ಮಕ್ಕಳಿಗೆ ಬಾಲ್ಯದಿಂದಲೇ ಜೀವನ ಮೌಲ್ಯ ಕಲಿಸುವುದು ಅಗತ್ಯ: ಡಾ. ರಾಘವೇಂದ್ರ

Date:

ಮಕ್ಕಳಲ್ಲಿ ಬಾಲ್ಯದಿಂದಲೇ ಮೌಲ್ಯಗಳನ್ನು ಬೆಳೆಸುವುದು ಅವರ ಭವಿಷ್ಯದ ದೃಷ್ಟಿಯಿಂದ ಅತ್ಯಗತ್ಯ ಎಂದು ಶ್ರೀರಂಗಪಟ್ಟಣ ರೋಟರಿ ಸಂಸ್ಥೆಯ ಅಧ್ಯಕ್ಷ ಡಾ. ರಾಘವೇಂದ್ರ ಅಭಿಪ್ರಾಯಪಟ್ಟರು.

ಶ್ರೀರಂಗಪಟ್ಟಣ ತಾಲೂಕಿನ ಮಿಣಜಿ ಬೋರನ ಕೊಪ್ಪಲು ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ‘ಬಾಲ ಮೇಳ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ರೋಟರಿ ಸಂಸ್ಥೆಯ ವತಿಯಿಂದ ಮಕ್ಕಳಿಗೆ ನೆಲಹಾಸುಗಳನ್ನು (Mats) ವಿತರಿಸಿ ಅವರು ಮಾತನಾಡಿದರು.

“ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ, ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಮತ್ತೊಬ್ಬರಿಗೆ ಸಹಾಯ ಮಾಡುವ ಗುಣವನ್ನು ಪೋಷಕರು ಕಲಿಸಬೇಕು. ಅಂದಿನ ಸಂಸ್ಕಾರವು ಅವರ ಜೀವನವನ್ನು ಉತ್ತಮ ಹಾದಿಯಲ್ಲಿ ಕಟ್ಟಿಕೊಳ್ಳಲು ನೆರವಾಗುತ್ತದೆ. ರೋಟರಿ ಸಂಸ್ಥೆಯು ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿದ್ದು, ಇಂದು ಪುಟಾಣಿ ಮಕ್ಕಳ ಅನುಕೂಲಕ್ಕಾಗಿ ಈ ಕಿರು ಸೇವೆಯನ್ನು ಮಾಡುತ್ತಿದೆ” ಎಂದು ಡಾ. ರಾಘವೇಂದ್ರ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಡ್ಯ | ಕನ್ನಡ ಕೇವಲ ಒಂದು ಭಾಷೆಯಲ್ಲ, ಅದು ನಮ್ಮ ಸಂಸ್ಕೃತಿ: ಸತೀಶ್ ಜವರೇಗೌಡ

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ (CDPO) ಸಕಲೇಶ್ವರ ಭಾಗವಹಿಸಿ ರೋಟರಿ ಸಂಸ್ಥೆಯ ಸಾಮಾಜಿಕ ಕಳಕಳಿಯನ್ನು ಶ್ಲಾಘಿಸಿದರು. ಅಂಗನವಾಡಿ ಮೇಲ್ವಿಚಾರಕಿ ಆಶಾ ಎಲ್, ಪ್ರಮುಖರಾದ ಧನಲಕ್ಷ್ಮಿ, ನಂದಿನಿ, ಶಾರದಾ, ಆಶಾ, ಪದ್ಮ, ಅನಂತಲಕ್ಷ್ಮಿ ಸೇರಿದಂತೆ ಹಲವಾರು ಪೋಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...