ಮಂಡ್ಯ | ಮದ್ದೂರಿನ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢ

Date:

ಕೇರಳದಲ್ಲಿ ಕೊರೋನಾ ಜೆಎನ್‌1 ವೈರಸ್‌ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ರಾಜ್ಯದಲ್ಲಿಯೂ 60 ವರ್ಷ ದಾಟಿದವರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕೆಂದು ರಾಜ್ಯ ಸರ್ಕಾರ ಹೇಳಿದೆ. ಈ ನಡುವೆ, ಮಂಡ್ಯ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.

ಜಿಲ್ಲೆಯ ಮದ್ದೂರಿನ 75 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್ ದೃಢಪಟ್ಟಿದೆ ಅದು ಜಿಎನ್‌1 ರೂಪಾಂತರಿ ವೈರಸ್‌ ಆಗಿದೆಯೇ ಎಂದು ವೈದ್ಯರು ಇನ್ನೂ ದೃಢಪಡಿಸಿಲ್ಲ.

ಕೊರೋನಾ ದೃಢಪಟ್ಟಿರುವ ವ್ಯಕ್ತಿಗೆ ಯಾವುದೇ ಪ್ರಯಾಣದ ಇತಿಹಾಸಗಳಿಲ್ಲ. ಆದರೂ, ಅವರಲ್ಲಿ ಕೊರೋನಾ ದೃಢಪಟ್ಟಿದೆ. ಅವರು ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ, ಅವರಿಗೆ ಕೋವಿಡ್-19 ಪರೀಕ್ಷೆ ಮಾಡಲಾಗಿದೆ. ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಆತನನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೋಂಕಿತನಿಗೆ ಕೊರೋನಾ ಸೋಂಕಿನ ಯಾವುದೇ ರೋಗಲಕ್ಷಣಗಳಿಲ್ಲ. ರೋಗಿಯ ಆರೋಗ್ಯ ಸ್ಥಿತಿ ಸಾಮಾನ್ಯವಾಗಿದೆ. ಇನ್ನು, ಜಿಲ್ಲೆಯಲ್ಲಿ ಕೊರೋನಾದಂತಹ ಪರಿಸ್ಥಿತಿಗಳನ್ನು ಎದುರಿಸಲು ಆಕ್ಸಿಜನ್ ಪ್ಲಾಂಟ್‌ಗಳನ್ನು ಸಜ್ಜುಗೊಳಿಸಲಾಗಿದೆ. ಶ್ರೀರಂಗಪಟ್ಟಣದ ಆಕ್ಸಿಜನ್ ಸ್ಥಾವರದಲ್ಲಿ ಕೆಟ್ಟು ಹೋಗಿದ್ದ ಸೆನ್ಸಾರ್ ದುರಸ್ತಿಗೆ ಕ್ರಮಕೈಗೊಳ್ಳಲಾಗಿದೆ” ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ತಿಳಿಸಿದ್ದಾರೆ.

ಕೇರಳದಲ್ಲಿ ಕೊರೋನಾ ರೂಪಾಂತರಿ ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗದಲ್ಲಿ ಕೊರೋನಾ ತಪಾಸಣೆಯನ್ನು ಆರೋಗ್ಯ ಇಲಾಖೆ ಆರಂಭಿಸಿದೆ. ಕೇರಳದಿಂದ ಬರುವವರಿಗೆ ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ಸೂಚನೆ ನೀಡಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...