ಮಂಡ್ಯ | ಮಹಿಳೆಯರ ಆತ್ಮಹತ್ಯೆ ಪ್ರಕರಣ; ಎಸ್‌ಕೆಡಿಆರ್‌ಡಿಪಿ ವಿರುದ್ಧ ಸಮಗ್ರ ತನಿಖೆಗೆ ಮಹಿಳಾ ಆಯೋಗ ನಿರ್ದೇಶನ

Date:

ಮಹಿಳೆಯರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಕೆಡಿಆರ್‌ಡಿಪಿ(ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ) ವಿರುದ್ಧ ಸಮಗ್ರ ತನಿಖೆ ನಡೆಸುವಂತೆ ಮಹಿಳಾ ಆಯೋಗ ನಿರ್ದೇಶನ ನೀಡಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಲಿಯೂರು ಗ್ರಾಮದ ಮಹಾಲಕ್ಷ್ಮಿ ಎಂಬುವವರು ಧರ್ಮಸ್ಥಳದ ಸಂಘದ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಕುಟುಂಬವನ್ನು ಭೇಟಿ ಮಾಡಿದ ರಾಜ್ಯ ಮಾಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ.

“ಮಹಿಳೆಯ ಸಾವು ನೋವು ಸಂಭವಿಸುತ್ತಿದ್ದರು ಪೊಲೀಸರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪಂಚಾಯಿತಿ ಅಧಿಕಾರಿಗಳು ಏನು ಮಾಡುತ್ತಿದ್ದೀರಿ. ಎಸ್‌ಕೆಡಿಆರ್‌ಡಿಪಿ ಬಗ್ಗೆ ಸಮಗ್ರವಾಗಿ ತನಿಖೆ ಮಾಡಿ ವರದಿ ಕೊಡಿ. ನಿಮ್ಮ ಕೈಲಿ ಏನೂ ಮಾಡಲು ಆಗದಿದ್ದರೆ ಕನಿಷ್ಠ ಜನರಲ್ಲಿ ಅರಿವನ್ನಾದರು ಮೂಡಿಸಿ” ಎಂದು ಅಧಿಕಾರಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಖುದ್ದು ಮುಖ್ಯಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳನ್ನು ಭೇಟಿಯಾಗಿ ಇಲ್ಲಿನ ಪರಿಸ್ಥಿತಿಯನ್ನು ವಿವರಿಸಿ ತಮ್ಮ ಹೆಣ್ಣುಮಕ್ಕಳ ಪರವಾಗಿ ಮಾತನಾಡಿ ನ್ಯಾಯ ಕೊಡಿಸುತ್ತೇನೆ” ಎಂದು ಭರವಸೆ ನೀಡಿದ ಅವರು ನೊಂದ ಕುಟುಂಬವನ್ನು ಸಂತೈಸಿದರು.

ಮಹಿಳಾ ಮುನ್ನಡೆಯ ಪೂರ್ಣಿಮಾ, ಮಾಹಿಳಾ ಆಯೋಗದ ಅಧ್ಯಕ್ಷೆ 6 ಗಂಟೆ ತಡವಾಗಿ ಬಂದದ್ದನ್ನು ಗಮನಿಸಿ ತರಾಟೆಗೆ ತೆಗೆದುಕೊಂಡ ಅವರು, “ಆತ್ಮಹತ್ಯೆ ಮಾಡಿಕೊಂಡ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು. ಭೀಕರ ಬರ ಆವರಿಸಿರುವುದರಿಂದ ಕೂಲಿಯೂ ಇಲ್ಲದೆ ಬದುಕು ನಡೆದುವುದೇ ಕಷ್ಟಕರವಾಗಿರುವಾಗ ಎಲ್ಲಿಂದ ಹಣ ತಂದು ಕಟ್ಟುತ್ತಾರೆ. ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳ ಹಿಂಸೆ ತಡೆಗಟ್ಟಿ, ಸಾಲ ಮನ್ನಾಮಾಡಿ ಋಣಮುಕ್ತರನ್ನಾಗಿ ಮಾಡಿಸಲು ಆಳಿಕೆಯನ್ನು ಒತ್ತಾಯಿಸಿ” ಎಂದು ಹಕ್ಕೊತ್ತಾಯ ಮಂಡಿಸಿದರು.

