ಇತಿಹಾಸ ಬರೆಯಲಿದೆ ಮಂಡ್ಯ | ಸಾಹಿತ್ಯ ಸಮ್ಮೇಳನದಲ್ಲಿ ‘ಬಾಡೂಟ’ ಬಡಿಸಲು ಸಜ್ಜಾದ ನಾಗರಿಕರು

Date:

ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಅಧ್ಯಕ್ಷ ಮಹೇಶ್‌ ಜೋಶಿ ನೀಡಿದ್ದ ಆಹಾರ ತಾರತಮ್ಯದ ಹೇಳಿಕೆ ಮಂಡ್ಯದಲ್ಲಿ ಪ್ರತಿರೋಧದ ಕಿಡಿಹೊತ್ತಿಸಿದೆ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಲಾಗಿದೆ ಎಂಬ ಜೋಶಿ ಹೇಳಿಕೆಯನ್ನು ಖಂಡಿಸಿ, ಸಮ್ಮೇಳನದಲ್ಲಿ ಮಾಂಸಾಹಾರ ನೀಡಬೇಕೆಂದು ಒತ್ತಾಯಿಸಿ ಮಂಡ್ಯದ ಜನರು ಮತ್ತು ವಿವಿಧ ಸಂಘಟನೆಗಳು ಪಟ್ಟು ಹಿಡಿದಿದ್ದಾರೆ. ಸಮ್ಮೇಳನ ನಡೆಸುವವರೇ ಮಾಂಸಾಹಾರ ನೀಡಬೇಕು. ಇಲ್ಲದಿದ್ದರೆ, ನಾವೇ ‘ಮಾಂಸಾಹಾರ’ಬಾಡೂಟ’ ವಿತರಿಸುತ್ತೇವೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ಮಂಡ್ಯದಲ್ಲಿ ಡಿಸೆಂಬರ್ 19ರಿಂದ 22ರವೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಆದರೆ, ಜೋಶಿ ಅವರ ಹೇಳಿಕೆಯು ಆಹಾರ ಪದ್ದತಿಯನ್ನು ಅವಹೇಳನ ಮಾಡುತ್ತಿದೆ. ಹೀಗಾಗಿ, ಅವರ ಹೇಳಿಕೆಯನ್ನು ಹಿಂಪಡೆದು, ಸಮ್ಮೇಳನದಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರ -ಎರಡನ್ನೂ ನೀಡಬೇಕು. ಮಾಂಸಾಹಾರವನ್ನೂ ನೀಡುವ ಮೂಲಕ ಬಹುಜನರ ಆಹಾರ ಸಂಸ್ಕೃತಿಯನ್ನು ಗೌರವಿಸಬೇಕು ಎಂದು ಮಂಡ್ಯದ ಜನರು ಆಗ್ರಹಿಸಿದ್ದಾರೆ.

ಸಮ್ಮೇಳನದಲ್ಲಿ ಮಾಂಸಾಹಾರ ನೀಡಬೇಂಕೆದು ಒತ್ತಾಯಿಸಿ ಹಲವಾರು ವಾಟ್ಸ್‌ಆ್ಯಪ್‌ ಗ್ರೂಪ್‌ಗಳನ್ನೂ ರಚಿಸಲಾಗಿದೆ. ಈ ಗ್ರೂಪ್‌ಗಳಲ್ಲಿ ಸಾವಿರಾರು ಮಂದಿ ಸೇರಿದ್ದಾರೆ. ಶಾಸಕ, ಸಚಿವರನ್ನೂ ಗುಂಪಿಗೆ ಸೇರಿಸಲಾಗಿದೆ. ಸಮ್ಮೇಳನದಲ್ಲಿ ಮಾಂಸಾಹಾರ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಶಾಸಕ, ಸಚಿವರಿಗೆ ಒತ್ತಾಯಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಟ್ಸ್‌ಆ್ಯಪ್‌ ಚರ್ಚೆಯಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಶಾಸಕ ಗಣಿಗ ರವಿ, “ಮಾಂಸಾಹಾರದ ಬಗ್ಗೆ ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್‌ನಲ್ಲಿ ಚರ್ಚಿಸೋಣ” ಎಂದು ಹೇಳಿದ್ದಾರೆ.

