ಮಂಡ್ಯ | ವಿಶ್ವ ಜನಸಂಖ್ಯಾ ದಿನಾಚರಣೆ; ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

Date:

ಇಂದು ವಿಶ್ವ ಜನಸಂಖ್ಯಾ ದಿನದ ಪ್ರಯುಕ್ತ ಮಂಡ್ಯ ಪಟ್ಟಣದಲ್ಲಿ ಮೈಸೂರಿನ ಶೇಷಾದ್ರಿಪುರಂ ಇಂಜಿನಿಯರಿಂಗ್ ಕಾಲೇಜಿನ ಎನ್‌ಎಸ್‌ಎಸ್ ಘಟಕ, ರೋಟರಿ ಕ್ಲಬ್ ಶ್ರೀರಂಗಪಟ್ಟಣ, ಅಚೀವರ್ಸ್ ಅಕಾಡೆಮಿ, ಹಾಗೂ ಶಾರದಾ ವಿಲಾಸ್ ಕಾನೂನು ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಜಾಗೃತಿ ಜಾಥಾವನ್ನ ಹಮ್ಮಿಕೊಳ್ಳಲಾಯಿತು.

ಈ ಜಾಥಾಕ್ಕೆ ಶೇಷಾದ್ರಿಪುರಂ ಇಂಜಿನಿಯರಿಂಗ್ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಡಾ. ರಾಘವೇಂದ್ರ ಹಸಿರು ನಿಶಾನೆ ತೋರುವ ಮುಖಾಂತರ ಚಾಲನೆ ನೀಡಿ ಮಾತನಾಡಿದರು.

“ಜುಲೈ 11ರಂದು ಪ್ರತಿವರ್ಷ ‘ವಿಶ್ವ ಜನಸಂಖ್ಯಾ ದಿನ’ವನ್ನು ಆಚರಿಸಲಾಗುತ್ತದೆ. ಜಾಗತಿಕವಾಗಿ ಜನಸಂಖ್ಯೆ ಏರುತ್ತಿರುವ ವೇಗ ನೋಡಿ ವಿಶ್ವಸಂಸ್ಥೆ 1987ರ ವರ್ಷದಲ್ಲಿ ಈ ವಿಶ್ವ ಜನಸಂಖ್ಯಾ ದಿನಾಚರಣೆಗೆ ಮುನ್ನುಡಿ ಬರೆಯಿತು. ಆ ದಿನದಂದು ವಿಶ್ವದ ಜನಸಂಖ್ಯೆ 5 ಬಿಲಿಯನ್ ತಲುಪಿತಂತೆ. ಹೀಗೆ ಈ ದಿನವನ್ನು ಆಚರಿಸುವುದರ ಮೂಲಕ ವಿಶ್ವದಲ್ಲಿ ಜನಸಂಖ್ಯೆಯ ಕುರಿತಾದ ವಿವಿಧ ಸಮಸ್ಯೆಗಳ ಕುರಿತಾಗಿ ವಿಶ್ವ ಸಮುದಾಯದ ಗಮನ ಸೆಳೆಯುವುದು ಈ ಆಚರಣೆಯ ಪ್ರಮುಖ ಉದ್ದೇಶವಾಗಿದ್ದು ಈ ದಿನ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಡ್ಯ | ಕೃಷಿಯೇ ನಮ್ಮ ಭವಿಷ್ಯ: ಕವಿತಾ ಕುರುಗಂಟಿ ಅಭಿಮತ

ಜಾಥಾದಲ್ಲಿ ಶ್ರೀರಂಗಪಟ್ಟಣದ ರೋಟರಿಯ ಕಾರ್ಯದರ್ಶಿ ಎನ್ ನಾಗೇಂದ್ರ, ಸಹ ಕಾರ್ಯದರ್ಶಿ ರಾಜೇಶ್, ಉದ್ಯೋಗ ದಾತ ಸಂಸ್ಥೆಯ ಅಧ್ಯಕ್ಷ ರುಕ್ಮಾಂದ, ಶಾರದಾ ವಿಲಾಸ್ ಕಾನೂನು ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಸವಿತಾ, ಓಂಶ್ರೀ ನಿಕೇತನ ಶಾಲೆಯ ಮುಖ್ಯೋಪಾಧ್ಯಾಯ ಶಿವಕುಮಾರ್, ನಾರಾಯಣ, ಪುನೀತ್, ರವಿ, ಎನ್ಎಸ್ಎಸ್ ವಿದ್ಯಾರ್ಥಿಗಳು ಹಾಗೂ ಇತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...