87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಚಾಲನೆ, ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ

Date:

ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಆದಿ ಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚೆಲುವನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆ.ಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ‌,ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಸಮ್ಮೇಳನ 2

ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ

ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂದಿದೆ. ಬೆಳಿಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾ ರ್ಥಿಗಳು ಸಾಹಿತ್ಯ ಸಮ್ಮೇಳನವನ್ನು ಕಣ್ಮನ ತುಂಬಿಕೊಳ್ಳಲು ತಂಡೋಪ ತಂಡವಾಗಿ ಆಗಮಿಸಿದರು. ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿ ಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದರು.

ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.

ಮೆರವಣಿಗೆಯಲ್ಲಿ ಹಾಗೂ ಮುಖ್ಯವೇದಿಕೆಯಲ್ಲಿ ಜನಸಾಗರ ಜಮಾಯಿಸಿದ್ದ ಕಾರಣ ಹಾಗೂ ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಒಟ್ಟು 3,200 ಪೊಲೀಸ್ ಸಿಬ್ಬಂದಿಯನ್ನು ಸಾಹಿತ್ಯ ಸಮ್ಮೇಳನಕ್ಕೆ ನಿಯೋಜಿಸಲಾಗಿದೆ.

ಮಂಡ್ಯ ನಗರದಲ್ಲಿ ನಗರ ಸಾರಿಗೆ ಬಸ್ ಉಚಿತವಾಗಿ ಬಿಟ್ಟಿರುವುದರಿಂದ ನಗರದ ಜನತೆಯೂ ಸಹಸ್ರಾರು ಸಂಖ್ಯೆಯಲ್ಲಿ ಭಾಗವ ಹಿಸಿದರು. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರು ವೇದಿಕೆಗೆ ಆಗಮಿಸುತ್ತಿದ್ದಂತೆ ಅಭೂತಪೂರ್ವ ಸ್ವಾಗತ ಕೋರಲಾಯಿತು.

ಕನ್ನಡ ಸಮ್ಮೇಳನ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...