ಮಂಡ್ಯ | ಸಮೀಕ್ಷೆ ವಿರೋಧಿಸುತ್ತಿರುವವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ

Date:

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ಸೇರಿದಂತೆ ಇತರೆ ರಾಜಕೀಯ ಪಕ್ಷಗಳ ನಾಯಕರು ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯಗಳ ಸಾಮಾಜಿಕ ನ್ಯಾಯದ ವಿರೋಧಿಗಳಾಗಿದ್ದಾರೆ ಎಂದು ಜಾಗೃತ ಕರ್ನಾಟಕ ಮಂಡ್ಯ ಜಿಲ್ಲಾ ಘಟಕ ಕಿಡಿಕಾರಿದೆ.

ಮಂಡ್ಯದಲ್ಲಿ ಜಾಗೃತ ಕರ್ನಾಟಕ ಸಂಚಾಲಕರಾದ ಎನ್ ನಾಗೇಶ್ ಹಾಗೂ ಪೃಥ್ವಿರಾಜ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, “ಭಾರತದಲ್ಲಿ ಜಾತಿ ವ್ಯವಸ್ಥೆ ವಾಸ್ತವ. ಅದೇ ರೀತಿ ಕೆಲವೇ ಕೆಲವು ಜಾತಿಗಳು ಮುಂದುವರೆದಿರುವುದು ಮತ್ತು ಹಲವು ಜಾತಿಗಳು ಹಿಂದುಳಿದಿರುವುದೂ ಕೂಡ ವಾಸ್ತವವೇ. ಅದಕ್ಕಾಗಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಔದ್ಯೋಗಿಕವಾಗಿ ಯಾವ ಜಾತಿಗಳು ಎಷ್ಟು ಹಿಂದುಳಿದಿವೆ? ಎಷ್ಟು ಮುಂದುವರೆದಿವೆ? ಎನ್ನುವುದನ್ನು ಕಾಲಕಾಲಕ್ಕೆ ಅಧ್ಯಯನ ಮಾಡಬೇಕು. ಅದಕ್ಕಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಈ ಸಮೀಕ್ಷೆ ಆಧಾರದ ಮೇಲೆ ಸರ್ಕಾರಗಳು ನೀತಿ-ನಿರೂಪಣೆ ರೂಪಿಸಬೇಕು. ಜತೆಗೆ ಸಾಮಾಜಿಕ ನ್ಯಾಯವನ್ನು ಜಾರಿ ಮಾಡಲು ಪ್ರಯತ್ನಿಸಬೇಕು. ಆದರೆ ಇಂತಹ ಸಮೀಕ್ಷೆಗೆ ಕೆಲವರು ಅಡ್ಡಗಾಲು ಹಾಕುತ್ತಿರುವುದು ಸಾಮಾಜಿಕ ನ್ಯಾಯದ ವಿರೋಧಿ ನಡೆಯಾಗಿದೆ” ಎಂದು ಖಂಡಿಸಿದರು.

ಸರ್ವೋಚ್ಚ ನ್ಯಾಯಾಲಯವು(ಮಂಡಲ್ ಕೇಸಿನಲ್ಲಿ) ಎಲ್ಲ ರಾಜ್ಯಗಳು ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ರಚಿಸಬೇಕೆಂದು ಹೇಳಿದೆ. ಆನಂತರ ಬಂದ ಕಾಯ್ದೆಗಳು ಈ ಆಯೋಗಗಳು ಪ್ರತಿ 10 ವರ್ಷಕ್ಕೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಬೇಕೆಂದು ಹೇಳಿವೆ. ಇದರಿಂದಾಗಿ ಸದ್ಯ ಕರ್ನಾಟಕದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಯು ನ್ಯಾಯಯುತವಾದುದಾಗಿದೆ. ಯಾರೂ ಕೂಡ ಜಾತಿ ಸಮೀಕ್ಷೆಗೆ ವಿರೋಧ ಮಾಡಬಾರದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದುಳಿದ ವರ್ಗಗಳ ಆಯೋಗ ಸಮೀಕ್ಷೆ ನಡೆಸುತ್ತದೆಯಾದರೂ ಅದು ಹಿಂದುಳಿದ ಜಾತಿಗಳನ್ನು ಮಾತ್ರ ಸಮೀಕ್ಷೆಗೆ ಒಳಪಡಿಸುವುದಿಲ್ಲ. ರಾಜ್ಯದ ಎಲ್ಲ ಜಾತಿಗಳನ್ನು ಅಧ್ಯಯನ ನಡೆಸುತ್ತದೆ. ಅದರಿಂದಾಗಿ ಈ ಸಮೀಕ್ಷೆಯಲ್ಲಿ ಸರ್ವ ಸಮುದಾಯಗಳ ಹಿತ ಅಡಗಿದೆ. ಹಿಂದುಳಿದಿರುವ ಜಾತಿಗಳನ್ನು ಗುರುತಿಸಿ ಅವುಗಳ ಬೆಳವಣಿಗೆಗೆ ಅನುಕೂಲವಾಗುವಂಥ ಶಿಫಾರಸುಗಳನ್ನು ಮಾಡುವುದರಿಂದ ಸಹಜವಾಗಿ ಇದರಿಂದ ಹಿಂದುಳಿದಿರುವ ಎಲ್ಲ ಜಾತಿ-ಉಪಜಾತಿಗಳಿಗೆ ಲಾಭವಿದೆ. ಹಾಗಾಗಿ ಜಾತಿ ಸಮೀಕ್ಷೆಗೆ ವಿರೋಧ ಮಾಡುವವರು ಹಿಂದುಳಿದವರ ವಿರೋಧಿಗಳೇ ಆಗಿರುತ್ತಾರೆ. ತಮ್ಮ ವಿರುದ್ಧ ನಡೆಯುತ್ತಿರುವ ಈ ಷಡ್ಯಂತ್ರವನ್ನು ಹಿಂದುಳಿದ ಸಮುದಾಯಗಳು ಎಂದಿಗೂ ಮರೆಯುವುದಿಲ್ಲ” ಎಂದು ತಿಳಿಸಿದರು.

