ಮಂಡ್ಯ ಜಿಲ್ಲೆಯ ಹರಳಹಳ್ಳಿಯ ಅಂಕೇಗೌಡರʼ ಪುಸ್ತಕದ ಮನೆʼಯು ಸುಮಾರು 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳ ಸಂಗ್ರಹದೊಂದಿಗೆ ವಿಶ್ವ ವಿಖ್ಯಾತಿ ಪಡೆಯುತ್ತಿರುವುದು ನಮ್ಮ ಜಿಲ್ಲೆಯ ಹೆಮ್ಮೆಯ ವಿಷಯ ಎಂದು ರೋಟರಿ ಸಂಸ್ಥೆ ಹಾಗೂ ಅಚೀವರ್ಸ್ ಅಕಾಡೆಮಿಯ ಅಧ್ಯಕ್ಷರು ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತ ಡಾ. ರಾಘವೇಂದ್ರ ತಿಳಿಸಿದರು.
ಜಿಲ್ಲೆಯ ಶ್ರೀರಂಗಪಟ್ಟಣ ರೋಟರಿ ಸಂಸ್ಥೆ ಹಾಗೂ ಅಚೀವರ್ಸ್ ಅಕಾಡೆಮಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ‘ಪುಸ್ತಕದ ಮನೆ’ ಅಂಕೇಗೌಡರನ್ನು ಅಭಿನಂದಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪಾಂಡವಪುರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯ ಮಾತನಾಡಿ, “ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಅಂಕೇಗೌಡರು ತಮ್ಮ ಕಠಿಣ ಪರಿಶ್ರಮದಿಂದ ಇಂದು ಬೃಹತ್ ಪುಸ್ತಕ ಭಂಡಾರವನ್ನೇ ನಿರ್ಮಿಸಿದ್ದಾರೆ. ಒಂದು ಸಣ್ಣ ಕೊಠಡಿಯಿಂದ ಆರಂಭವಾದ ಇವರ ಈ ಜ್ಞಾನದಾಸೋಹ ಇಂದು 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಒಳಗೊಂಡಿದೆ. ಇವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿರುವುದು ನಮ್ಮ ಗ್ರಾಮಕ್ಕೆ ಸಿಕ್ಕ ದೊಡ್ಡ ಸೌಭಾಗ್ಯ” ಎಂದು ಬಣ್ಣಿಸಿದರು.
ಈ ಸುದ್ದಿ ಓದಿದ್ದೀರಾ? ಮದ್ದೂರು ನಗರಸಭೆಗೆ ಗ್ರಾ.ಪಂ ಸೇರ್ಪಡೆ: ಅಜೆಂಡಾ ಇಲ್ಲದ ನಿರ್ಧಾರಕ್ಕೆ ಪ್ರತಿಭಟನಾಕಾರರ ಆಕ್ರೋಶ
ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ಕಾರ್ಯದರ್ಶಿ ನಾಗೇಂದ್ರ, ಸಹ ಕಾರ್ಯದರ್ಶಿ ರಾಜೇಶ್, ದಲಿತ ಸಂಘರ್ಷ ಸಮಿತಿಯ ಪ್ರಕಾಶ್, ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್, ಪ್ರಾಧ್ಯಾಪಕ ಧನಂಜಯ್, ಪಂಚಾಯಿತಿ ಮಾಜಿ ಸದಸ್ಯ ಲೋಕೇಶ್, ಏಕಾಂತ್, ತಿಪಟೂರು ಪುರುಷೋತ್ತಮ, ಶಿಕ್ಷಕ ಜವರಪ್ಪ ಸೇರಿದಂತೆ ಹಲವು ಪ್ರಮುಖರು ಇದ್ದರು.





