ಮಂಡ್ಯ | ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ

Date:

ಹಣದ ವಿಷಯಕ್ಕೆ ಸಂಬಂಧಿಸಿದ ವಿವಾದದಿಂದಾಗಿ ಯುವಕನೊಬ್ಬನನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ನಾಗಮಂಗಲ ತಾಲೂಕಿನ ಜಿ ಬೊಮ್ಮನಹಳ್ಳಿ ಗ್ರಾಮದಲ್ಲಿ ಯುವಕನನ್ನು ಧ್ವಜಸ್ಥಂಭಕ್ಕೆ ಕಟ್ಟಿ ಹಲ್ಲೆ ಮಾಡಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹಲ್ಲೆಗೊಳಗಾದ ಯುವಕನನ್ನು ಅದೇ ಗ್ರಾಮದ ನಾಗೇಶ್‌ ಎಂದು ಹೇಳಲಾಗಿದೆ. ನಾಗೇಶ್‌ ಮತ್ತು ಗ್ರಾಮದ ಚಲುವೇಶ್‌ ನಡುವೆ ಹಣದ ವಿಚಾರಕ್ಕೆ ಜಗಳ ನಡೆದಿದೆ. ಈ ವೇಳೆ ನಾಗೇಶ್‌ ಚಾಕು ಹಿಡಿದುಕೊಂಡು ಗ್ರಾಮಸ್ಥರಿಗೆ ಬೆದರಿಕೆ ಹಾಕಿದ್ದಾನೆ. ಇದರಿಂದ ಕುಪಿತಗೊಂಡ ಗ್ರಾಮಸ್ಥರು ನಾಗೇಶ್‌ನನ್ನು ಕಂಬಕ್ಕೆ ಕಟ್ಟಿ, ಹಲ್ಲೆಗೈದಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೈರಲ್ ಆಗಿರುವ ವಿಡಿಯೋದಲ್ಲಿ; ನಾಗೇಶ್‌ ಅವರನ್ನು ಧ್ವಜಸ್ಥಂಭಕ್ಕೆ ಕಟ್ಟಲಾಗಿದ್ದು, ಕೆಲವರು ಕಪಾಳಕ್ಕೆ ಹೊಡೆದಿದ್ದಾರೆ. ಆತನ ಮೇಲಿನ ಹಲ್ಲೆಯನ್ನು ಗ್ರಾಮದ ಮುಖಂಡರು ತಡೆಯಲು ಯತ್ನಿಸಿದ್ದಾರೆ. ನಾಗೇಶ್‌ನನ್ನು ರಕ್ಷಿಸಿದ್ದಾರೆ.

ನಾಗೇಶ್ ಅವರ ಪತ್ನಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...