“ಸಾಮಾಜಿಕ ನ್ಯಾಯವನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವುದಕ್ಕಾಗಿಯೇ ಜಾತಿ ಸಮೀಕ್ಷೆ ನಡೆಸಲಾಗುತ್ತದೆ. ಆದುದರಿಂದ ಜಾತಿ ಸಮೀಕ್ಷೆಗೆ ವಿರೋಧ ಮಾಡುವವರು ಸಾಮಾಜಿಕ ನ್ಯಾಯದ ವಿರೋಧಿಗಳು. ನಮ್ಮ ಮತಗಳನ್ನು ತೆಗೆದುಕೊಂಡು ಅಧಿಕಾರ ಪಡೆದು ನಮ್ಮ ವಿರುದ್ಧ ಮಸಲತ್ತು ನಡೆಸುತ್ತಿರುವ ಖಳನಾಯಕರೇ ಸರಿ. ಇಂಥ ಸಮುದಾಯ ಮತ್ತು ನಾಯಕರ ವಿರುದ್ಧ ಹಿಂದುಳಿದ ಸಮುದಾಯಗಳು ಒಗ್ಗಟ್ಟಾಗುತ್ತಿವೆ. ಇದರ ಬಗ್ಗೆ ಎಲ್ಲ ಹಿಂದುಳಿದ ಜಾತಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಸಾಮಾಜಿಕ ನ್ಯಾಯದ ವಿರೋಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುತ್ತದೆ” ಎಂದು ಎಚ್ಚರಿಸಿದರು.

“ಕರ್ನಾಟಕ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಮೀಕ್ಷೆ ವೇಳೆ ಆಗುತ್ತಿರುವ ಸಣ್ಣಪುಟ್ಟ ಲೋಪದೋಷಗಳನ್ನು ಕೂಡಲೇ ಬಗೆಹರಿಸಬೇಕು. ಸಮಯ ಮಿತಿಯೊಳಗೆ ಪೂರ್ಣಗೊಳಿಸುವುದು ಎಷ್ಟು ಮುಖ್ಯವೋ ಅದನ್ನು ಸಮರ್ಪಕವಾಗಿ ನಡೆಸುವುದೂ ಕೂಡಾ ಅಷ್ಟೇ ಮುಖ್ಯ. 2015ರ ಸಮೀಕ್ಷೆ ಬಗ್ಗೆ ಆಕ್ಷೇಪಗಳು ಬಂದು ಕಡೆಗೆ ಸರ್ಕಾರ ಅದನ್ನು ಅಂಗೀಕರಿಸದಿರುವುದು ದುರ್ಬಲ ಸಮುದಾಯಗಳಿಗೆ ಆದ ದೊಡ್ಡ ಅನ್ಯಾಯ. ಮತ್ತೊಮ್ಮೆ ಅಂಥ ಮಹದನ್ಯಾಯ ಆಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಆಯೋಗದ ಮೇಲಿದೆ” ಎಂದರು.

ಇದನ್ನೂ ಓದಿದ್ದೀರಾ? ಈ ದಿನ ವಿಶೇಷ ವರದಿ | ವಿಧಾನಸೌಧದ ಬಳಿಕ ಪ್ರವಾಸಿಗರ ವೀಕ್ಷಣೆಗೆ ಬಾಗಿಲು ತೆರೆಯಲಿದೆ ‘ರಾಜಭವನ’!

“ಸಾಮಾಜಿಕ ನ್ಯಾಯಕ್ಕಾಗಿ ಈ ಸಮೀಕ್ಷೆ ಅಗತ್ಯ ಮತ್ತು ಇದರಲ್ಲಿ ಸರ್ವ ಸಮುದಾಯಗಳ ಹಿಂದುಳಿದವರ ಹಿತ ಅಡಗಿದೆ. ಸಮೀಕ್ಷೆ ವಿರೋಧಿಸುವ ಸಾಮಾಜಿಕ ನ್ಯಾಯದ ವಿರೋಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಜಾಗೃತ ಕರ್ನಾಟಕದ ಮಂಡ್ಯ ಘಟಕದ ಸಂಚಾಲಕ‌ರಾದ ಸಂತೋಷ್ ಜಿ, ನಗರಕೆರೆ ಜಗದೀಶ್, ಸುಬ್ರಮಣ್ಯ ಹಾಗೂ ಪ್ರಶಾಂತ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...