ಮಂಡ್ಯ | ಕಾವೇರಿ ಆರತಿ ಕೈಬಿಟ್ಟು ವಚನ ಪಸರಿಸುವಂತೆ ʼನಾವು ದ್ರಾವಿಡ ಕನ್ನಡಗರು’ ಸಂಘಟನೆ ಆಗ್ರಹ

Date:

ಕನ್ನಂಬಾಡಿಯಲ್ಲಿ ನಡೆಸಲು ಉದ್ದೇಶಿಸಿರುವ ಕಾವೇರಿ ಆರತಿ ಕಾರ್ಯಕ್ರಮ ಕೈಬಿಟ್ಟು ವಚನಗಳನ್ನು ಪಸರಿಸಲು ಯೋಜನೆ ಹಾಕಿಕೊಳ್ಳಬೇಕೆಂದು ‘ನಾವು ದ್ರಾವಿಡ ಕನ್ನಡಗರು’ ಸಂಘಟನೆ ಮುಖಂಡರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕು ಆಡಳಿತಕ್ಕೆ ಒತ್ತಾಯಿಸಿದರು.

“ಮಂಡ್ಯ ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು ಇಂಡಿಯಾ ಒಕ್ಕೂಟದ ಹಿಂದುಳಿದ ನಾಡುಗಳಾದ ಉತ್ತರಖಂಡ, ಉತ್ತರ ಪ್ರದೇಶಕ್ಕೆ ಭೇಟಿ ನೀಡಿ ಅಸ್ಪೃಶ್ಯತೆ, ಜಾತಿ ಅಸಮಾನತೆ ಹೆಚ್ಚಿಸುವ ಮತ್ತು ನದಿ ನೀರನ್ನು ಕೊಳಕು ಮಾಡುವ ಗಂಗಾರತಿ ಕಾರ್ಯಕ್ರಮ ನೋಡಿಕೊಂಡು ಬಂದು ಅದೇ ಮಾದರಿಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ಆರತಿ ಮಾಡಲು ಮುಂದಾಗಿರುವುದನ್ನು ಸುದ್ದಿ ಪತ್ರಿಕೆಗಳಲ್ಲಿ ನೋಡಿ ಅಚ್ಚರಿಯಾಗಿದೆ. ಅಂತಹ ಕಾರ್ಯಕ್ರಮವನ್ನು ಮಂಡ್ಯದಲ್ಲಿ ನಡೆಸುವುದನ್ನು ಕೈಬಿಡಬೇಕು” ಎಂದು ಮನವಿ ಮಾಡಿದರು.

“ವಿಶ್ವ ಮಾನವ ಕುವೆಂಪು ಹೇಳಿದಂತೆ, ʼಉತ್ತರದ ಕಾಶಿಯಲಿ ಕತ್ತೆ ಮಿಂದೈತರಲು ದಕ್ಷಿಣದ ದೇಶಕದು ಕುದುರೆಯಹುದೆ?, ಗಂಗಾ ಮಾತ್ರ ಯಾಕೆ ಪವಿತ್ರ? ನಮ್ಮ ಮಲೆನಾಡಿನ ತುಂಗಾ ಪವಿತ್ರ ಅಲ್ಲವೇ?ʼ ಎಂಬ ಸಾಲುಗಳನ್ನು ಉಲ್ಲೇಖಿಸಿರುವ ದ್ರಾವಿಡ ಕನ್ನಡಿಗರು, ಈಗಾಗಲೇ ಒಕ್ಕೂಟ ಆಳಿಕೆ ಸರ್ವಾಧಿಕಾರ ಧೋರಣೆಯಿಂದ ಕನ್ನಡನಾಡು, ನುಡಿ ಆಚರಣೆಗಳಿಗೆ ಅವಕಾಶ ಕೊಡದೆ, ಬಡಗ ಇಂಡಿಯಾದ ಹಿಂದಿ ಮತ್ತು ಸಂಸ್ಕೃತ ಆಚರಣೆಗಳ ಹೇರಿಕೆಗೆ ಸಾವಿರಾರು ಕೋಟಿ ವ್ಯಯಿಸುತ್ತಿದೆ. ಇದು ಯಾರೂ ಒಪ್ಪಲಾರದ ನಡೆ. ಈ ಹುನ್ನಾರವನ್ನು ತೆಂಕಣದ ನಾಡುಗಳೆಲ್ಲ ಒಕ್ಕೊರಲಿನಿಂದ ಖಂಡಿಸುತ್ತಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಯಾದಗಿರಿ | ದಲಿತ ಅಪ್ರಾಪ್ತೆಯರ ಅತ್ಯಾಚಾರ, ಕುಟುಂಬಗಳಿಗೆ ಬಹಿಷ್ಕಾರ; ಸವರ್ಣೀಯರ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸ್‌ ಇಲಾಖೆ

“ಕನ್ನಡ ಆಳಿಕೆ ಕೂಡ ಒಕ್ಕೂಟ ನಡೆಯನ್ನು ಖಂಡಿಸಿದೆ. ಹೀಗಿರುವಾಗ, ಕರ್ನಾಟಕ ಸರ್ಕಾರ ಕೂಡ ಬಡಗ ಇಂಡಿಯಾದ ಹಿಂದಿ ಮತ್ತು ಸಂಸ್ಕೃತ ಆಚರಣೆಗಳ ಹೇರಿಕೆಗೆ ಹಣ ವ್ಯಯಿಸುವುದು ತಪ್ಪು ನಡೆಯಾಗಿದೆ. ಇದು ದ್ವಂದ್ವ ನಿಲುವು. ಹಾಗಾಗಿ ಕಾವೇರಿ ಆರತಿ ಕೈಬಿಡಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದರ್ಶನ್, ಬಸವರಾಜ ನಾಯಕ ಹಾಗೂ ಮನುಗೌಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...