ಮಂಡ್ಯ | ತಮಿಳುನಾಡಿಗೆ ನೀರು; ಪ್ರತಿಭಟಿಸಿದ ರೈತರು ಪೊಲೀಸರ ವಶಕ್ಕೆ

Date:

ಕೆಆರ್‌ಎಸ್‌ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಸರ್ಕಾರದ ವಿರುದ್ಧ ಮಂಡ್ಯ ಜಿಲ್ಲೆಯ ರೈತರು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಇಂಡುವಾಳು ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸಿದ ರೈತರು, ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.

ಪ್ರತಿಭಟನೆ ವೇಳೆ ವಾಹನ ತಡೆದಿದ್ದರಿಂದ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪ್ರತಿಭಟನಾನಿರತ ರೈತರನ್ನು ಪೊಲೀಸರು ವಶಕ್ಕೆ ಪಡೆದರು. ಈವೇಳೆ ನಡೆದ ತಳ್ಳಾಟದಲ್ಲಿಐದಾರು ರೈತರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರ ದೌರ್ಜನ್ಯದ ವಿರುದ್ಧ ಬಂದಿತ ರೈತರು ಆಕ್ರೋಶ ವ್ಯಕ್ತಪಡಿಸಿದರು.

“ರೈತರ ಪರ ಸಂಸತ್ತಿನಲ್ಲಿ ದನಿ ಎತ್ತಬೇಕಾದ ಸಂಸದ ಸುಮಲತಾ ಅಂಬರೀಶ್ ಬೀದಿ ಗಿಳಿದು ಹೋರಾಟ ಮಾಡುವ ಮೂಲಕ ರೈತರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಅತ್ತ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದವರು ಬೀದಿಗಿಳಿದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುದ್ದಾರೆ. ಇತ್ತ, ರಾಜ್ಯದ ಕಾಂಗ್ರೆಸ್ ಸರ್ಕಾರ ನೀರನ್ನೆಲ್ಲ ತಮಿಳುನಾಡಿಗೆ ಹರಿಸಿ ಇದೀಗ ಸರ್ವ ಪಕ್ಷ ಸಭೆ ಕರೆದು ರೈತರ ಪರ ಮೊಸಳೆ ಕಣ್ಣೀರು ಸುರಿಸಲು ಮುಂದಾಗಿದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ರೈತಸಂಘದ ಇಂಡುವಾಳು ಚಂದ್ರಶೇಖರ್, ಮಂಜೇಶ್ ಗೌಡ, ಸೊ.ಶಿ. ಪ್ರಕಾಶ್, ಬನ್ನೂರು ನಾರಾಯಣ, ಸಿದ್ದೇಗೌಡ, ಇ.ಬಸವರಾಜ್, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಮೇಶ್ ಗೌಡ ಸೇರಿದಂತೆ ನೂರಾರು ರೈತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...