ಕಾವೇರಿ ವಿವಾದ | ರೈತರ ಹೋರಾಟಕ್ಕೆ 46ನೇ ದಿನ; ಎತ್ತಿನಗಾಡಿಯಲ್ಲಿ ಮಂಡ್ಯಕ್ಕೆ ಬಂದ ರೈತರು

Date:

ರಾಜ್ಯದಲ್ಲಿಯೇ ನೀರಿಲ್ಲ. ಬರ ವ್ಯಾಪಿಸಿದೆ. ಇಂತಹ ಸಂದರ್ಭಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು. ರಾಜ್ಯದ ರೈತರ ಕೃಷಿಗೆ ನೀರು ಕೊಡಬೇಕೆಂದು ಒತ್ತಾಯಿಸಿ ಮಂಡ್ಯದಲ್ಲಿ ನಡೆಯುತ್ತಿರುವ ರೈತ ಹೋರಾಟ 46ನೇ ದಿನಕ್ಕೆ ಕಾಲಿಟ್ಟಿದೆ. ಮಂಡ್ಯದ ಸುತ್ತಮುತ್ತಲಿನ ಹಳ್ಳಿಗಳ ರೈತರು ಎತ್ತಿನಗಾಡಿ, ಟ್ರಾಕ್ಟರ್‌ಗಳಲ್ಲಿ ಬಂದು ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

ಮಂಡ್ಯದ ಇಂಡುವಾಳು, ಸಿದ್ದಯ್ಯನಕೊಪ್ಪಲು, ಸುಂಡಹಳ್ಳಿ, ಕಿರಗಂದೂರು ಹಾಗೂ ಮೊಳೆ ಕೊಪ್ಪಲು ಗ್ರಾಮದ ರೈತರು ಹೋರಾಟಕ್ಕೆ ಬೆಂಬಲ ನೀಡಿದ್ದು, ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಎದುರಿನ ವಿಶ್ವೇಶ್ವರಯ್ಯ ಬಳಿ ‘ಜಿಲ್ಲಾ ರೈತ ಹಿತರಕ್ಷಣಾ ಸಮಿತಿ’ ನಡೆಸುತ್ತಿರುವ ಧರಣಿ ಸ್ಥಳಕ್ಕೆ ತೆರಳಿದ ರೈತರು, ” ಜಲಾಶಯಗಳಿಂದ ನೆರೆ ರಾಜ್ಯಕ್ಕೆ ನಿರಂತರ ನೀರು ಹರಿಸುವ ಮೂಲಕ ಅಣೆಕಟ್ಟೆಯನ್ನು ಬರಿದು ಮಾಡಲಾಗುತ್ತಿದೆ. ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಬೇಕು. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಸಂಕಷ್ಟ ಸನ್ನಿವೇಶದಲ್ಲಿ ಅನುಕೂಲವಾಗುವಂತೆ ಸಂಕಷ್ಟ ಸೂತ್ರ ರೂಪಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೋರಾಟದಲ್ಲಿ ಇಂಡುವಾಳು ಗ್ರಾಮದ ರೈತ ಮುಖಂಡ ಚಂದ್ರಶೇಖರ್, ಇ.ಬಸವರಾಜು, ಕೃಷ್ಣೆಗೌಡ, ಉಮಾ ಶಂಕರ್, ದೇವೇಗೌಡ, ಸಿದ್ದಯ್ಯನ ಕೊಪ್ಪಲು ಗ್ರಾಮದ ರಮೇಶ್ ರಾಜು, ನಟೇಶ್, ತಮ್ಮೇಗೌಡ, ತಮ್ಮಣ್ಣ, ಶಿವಣ್ಣ, ನಾಗರಾಜು, ಸಿದ್ದರಾಮು, ನಂಜೇಗೌಡ, ಸುಂಡಹಳ್ಳಿ ಗ್ರಾಮದ ಶಿವಸ್ವಾಮಿ, ಸಿದ್ದಲಿಂಗಯ್ಯ, ದೇವರಾಜು, ಮೊಳೆಕೊಪ್ಪಲು ಗ್ರಾಮದ ಅಂದಾನಿ, ಬೆಟ್ಟೇಗೌಡ, ಶಂಕರ್, ಶಿವರಾಮ, ಹೊನ್ನಪ್ಪ, ಕಿರಗಂದೂರು ಗ್ರಾಮದ ಸಿದ್ದಯ್ಯ,ಕರಿಯಪ್ಪ, ಚಿಕ್ಕಯ್ಯ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...