ಕಲ್ಲಡ್ಕ ಪ್ರಭಾಕರ್ ಭಟ್‌ ನಿರೀಕ್ಷಣಾ ಜಾಮೀನಿಗೆ ಅನರ್ಹನೆಂದು ವಾದ ಮಂಡನೆ; ಜ.17ಕ್ಕೆ ತೀರ್ಪು

Date:

ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೀಡಲಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಬೇಕು. ಆತನ ನಿರೀಕ್ಷಣಾ ಜಾಮೀನಿಗೆ ಅನರ್ಹರಾಗಿದ್ದಾರೆ ಎಂದು ಹಿರಿಯ ವಕೀಲ ಎಸ್‌ ಬಾಲನ್ ವಾದ ಮಂಡಿಸಿದ್ದಾರೆ. ಜಾಮೀನು ಅರ್ಜಿ ಕುರಿತು ತೀರ್ಪನ್ನು ಜನವರಿ 17ಕ್ಕೆ ನ್ಯಾಯಾಲಯ ಕಾಯ್ದಿರಿಸಿದೆ.

ಕಲ್ಲಡ್ಕ ಭಟ್‌ಗೆ ಕಳೆದ ತಿಂಗಳು ನಿರೀಕ್ಷಣಾ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಶ್ರೀರಂಗಪಟ್ಟಣ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ದೂರುದಾರೆ ನಜ್ಮಾ ನಝೀರ್ ಅರ್ಜಿ ಸಲ್ಲಿಸಿದ್ದಾರೆ. ನಜ್ಮಾ ಪರವಾಗಿ ವಕೀಲ ಬಾಲನ್ ವಾದ ಮಂಡಿಸಿದ್ದಾರೆ.

“ಸುಪ್ರಿಂ ಕೋರ್ಟ್ ಮತ್ತು ಹಲವು ಹೈಕೋರ್ಟ್‌ಗಳ ತೀರ್ಪುಗಳ ಪ್ರಕಾರ ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ನಿರೀಕ್ಷಣಾ ಜಾಮೀನಿಗೆ ಅನರ್ಹನಾಗಿದ್ದಾನೆ. ದೇಶದ ಭದ್ರತೆ, ಸೌಹಾರ್ದತೆಗೆ ಈ ಆರೋಪಿ ಕಂಟಕವಾಗಿದ್ದಾನೆ. ಈ ಹಿಂದಿನ ಐಪಿಸಿ ಮಾತ್ರವಲ್ಲ, ಈಗಿನ ನ್ಯಾಯ ಸಂಹಿತಾ ಮತ್ತು ಸಾಕ್ಷ್ಯ ಅಧಿನಿಯಮದ ಪ್ರಕಾರವೂ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನಿಗೆ ಅನರ್ಹ” ಎಂದು ಕಾನೂನು, ಕಾಯ್ದೆಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ದೇಶ ಒಡೆಯುವ ಸಂಘಟಿತ ಕೃತ್ಯ ಮಾಡಿದ್ದಾನೆ. ಆ ಕಾರಣಕ್ಕಾಗಿ ಆತನ ವಿರುದ್ದ ಹೆಚ್ಚುವರಿಯಾಗಿ ಕೋಕಾ ಅ್ಯಕ್ಟ್ ಮತ್ತು ಯುಎಪಿಎ ಅ್ಯಕ್ಟ್, ಟೆರರಿಸ್ಟ್ ಅ್ಯಕ್ಟ್ ಗಳನ್ನು ಸೇರಿಸಬೇಕಿದೆ. ಆದ್ದರಿಂದ ಆರೋಪಿ ಪೊಲೀಸ್ ಕಸ್ಟಡಿಗೆ ಬೇಕಾಗಿದ್ದಾನೆ. ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ಟ ಹೇಳಿರುವ ಹೇಳಿಕೆಯನ್ನು ಆತನಿಂದ ದೃಢಪಡಿಸಿಕೊಂಡು, ಹೇಳಿಕೆಯ ಮಾದರಿ ಪಡೆದುಕೊಂಡು ಫೊರೆನ್ಸಿಕ್ ಲ್ಯಾಬ್ ಗೆ ಕಳಿಸಬೇಕಿದೆ. ಆರೋಪಿ ಮೇಲೆ ರೌಡಿ ಹಾಳೆ ತೆರೆಯಲು ಎಲ್ಲ ಆಧಾರಗಳಿದ್ದು, ಇವುಗಳ ಹಿನ್ನಲೆಯಲ್ಲಿ ಆರೋಪಿಯನ್ನು ತನಿಖೆಗೆ ಒಳಪಡಿಸಬೇಕಿದೆ. ಹಾಗಾಗಿ ಜಾಮೀನು ನಿರಾಕರಿಸಬೇಕು” ಎಂದು ವಾದ ಮಂಡಿಸಿದರು.

ಕಲ್ಲಡ್ಕ ಪ್ರಭಾಕರ ಭಟ್ ಪರ ವಕೀಲರು ಮತ್ತು ಸರ್ಕಾರಿ ವಕೀಲರು ವಾದ ಮಂಡಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಆದೇಶವನ್ನು ಜನವರಿ 17ಕ್ಕೆ ಕಾಯ್ದಿರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...