ದಾನೆ. ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಜೇನು ದಾಳಿ; ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಎಸ್‌ಪಿ ಸಿ ಇ ತಿಮ್ಮಯ್ಯ, ಡಿವೈಎಸ್‌ಪಿ ಓಂಪ್ರಕಾಶ್, ಇನ್ಸ್‌ಪೆಕ್ಟರ್ ಸಿದ್ದಪ್ಪ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶವಗಳನ್ನು ಹೊರತೆಗೆದಿದ್ದಾರೆ. ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...