“ಜೊತೆಗೆ 50ಕ್ಕೂ ಹೆಚ್ಚು ನಾಯಿಕೊಡೆಗಳಂತೆ ಹುಟ್ಟಿಕೊಂಡಿರುವ ಧರ್ಮಸ್ಥಳದಂತ ಮೈಕ್ರೋಫೈನಾನ್ಸ್ ಸಂಸ್ಥೆಗಳು ಅಧಿಕೃತವೋ ಇಲ್ಲವೇ ಅನಧಿಕೃತವೋ ಎಂದು ತನಿಖೆ ನಡೆಸಿ ಕ್ರಮ ಕೈಗೊಳ್ಳಿ. ಒಬ್ಬ ವ್ಯಕ್ತಿಗೆ ಒಂದು ಆದಾರ್ ಕಾರ್ಡ್‌ ಮೇಲೆ ನಿಗದಿಗಿಂತಲೂ ಹೆಚ್ಚು ಬಡ್ಡಿ ಹಾಕಿ ಸಂಸ್ಥೆ ಬೆಳೆಸುವ ಹುನ್ನಾರದಿಂದ ಮಿತಿಮೀರಿದ ಸಾಲ ನೀಡಿ. ವಸೂಲಿಗಾಗಿ ಗುಂಪಿನ ನಡುವೆಯೇ ಒಡಕುಂಟುಮಾಡಿ ಕಿರುಕುಳದ ದಾರಿ ಹಿಡಿದಿರುವ ಎಸ್‌ಕೆಡಿಆರ್‌ಡಿಪಿ ಮೇಲೆ ಕಡಿವಾಣ ಹಾಕಿ ಕ್ರಮ ಕೈಗೊಳ್ಳಬೇಕು” ಎಂದು ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ₹10,000 ಕೋಟಿ ಕಪ್ಪುಹಣ ಧರ್ಮಸ್ಥಳಕ್ಕೆ ರವಾನೆ: ಗಿರೀಶ್ ಮಟ್ಟಣ್ಣನವರ್

ಶಿವಕುಮಾರ್ ಮಾದಳ್ಳಿ ಮಾತನಾಡಿ, “ಧರ್ಮಸ್ಥಳದಂತಹ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಲೈಸೆನ್ಸ್‌ಗಳನ್ನು ತನಿಖೆಗೆ ಒಳಪಡಿಸಿ ಸಾಲವಸೂಲಾತಿಗೆ ಕಿರುಕುಳ ನೀಡದಂತೆ ಆಳಿಕೆ ಮತ್ತು ಜಿಲ್ಲಾಡಳಿತಕ್ಕೆ ನೋಟಿಸ್ ಜಾರಿ ಮಾಡಿ ಕ್ರಮ ಕೈಗೊಳ್ಳಬೇಕಿದೆ” ಎಂದು ಆಗ್ರಹಿಸಿದರು.

ಮಹಿಳಾ ಆಯೋಗದ ಅಧ್ಯಕ್ಷೆ ಗ್ರಾಮಕ್ಕೆ ಭೇಟಿ ನೀಡಿದಾಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಪಂಚಾಯಿತಿಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಪಂಚಾಯಿತಿ ಸದಸ್ಯರು ಹಾಗೂ ಮಹಿಳಾ ಮುನ್ನಡೆಯ ಶಿಲ್ಪ, ಶಾಂತಮ್ಮ, ಕರ್ನಾಟಕ‍‍ ವಿದ್ಯಾರ್ಥಿ ಸಂಘಟನೆಯ ಕೌಶಲ್ಯ, ದಲಿತಪರ ಸಂಘಟನೆಗಳ ಮುಂದಾಳುಗಳು ಹಾಗೂ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...