ಶಾಸಕರ ಪ್ರತಿಕ್ರಿಯೆಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಂಸಾಹಾರ ನೀಡುವ ಬಗ್ಗೆ ಶಾಸಕರು, ಸಚಿವರು ಹಾಗೂ ಅಧಿಕಾರಿಗಳ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು, ಮಾಂಸಾಹಾರ ಕೇಳುತ್ತಿರುವವರಿಗೆ ಸಮ್ಮೇಳನ ಮುಗಿದ ಬಳಿಕ ‘ಮಾಂಸಾಹಾರ ಕೂಟ’ ಏರ್ಪಡಿಸುತ್ತೇವೆಂದು ಸಮ್ಮೇಳನ ಆಯೋಜಕರು ಹೇಳಿದ್ದಾರೆಂಬ ಮಾತುಗಳು ಕೇಳಿಬಂದಿವೆ. ಆದರೆ, ಇದು ಪಂಕ್ತಿಬೇಧದ ಸೂಚಕವಾಗಿದೆ. ಇಂತಹ ಪಂಕ್ತಿಬೇಧ ಸಲ್ಲದು. ಸಮ್ಮೇಳನದಲ್ಲಿಯೇ ಆಹಾರ ವಿತರಿಸುವಾಗಲೇ ಮಾಂಸಾಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ವರದಿ ಓದಿದ್ದೀರಾ?: ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಆಗ್ರಹ

ಕರ್ನಾಟಕವು ಬಹು ಸಂಸ್ಕೃತಿಯ ನಾಡು. ಬಹುಸಂಖ್ಯಾತರ ಆಹಾರವಾದ ಮಾಂಸಾಹಾರವನ್ನು ಸಮ್ಮೇಳನದಲ್ಲಿ ನೀಡುವುದು ಬಹುತ್ವವನ್ನು ಸೂಚಿಸುತ್ತದೆ. ಬಹುಸಂಖ್ಯಾತರ ಆಹಾರ ಪದ್ದತಿಯನ್ನು ಗೌರವಿಸಿದಂತಾಗುತ್ತದೆ. ಸಮ್ಮೇಳನದ ಇತಿಹಾಸದಲ್ಲಿ ಮಂಡ್ಯದಲ್ಲಿ ನಡೆಯುವ ಸಮ್ಮೇಳನವು ಹೊಸ ಅಧ್ಯಾಯವನ್ನು ಬರೆದಂತಾಗುತ್ತದೆ. ಈ ಹಿಂದೆ, 2018ರಲ್ಲಿ ಮಂಡ್ಯ ದಲ್ಲಿ ನಡೆದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ ನಾಗೇಶ್ ಅವರು ಸಾವಿರಾರು ನೌಕರರಿಗೆ ಬಾಡೂಟ ಹಾಕಿಸಿದ್ದರು. ಕಾರ್ಯಕ್ರಮ ಆಯೋಜಿಸುವವರಿಗೆ ಬಾಡೂಟದ ಆಸಕ್ತಿ ಇದ್ದರೆ, ಎಲ್ಲವೂ ಸಾಧ್ಯ. ಸಾಹಿತ್ಯ ಸಮ್ಮೇಳನದ ಆಯೋಜಕರು ಬಹುಸಂಖ್ಯಾತರ ಆಹಾರದ ಬಗ್ಗೆ ಗೌರವ ತೋರಿಸಬೇಕು. ಮಾಂಸಾಹಾರ ನೀಡಲು ಮನಸ್ಸು ಮಾಡಬೇಕು ಎಂದು ಮಂಡ್ಯದ ನಾಗರಿಕರು ಒತ್ತಾಯಿಸಿದ್ದಾರೆ.

“ಮಾಂಸಾಹಾರವನ್ನು ಮದ್ಯ, ತಂಬಾಕಿಗೆ ಹೋಲಿಸಿದ್ದಾರೆ. ಇದು ಬಹುಸಂಖ್ಯಾತ ಶೂದ್ರ ಸಮುದಾಯಗಳಿಗೆ ಮಾಡುತ್ತಿರುವ ಅಪಮಾನ. ಈ ಶ್ರೇಷ್ಠತೆಯ ವ್ಯಸನ 86 ವರ್ಷಗಳಿಂದ ನಡೆಯುತ್ತಾ ಬರುತ್ತಿದೆ. ನಮ್ಮ ಮಕ್ಕಳ ಕಾಲಕ್ಕೂ ಈ ಪರಂಪರೆ ಮುಂದುವರಿಯುವುದು ಬೇಡ. ಕುವೆಂಪು, ನಾಲ್ವಡಿ ಅತಿ ಹೆಚ್ಚು ಪ್ರೀತಿಸಿದ ನಮ್ಮ ಮಂಡ್ಯದ ನೆಲದಲ್ಲಿ ಬ್ರಾಹ್ಮಣ್ಯ ಮೇಲುಗೈ ಸಾಧಿಸಲು ಬಿಡುವುದಿಲ್ಲ. ಸಮ್ಮೇಳನ ಆಯೋಜಕರು ಮಾಂಸಾಹಾರ ನೀಡದಿದ್ದರೆ, ಸಮ್ಮೇಳನದಲ್ಲಿ ನಾವೇ ಮಾಂಸಾಹಾರ ನೀಡುತ್ತೇವೆ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಂಡ್ಯ ಹೊಸ ಇತಿಹಾಸ ಬರೆಯಲಿದೆ” ಎಂದು ಮಂಡ್ಯ ಬಾಡೂಟ ಬಳಗ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...