ಮಂಡ್ಯ | ಸಾಹಿತ್ಯೇತರರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿಸುವ ಹುನ್ನಾರ; ಅ.22ರಂದು ಸಾಹಿತ್ಯ ವಲಯದಿಂದ ಪ್ರತಿರೋಧಕ್ಕೆ ಕರೆ

Date:

ಸಾಹಿತ್ಯೇತರರನ್ನು ಸಮ್ಮೇಳನಾಧ್ಯಕ್ಷರನ್ನಾಗಿಸುವ ಹುನ್ನಾರದ ವಿರುದ್ಧ ನಾಡಿನ ಸಾರ್ವಜನಿಕರು ಮತ್ತು ಸಾಹಿತ್ಯ ವಲಯ ಅಕ್ಟೋಬರ್‌ 22ರ ಮಂಗಳವಾರ ಬೆಳಿಗ್ಗೆ 11ಕ್ಕೆ ಮಂಡ್ಯದಲ್ಲಿ ಸಾಮೂಹಿಕ ಪ್ರತಿರೋಧಕ್ಕೆ ಕರೆ ನೀಡಿದೆ.

ಸಾಹಿತ್ಯ ವಲಯದಿಂದ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದು, “ಅಕ್ಟೋಬರ್‌ 22ರ ಮಂಗಳವಾರ 11.30ಕ್ಕೆ ಮಂಡ್ಯದ ಪತ್ರಕರ್ತರ ಸಂಘದಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿದ್ದು, ಜಿಲ್ಲೆಯ ಹಿರಿಯ ಸಾಹಿತಿಗಳು ಮಾತನಾಡಲಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಕಾಲ್ನಡಿಗೆಯಲ್ಲಿ ಸಾಹಿತ್ಯಾಸಕ್ತರ ಮೌನ ಮೆರವಣಿಗೆ ಸಾಗಲಿದೆ. 12.30ಕ್ಕೆ ಜಿಲ್ಲಾಧಿಕಾರಿ ಮೂಲಕ ನಾಡಿನ ಮುಖ್ಯಮಂತ್ರಿಗಳಿಗೆ ನಮ್ಮ ಹಕ್ಕೊತ್ತಾಯದ ಪತ್ರ ಸಲ್ಲಿಸಲಿದ್ದೇವೆ. ಕನ್ನಡ ನಾಡಿನ ಸಾಹಿತ್ಯಾಸಕ್ತ ಗೆಳೆಯರೆಲ್ಲರೂ ಜತೆಗೂಡಿ” ಎಂದು ಆಹ್ವಾನಿಸಿದ್ದಾರೆ.

ಹೋರಾಟ ಬೆಂಬಲಿಸುವವರು ಅಕ್ಟೋಬರ್‌ 22ರ ಮಂಗಳವಾರ ಬೆಳಿಗ್ಗೆ 11ಕ್ಕೆ ಮಂಡ್ಯ ಪತ್ರಕರ್ತರ ಸಂಘದಲ್ಲಿ ಸೇರಲು, ಮತ್ತೊಬ್ಬರಿಗೆ ವಿಚಾರವನ್ನು ದಾಟಿಸಿ ಹೆಚ್ಚಿನ ಜನರನ್ನು ಕರೆ ತರಲು ಕರೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಹಿತ್ಯದ ಪರಿಚಾರಿಕೆಗೆ ಜನ್ಮತಾಳಿದ ಕನ್ನಡ ಸಾಹಿತ್ಯ ಪರಿಷತ್ತನ್ನು ಮುನ್ನಡೆಸಬೇಕಾದವರು ಸಾಹಿತಿಗಳೇ ಹೊರತು ರಾಜಕಾರಣಿಗಳೋ, ಮಠಾಧೀಶರೋ ಅಥವಾ ಇತರ ಕ್ಷೇತ್ರದ ಸಾಧಕರೋ ಅಲ್ಲ. ಅವರಿಗೆ ಮೀಸಲಾದ ಬೇರೆ ವೇದಿಕೆಗಳಿವೆ. ಈವರೆಗೂ ನಡೆದುಕೊಂಡು ಬಂದ ಪರಂಪರೆಗೆ ಬೆನ್ನು ತಿರುಗಿಸಿ ಸಾಹಿತಿಗಳನ್ನೇ ಹೊರಗಿಟ್ಟು ಸಮ್ಮೇಳನ ನಡೆಸುವ ಕೆಟ್ಟ ಸಂಪ್ರದಾಯಕ್ಕೆ ಮುನ್ನುಡಿ ಬರೆಯಲು ನಾವು ಬಿಡುವುದಿಲ್ಲ. ಸಾಹಿತ್ಯಾಸಕ್ತಿಗಳ ಮೇಲೆ ನಡೆಯುತ್ತಿರುವ ಈ ದಬ್ಬಾಳಿಕೆಯ ವಿರುದ್ದ ಸಾಹಿತ್ಯ ವಲಯದ ನಾವೆಲ್ಲರೂ ಒಟ್ಟಾಗಿ‌ ನಿಲ್ಲುತ್ತಿದ್ದೇವೆ.

