ಮಂಡ್ಯ | ವ್ಯಾಪಾರಿ ಮೇಲೆ ಲೇವಾದೇವಿದಾರನಿಂದ ಹಲ್ಲೆ: ಎಫ್ಐಆರ್ ದಾಖಲಿಸಲು ಪೊಲೀಸರಿಂದ ಮೀನಮೇಷ!

Date:

ಮಂಡ್ಯ ನಗರದ ಬಟ್ಟೆ ವ್ಯಾಪಾರಿಯೊಬ್ಬರ ಮೇಲೆ ಕಳೆದ ನ.6ರಂದು ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಈ ಬಗ್ಗೆ ಮಂಡ್ಯ ಪೊಲೀಸರಿಗೆ ದೂರು ನೀಡಿದ್ದರೂ, ಎಫ್ಐಆರ್ ದಾಖಲಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಮಂಡ್ಯ ನಗರದ ಕೆ.ಆರ್.ರಸ್ತೆಯಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದ ವಾಸೀಂವುಲ್ಲಾ ಷರೀಫ್ ಎಂಬಾತನ ಮೇಲೆ ಲೇವಾದೇವಿದಾರ ರಘು ಎಂಬಾತ ಹಲ್ಲೆ ನಡೆಸಿರುವ ಬಗ್ಗೆ ಹಲವು ದಾಖಲಾತಿಗಳ ಜತೆಯಲ್ಲಿ ಮಂಡ್ಯದ ಪಶ್ಚಿಮ ಠಾಣೆಗೆ ದೂರು ನೀಡಲಾಗಿದೆ. ಆದರೆ ಪೊಲೀಸರು ಎಫ್ಐಆರ್ ದಾಖಲಿಸದೇ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆಂಬ ಮಾಹಿತಿಯನ್ನು ಸಂಬಂಧಿತ ವಕೀಲರು ಈ ದಿನ.ಕಾಮ್ ಜೊತೆ ಮಾತನಾಡಿ ನೀಡಿದ್ದಾರೆ.

ಮಂಡ್ಯದಲ್ಲಿ ಬಡ್ಡಿ, ಲೇವಾದೇವಿ ಅಕ್ರಮ ದಂಧೆ ಯಾವುದೇ ಕಡಿವಾಣ ಇಲ್ಲದೆ ಜರುಗುತ್ತಿದೆ. ಆದರೆ ಇಂತಹ ಅಕ್ರಮ ದಂಧೆ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಪೊಲೀಸರು ಕಣ್ಮಚ್ಚಿ ಕುಳಿತಿದ್ದಾರೆಂದು ಹಲ್ಲೆಗೊಳಗಾದ ವಾಸೀಂವುಲ್ಲಾ ಷರೀಫ್ ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಘು ಸಾಲವಾಗಿ ಹಣವನ್ನು ನೀಡಿದ ಸಂದರ್ಭದಲ್ಲಿ ಖಾಲಿ ಚೆಕ್‌ಗಳನ್ನು ಪಡೆದಿದ್ದಾನೆ. ಆದರೆ ಸಾಲ ತೀರಿಸಿದ ನಂತರವೂ ಖಾಲಿ ಚೆಕ್‌ಗಳನ್ನು ನೀಡದೇ, ಇನ್ನೂ ಸಾಲ ಬಾಕಿ ಉಳಿದಿದೆ, ತೀರಿಸು ಎಂದು ಅವಾಚ್ಯ ಶಬ್ದಗಳಿಂದ ಬೈದು, ಒತ್ತಡ ಹೇರುತ್ತಿದ್ದಾನೆ, ಹಾಗೇ ಹಣ ವಸೂಲಿ ನೆಪದಲ್ಲಿ ಬಂದಿದ್ದು, ಈ ಸಂದರ್ಭದಲ್ಲಿ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆಂದು ಆರೋಪಿಸಿದ್ದಾರೆ.

ರಘು ತನ್ನ ಮೇಲೆ ಬಲವಾಗಿ ಹಲ್ಲೆ ನಡೆಸಿದ ಬಗ್ಗೆ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಎಂ.ಎಲ್.ಸಿ ದಾಖಲಿಸಿ, ದೂರು ನೀಡಿದ್ದರೂ, ರಘು ಮೇಲೆ ಎಫ್ಐಆರ್ ದಾಖಲಿಸಲು ಪೊಲೀಸರು ಮೀನಮೇಷ ಎಣಿಸುತ್ತಿದ್ದಾರೆಂದು ವಾಸೀಂವುಲ್ಲಾ ಷರೀಫ್ ತಿಳಿಸಿದ್ದು, ಪೊಲೀಸರು ಕೂಡಲೇ ಎಫ್ಐಆರ್ ದಾಖಲಿಸಿ ಆರೋಪಿ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ಹಿಂದಕ್ಕೆ ಚಲಿಸಿ ಗ್ಯಾರೇಜಿಗೆ ನುಗ್ಗಿದ ಗ್ರಾನೈಟ್‌ ತುಂಬಿದ್ದ ಲಾರಿ: ಕೂದಲೆಳೆ ಅಂತರದಲ್ಲಿ ಇಬ್ಬರು ಪಾರು!

ಹಲ್ಲೆ ಸಂಬಂಧ ಮಂಡ್ಯ ಪಶ್ಚಿಮ ಠಾಣೆಯಲ್ಲಿ ದೂರನ್ನು ಹಲ್ಲೆಗೊಳಗಾದ ಬಟ್ಟೆ ವ್ಯಾಪಾರಿ ವಕೀಲರ ಜೊತೆಗೆ ಹೋಗಿ ದಾಖಲು ಮಾಡಿರುತ್ತಾನೆ. ಆ ಪ್ರಕರಣದಲ್ಲಿ ಇನ್ನೂ ಎಫ್ಐಆರ್ ದಾಖಲಾಗದಿರುವುದು ಅಚ್ಚರಿಯ ಸಂಗತಿ. ಇದುವರೆಗೆ ಎಫ್‌ಐಆರ್ ದಾಖಲು ಆಗದಿರಲು ಕಾರಣ ಏನು? ಪಶ್ಚಿಮ ಠಾಣೆಯ ಪೊಲೀಸರು ಉತ್ತರಿಸಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...