ಮಂಡ್ಯ | ಸೀಟ್ ಬೆಲ್ಟ್ ಧರಿಸದ ಚಾಲಕನಿಗೆ ₹18 ಸಾವಿರ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು!

Date:

ಸೀಟ್ ಬೆಲ್ಟ್ ಧರಿಸದೇ ಪದೇ ಪದೇ 36 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ಗೂಡ್ಸ್ ವಾಹನದ ಚಾಲಕನಿಗೆ ಮಂಡ್ಯದ ಸಂಚಾರಿ ಪೊಲೀಸರು ಬರೋಬರಿ 18 ಸಾವಿರ ರೂ. ದಂಡ ವಿಧಿಸಿದ್ದಾರೆ.

ಮೈಸೂರು ನಗರದ ನೋಂದಣಿ ಹೊಂದಿದ್ದ ಗೂಡ್ಸ್ ವಾಹನದ ಮೂಲಕ ಗ್ಯಾಸ್ ಸಿಲಿಂಡರ್‌ಗಳನ್ನು ನಗರದಲ್ಲಿ ಸರಬರಾಜು ಮಾಡಲಾಗುತ್ತಿತ್ತು. ಚಾಲಕ ಪ್ರತಿ ಬಾರಿಯು ವಾಹನ ಚಲಾಯಿಸುವ ಸಂದರ್ಭದಲ್ಲಿ 36 ಬಾರಿಯೂ ಸೀಟ್ ಬೆಲ್ಟ್ ಹಾಕದೇ ಇರುವುದು ಮಂಡ್ಯ ನಗರದಲ್ಲಿ ಟ್ರಾಫಿಕ್ ಪೊಲೀಸರು ಅಳವಡಿಸಿದ್ದ ಸಿ.ಸಿ.ಕ್ಯಾಮೆರಾಗಳಲ್ಲಿ ದಾಖಲಾಗಿತ್ತು.

ಇಂದು ಕೂಡ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಪದೇ ಪದೇ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಚಾಲಕನಿಗೆ ಬರೋಬ್ಬರಿ 18 ಸಾವಿರ ದಂಡ ವಿಧಿಸಿ, ಸಂಚಾರಿ ನಿಯಮಗಳನ್ನು ಪಾಲಿಸಿ, ರಸ್ತೆಯಲ್ಲಿ ಜಾಗರೂಕತೆಯಿಂದ ವಾಹನ ಚಲಾಯಿಸುವಂತೆ ತಿಳುವಳಿಕೆ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ಬಾರಿಯ ನಿಯಮ ಉಲ್ಲಂಘನೆಗೆ ತಲಾ 500 ರೂ. ದಂಡದಂತೆ 36 ಬಾರಿಯ ಉಲ್ಲಂಘನೆಗೆ ಒಟ್ಟು 18,000 ಸಾವಿರ ರೂ. ದಂಡವನ್ನು ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚಾಲಕ ಮಂಗಳವಾರ 18 ಸಾವಿರ ರೂ. ದಂಡ ಪಾವತಿಸಿ, ರಶೀದಿ ಪಡೆದಿದ್ದಾರೆಂದು ಮಂಡ್ಯ ಸಂಚಾರಿ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ್ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ದಂಡ ಕಟ್ಟಿದ ಸವಾರನಿಗೆ ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿ, ಸಂಚಾರಿ ನಿಯಮಗಳನ್ನು ಪಾಲಿಸಿ, ರಸ್ತೆಯಲ್ಲಿ ಜಾಗರೂಕತೆಯಿಂದ ವಾಹನ ಚಲಾಯಿಸುವಂತೆ ತಿಳುವಳಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...