ಮಂಡ್ಯ | ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಆಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

Date:

ಕೇಂದ್ರ ಸಂಘದ ವತಿಯಿಂದ ಸೆ.2ರಂದು ಕೈಗೊಂಡ ಸರ್ವಾನುಮತದ ತೀರ್ಮಾನದಂತೆ ವಿವಿಧ ಬೇಡಿಕೆಗಳು ಈಡೇರುವವರೆಗೆ ಸೆ.26ರಿಂದ ಮುಷ್ಕರ ಹಮ್ಮಿಕೊಂಡಿದ್ದೇವೆ. ಎಲ್ಲಾ ಬಗೆಯ ಮೊಬೈಲ್ ಆ್ಯಪ್ ಹಾಗೂ ವೆನ್ ಅಪ್ಲಿಕೇಷನ್, ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರವನ್ನು ರಾಜ್ಯವ್ಯಾಪಿ ಹಮ್ಮಿಕೊಂಡಿದ್ದೇವೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ಶ್ರೀರಂಗಪಟ್ಟಣ ತಾಲೂಕು ಘಟಕದ ಅಧ್ಯಕ್ಷರಾದ ರಮೇಶ್ ತಿಳಿಸಿದರು.

ಅವರು ಶ್ರೀರಂಗಪಟ್ಟಣದಲ್ಲಿ ಸೆ.26ರ ಗುರುವಾರ ತಾಲೂಕು ಕಚೇರಿ ಮುಂದೆ ನಡೆದ ಗ್ರಾಮ ಆಡಳಿತ ಆಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದರು.

ಗ್ರಾಮ ಆಡಳಿತ ಅಧಿಕಾರಿಗಳಿಗೂ ತಾಂತ್ರಿಕ ಆಧಿಕಾರಿಗಳಂತೆಯೇ ವೇತನ ಶ್ರೇಣಿ ನಿಗದಿ ಮಾಡಬೇಕು. ಗ್ರಾಮ ಕಚೇರಿಗಳಿಗೆ ಮೂಲಭೂತ ಸೌಕರ್ಯಗಳನ್ನು ಸಲ್ಲಿಸಬೇಕು. ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲ ಸೌಲಭ್ಯಗಳನ್ನು ಕೊಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001820500

50 ವರ್ಷಗಳ ಹಿಂದಿನ ಕಾಲದ ಕಛೇರಿಯ ಸಿಬ್ಬಂದಿ ದ್ವಿ.ದ.ಸ/ಪ್ರ.ದ.ಸ/ ಶಿರಸ್ತೇದಾರ್‌ಳ ಹುದ್ದೆಗಳನ್ನು ಹಾಗೂ ಕ್ಷೇತ್ರಮಟ್ಟದಲ್ಲಿನ ಗ್ರಾಮ ಆಡಳಿತ ಅಧಿಕಾರಿಗಳ ವೃತ್ತಗಳನ್ನು/ ಹೋಬಳಿಗಳನ್ನು ಜನಸಂಖ್ಯೆಗೆ ಅನುಗುಣವಾಗಿ ಪರಿಷ್ಕರಿಸಿ ಪುನರ್ವಿಂಗಡಣೆ ಮಾಡಿ ಹೆಚ್ಚುವರಿ ಹುದ್ದೆಗಳನ್ನು ಸೃಜಿಸಬೇಕು. ನಮ್ಮ ಎಲ್ಲ ಬೇಡಿಕೆಗಳನ್ನು ಪರಿಶೀಲಿಸಿ ಶೀಘ್ರವಾಗಿ ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳ ಜಾಬ್ ಚಾರ್ಟ್ ನಿಗದಿಪಡಿಸಿ ಪೊಲೀಸ್ ಇಲಾಖೆಯಲ್ಲಿ ಇರುವಂತೆ ನೂರಾರು ಕೆಲಸಗಳನ್ನು ನಿರ್ವಹಿಸುವ ಕಂದಾಯ ಇಲಾಖೆಯ ಗ್ರಾಮ ಸಹಾಯಕರನ್ನೊಳಗೊಂಡಂತೆ ಎಲ್ಲಾ ನೌಕರರಿಗೆ ಒಂದು ತಿಂಗಳ ವೇತನವನ್ನು ಹೆಚ್ಚುವರಿ ಕೊಡಬೇಕು. ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ/ತೋಟಗಾರಿಗೆ ಇಲಾಖೆಗೆ ನಿರ್ವಹಿಸುವಂತೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

ನಮ್ಮ ಬೇಡಿಕೆಗಳಿಗೆ ತಾಲೂಕು ಆಡಳಿತ ಸ್ಪಂದಿಸದ ಕಾರಣ ಮಂಡ್ಯ ಜಿಲ್ಲೆಯ ಎಲ್ಲ ತಾಲೂಕುಗಳ ಮುಷ್ಕರವನ್ನು ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಮುಂದುವರಿಸಲಿದ್ದೇವೆ. ನಮ್ಮ ಈ ಮುಷ್ಕರಕ್ಕೆ ಜಿಲ್ಲೆಯ ಎಲ್ಲಾ ಕಂದಾಯ ನೌಕರ ಸಿಬ್ಬಂದಿಗಳು ಮುಷ್ಕರದಲ್ಲಿ ಭಾಗವಹಿಸುವ ಮೂಲಕ ಬೆಂಬಲ ನೀಡಿದ್ದಾರೆ ಎಂದರು.

ಈ ಮುಷ್ಕರದಲ್ಲಿ ಆರ್‌ಐಗಳಾದ ರೇವಣ್ಣ, ಅರಕೆರೆ ಪುಟ್ಟಸ್ವಾಮಿ, ಶೆಟ್ಟಿಹಳ್ಳಿ ಮಂಜುನಾಥ್, ಗ್ರಾಮ ಆಡಳಿತ ಅಧಿಕಾರಿಗಳಾದ ಮಹೇಂದ್ರ, ಶ್ರೀಧರ್, ಉಮೇಶ್, ಲಕ್ಕಪ್ಪ, ರಮೇಶ್, ಕತುಜ ಹೊಸಮನಿ, ಲಾವಣ್ಯ, ಪ್ರಿಯಾಂಕ, ದಿವ್ಯ ಇನ್ನೂ ಮುಂತಾದವರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...