ಮಂಡ್ಯ | ಮಹಿಳೆಗೆ ಪೊಲೀಸರಿಂದ ಹಲ್ಲೆ ಆರೋಪ; ಪ್ರಗತಿಪರ, ಮಹಿಳಾ ಸಂಘಟನೆಗಳ ಆಕ್ರೋಶ

Date:

ಮಹಿಳೆಗೆ ಥಳಿಸಿ ದೌರ್ಜನ್ಯ ನಡೆಸಿರುವ ಆರೋಪ ಸಂಬಂಧ ಮಂಡ್ಯ ನಗರದ ಪೂರ್ವ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಯ್ಯನ್ ಗೌಡ ಸೇರಿದಂತೆ ಠಾಣೆಯ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡುವಂತೆ ಒತ್ತಾಯಿಸಿ ಪ್ರಗತಿಪರ ಮಹಿಳಾ ಸಂಘಟನೆಗಳ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಪೂರ್ವ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಮಹಿಳೆ ಮೇಲೆ ದೌರ್ಜನ್ಯ ನಡೆಸಿರುವ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. “ಮಂಡ್ಯದ ಅಶೋಕನಗರದ ಒಂದನೇ ಕ್ರಾಸ್‌ನಲ್ಲಿ ತಮ್ಮ ಮನೆ ಮುಂದೆ ಹಸು ಕಟ್ಟಿ ಹಾಕಿದ್ದ ಮಹಿಳೆ ರೂಪಾದೇವಿ ವಿರುದ್ಧ ಯಾವುದೇ ದೂರು ಇಲ್ಲದಿದ್ದರೂ ಅಮಾಯಕ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬಲವಂತವಾಗಿ ಜೀಪಿಗೆ ಹತ್ತಿಸಿಕೊಂಡು ಠಾಣೆಗೆ ಕರೆತಂದು, ಕೋಣೆಯೊಂದರಲ್ಲಿ ಕೂಡಿ ಹಾಕಿ ಸಬ್ ಇನ್‌ಸ್ಪೆಕ್ಟರ್ ಅಯ್ಯನ್ ಗೌಡ ಮತ್ತು ಸಿಬ್ಬಂದಿ ಮನ ಬಂದಂತೆ ಥಳಿಸಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ” ಎಂದು ಅವರು ಆರೋಪಿಸಿದರು.

“ಮಹಿಳೆ ಮೇಲೆ ಪೊಲೀಸರು ಗೂಂಡಾ ವರ್ತನೆ ತೋರಿರುವುದು ಸಂವಿಧಾನ ವಿರೋಧಿಯಾಗಿದ್ದು, ಮಾನವ ಹಕ್ಕು ಹಾಗೂ ಮಹಿಳೆಯರ ಹಕ್ಕುಗಳನ್ನು ದಮನ ಮಾಡುವ ವರ್ತನೆ ಕಾನೂನು ಬಾಹಿರವಾಗಿದೆ. ರಕ್ಷಣೆ ನೀಡಬೇಕಾದ ಪೊಲೀಸರೇ ಭಕ್ಷಕರಾಗಿದ್ದಾರೆ. ಗೂಂಡಾ ವರ್ತನೆ ಅಕ್ಷಮ್ಯ ಅಪರಾಧವಾಗಿದ್ದು, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ತಲೆತಗ್ಗಿಸುವಂತಹ ಸಂಗತಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಜನಶಕ್ತಿಯ ಪೂರ್ಣಿಮಾ, ಸಿದ್ದರಾಜು, ಮಂಗಲ ಲಂಕೇಶ್ ಸಿಐಟಿಯುನ ಸಿ ಕುಮಾರಿ, ಸಿಪಿಐಎಂ ಪಕ್ಷದ ಟಿ ಎಲ್ ಕೃಷ್ಣೇಗೌಡ, ರೈತ ಸಂಘದ ಸುನಂದ ಜಯರಾಮ್, ಲತಾ ಶಂಕರ್, ರಾಷ್ಟ್ರೀಯ ಭಾರತೀಯ ಮಾನವ ಹಕ್ಕುಗಳ ಸಂಘದ ರಾಧಾಮಣಿ ಬಿ ಪಿ, ಎ ಬಿ ಶಶಿಕಲಾ, ವಿಮೋಚನಾ ಮಹಿಳಾ ಸಂಘಟನೆಯ ಜನಾರ್ದನ, ಸಿದ್ದರಾಜು ಎಂ ಪ್ರತಿಭಟನೆಯಲ್ಲಿ ಇದ್ದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ನಗರಸಭೆ ಸಿಬ್ಬಂದಿಗಳ ವರ್ಗಾವಣೆಗೆ ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹ

ಘಟನೆಗೆ ಸಂಬಂಧಿಸಿದಂತೆ ನಗರದ ಪೂರ್ವ ಪೊಲೀಸ್ ಠಾಣೆಯ ಪಿಎಸ್ಐ ಅಯ್ಯನಗೌಡ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ಆದೇಶಿಸಿದ್ದಾರೆ.

ಸಂತ್ರಸ್ತೆ ರೂಪದೇವಿಯವರ ತಾಯಿ ಗೌರಮ್ಮ ನೀಡಿದ ದೂರಿನನ್ವಯ ಅಯ್ಯನಗೌಡ ವಿರುದ್ಧ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...