ಸಹಕಾರ-ಸೌಹಾರ್ದತೆಯೇ NSS ಉದ್ದೇಶ; ನಾಡೋಜ ಡಾ. ವೂಡೆ ಕೃಷ್ಣ ಅಭಿಮತ

Date:

ಗ್ರಾಮೀಣ ಪ್ರದೇಶದ ಲಭ್ಯ ಸಂಪನ್ಮೂಲಗಳನ್ನು ಬಳಸಿಕೊಂಡು ಪರಿಸ್ಥಿತಿಗೆ ಹೊಂದಾಣಿಕೆಯಾಗಿ ಸಹಕಾರ ನೀಡುವುದೇ ರಾಷ್ಟೀಯ ಸೇವಾ ಯೋಜನಾ ಶಿಬಿರ (NSS)ದ ಮುಖ್ಯ ಉದ್ದೇಶ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಕಾರ್ಯದರ್ಶಿ ನಾಡೋಜ ಡಾ. ವೂಡೆ ಪಿ. ಕೃಷ್ಣ ಹೇಳಿದರು.

ಶ್ರೀರಂಗಪಟ್ಟಣ ತಾಲೂಕಿನ ಚಿನ್ನಾಯಕನಹಳ್ಳಿ ಗ್ರಾಮದಲ್ಲಿ ಮೈಸೂರಿನ ಶೇಷಾದ್ರಿಪುರಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಎನ್ಎಸ್ಎಸ್ ಘಟಕ ವತಿಯಿಂದ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

“ನಗರ ಪ್ರದೇಶದ ಶಿಬಿರಾರ್ಥಿಗಳು ಗ್ರಾಮೀಣ ಪ್ರದೇಶದ ವಾತಾವರಣಕ್ಕೆ ಹೊಂದಿಕೊಳ್ಳುವ, ಜೀವನ ಮೌಲ್ಯಗಳನ್ನು ಬೆಳೆಸಿಕೊಳ್ಳುವ, ಗ್ರಾಮೀಣ ಪ್ರದೇಶದ ಸಂಪ್ರದಾಯ ಸಂಸ್ಕೃತಿ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಶಿಬಿರದ ಉದ್ದೇಶಗಳನ್ನು ಸಾರ್ಥಕ ಪಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ ಸುಜಯ್ ಕುಮಾರ್ ಮಾತನಾಡಿ, “ಶಿಬಿರಾರ್ಥಿಗಳು ಗ್ರಾಮೀಣ ಜನರ ಆರೋಗ್ಯ, ಸಾರಿಗೆ ನಿಯಮಗಳು ಕಾನೂನು ಅರಿವು, ಸ್ವಚ್ಛತೆಗೆ, ಶ್ರಮಾದಾನ, ರಕ್ತದಾನ, ಆರೋಗ್ಯ ತಪಾಸಣೆ ಸೇರಿದಂತೆ ಇತರ ಸಾಮಾಜಿಕ ಕೆಲಸಗಳನ್ನು ನಿರ್ವಹಿಸುವಂತಾಗಲಿ ಎಂದು ಶಿಬಿರಾರ್ಥಿಗಳ ಸೇವೆ ನಮ್ಮ ಗ್ರಾಮ ನಿಮ್ಮ ಸೇವೆಯನ್ನು ಸ್ಮರಿಸಿ ಕೊಳ್ಳುವಂತಾಗಲಿ” ಎಂದು ಶಿಬಿರಾರ್ಥಿಗಳಿಗೆ ಶುಭ ಕೋರಿದರು.

ಇದನ್ನೂ ಓದಿ: ಮಂಡ್ಯ | ಪ್ರೇಮ ವಿವಾಹ; ಯುವಕನ ಮನೆಗೆ ಬೆಂಕಿ ಹಚ್ಚಿದ ಯುವತಿ ತಂದೆ

ಇದೇ ಸಂದರ್ಭದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ಇಂಜಿನಿಯರ್ ಜೈ ಕುಮಾರ್, ನಾಗರಾಜು,
ಮರಳಾಗಾಲ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬೋರೇಗೌಡ, ಕಾರ್ಯದರ್ಶಿ ಮಂಜುನಾಥ್, ಗ್ರಾಮದ ಮುಖಂಡರು, ಕಾಲೇಜಿನ ಪ್ರಾಂಶುಪಾಲ ಡಾ. ಕೆ ಪ್ರಹ್ಲಾದ್ ರಾವ್, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ. ರಾಘವೇಂದ್ರ ಕಾಲೇಜಿನ ಪ್ರಾಧ್ಯಾಪಕರು, ಉಪನ್ಯಾಸಕರು, ಗ್ರಾಮದ ಜೈ ಶ್ರೀರಾಮ್ ಯುವಕರ ಸಂಘದ ಎಲ್ಲಾ ಸದಸ್ಯರುಗಳು, ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...