ಕುವೆಂಪು ಮೆಚ್ಚಿದ, ನಾಲ್ವಡಿ ಹರಸಿದ, ಕೆವಿ ಶಂಕರಗೌಡ ಕಟ್ಟಿದ ಮಂಡ್ಯದ ನೆಲದಲ್ಲಿ ಈಗಾಗಲೇ ಎರಡು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ಘನತೆಯಿಂದ ಜರುಗಿವೆ. 1964ರಲ್ಲಿ ಜಯದೇವಿತಾಯಿ ಲಿಗಾಡೆ, 1994ರಲ್ಲಿ ಚದುರಂಗರ ಅಧ್ಯಕ್ಷತೆಯಲ್ಲಿ ಇಡೀ ನಾಡು ಕೊಂಡಾಡುವಂತೆ ನಮ್ಮ ಮಂಡ್ಯ ಜಿಲ್ಲೆ ಆತಿಥ್ಯ ವಹಿಸಿ, ಸಮ್ಮೇಳನವನ್ನು ಅರ್ಥಪೂರ್ಣವಾಗಿ ನಡೆಸಿಕೊಟ್ಟಿದೆ. ಈ ಇತಿಹಾಸಕ್ಕೆ ಕಪ್ಪು ಚುಕ್ಕೆ ಇಡಲು ಮಂಡ್ಯದ ಜನರು ನಾವು ಬಿಡುವುದಿಲ್ಲ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ʼಗೃಹಲಕ್ಷ್ಮಿʼ ಯೋಜನೆ ಹಣ ಕೂಡಿಟ್ಟು ಎತ್ತು ಖರೀದಿಸಿದ ರೈತ ಮಹಿಳೆ

ಈಗ ಒಂದೆಡೆ ಸಮ್ಮೇಳನಾಧ್ಯಕ್ಷತೆಗೆ ಸಾಹಿತ್ಯೇತರರನ್ನು ಮುನ್ನೆಲೆಗೆ ತಂದು, ಇನ್ನೊಂದೆಡೆ ನಾಡಿನ ವಿದ್ವಾಂಸರ ಮಾತಿಗೆ ಗೌರವ ಕೊಡದೆ ಅವಮಾನ ಮಾಡಲಾಗುತ್ತಿದೆ. ಏಳು ಕೋಟಿ ಕನ್ನಡಿಗರ ಸಾಹಿತ್ಯ ಸಮ್ಮೇಳನವನ್ನು ಏಕಮುಖವಾಗಿ ಕೊಂಡೊಯ್ಯಲಾಗುತ್ತಿದೆ. ಇದೆಲ್ಲದರ ವಿರುದ್ಧ ನಾಳೆ ನಮ್ಮ ಪ್ರತಿರೋಧವಿರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...