ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ನವೆಂಬರ್ 10ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ನಿಷೇಧಾಜ್ಙೆ ಜಾರಿಗೊಳಿಸಿ, ಶನಿವಾರ ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿದ್ದೀರಾ? ಬೆಂಗಳೂರು | ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯಿಂದ ಪುಸ್ತಕ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ
ಭಾನುವಾರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜನರು ಗುಂಪುಗೂಡುವಂತಿಲ್ಲ, ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ, ಯಾವುದೇ ಸಭೆ, ಮೆರವಣಿಗೆ ಮಾಡುವಂತಿಲ್ಲ, ಪಟಾಕಿ ಸಿಡಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.





