ಮಂಡ್ಯ | ʼಬೆಂಬಲ ಬೆಲೆ ಯೋಜನೆ’ಯಡಿ 32 ಭತ್ತ ಖರೀದಿ ಕೇಂದ್ರ ಸ್ಥಾಪನೆ: ಜಿಲ್ಲಾಧಿಕಾರಿ

Date:

‘ಬೆಂಬಲ ಬೆಲೆ ಯೋಜನೆ’ಯಡಿ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತ ಖರೀದಿಗೆ ಸಿದ್ಧತೆ ನಡೆಸಲಾಗುತ್ತಿದ್ದು, ಮಂಡ್ಯ ಜಿಲ್ಲೆಯಾದ್ಯಂತ 32 ಖರೀದಿ ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ರೈತರು ನವೆಂಬರ್‌ 15ರಿಂದ ಹೆಸರು ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಕುಮಾರ ಅವರು ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ನಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಮಂಡ್ಯ ತಾಲೂಕಿನಲ್ಲಿ 6 ಖರೀದಿ ಕೇಂದ್ರ, ಮದ್ದೂರು 6, ಮಳವಳ್ಳಿ 4, ಕೆ ಆರ್ ಪೇಟೆ 6, ಪಾಂಡವಪುರ 4, ಶ್ರೀರಂಗಪಟ್ಟಣ 4 ಹಾಗೂ ನಾಗಮಂಗಲ ತಾಲೂಕಿನಲ್ಲಿ 2 ಖರೀದಿ ಕೇಂದ್ರ ಸೇರಿದಂತೆ ಒಟ್ಟು 32 ನೋಂದಣಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಖರೀದಿ ಕೇಂದ್ರದಲ್ಲಿ ಭತ್ತ ಮಾರಾಟ ಮಾಡಲು ಇಚ್ಛಿಸುವವರು ನವೆಂಬರ್‌ 15ರಿಂದ ಅಗತ್ಯ ದಾಖಲೆ ಸಲ್ಲಿಸಿ ಹೆಸರು ನೋಂದಣಿ ಮಾಡಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಂಗಾರು ಹಂಗಾಮಿನ ಭತ್ತ ಕಟಾವು ಅವಧಿಗೆ ಸರಿಯಾಗಿ ಖರೀದಿ ಕೇಂದ್ರಗಳು ಸ್ಥಾಪನೆಯಾಗಬೇಕು. ಬೆಂಬಲ ಬೆಲೆ ಯೋಜನೆ ಸಮರ್ಪಕವಾಗಿ ರೈತರಿಗೆ ತಲುಪಬೇಕು. ಖರೀದಿ ಕೇಂದ್ರಗಳಿಗೆ ಬಂದ ರೈತರಿಗೆ ಅವಶ್ಯವಿರುವ ಎಲ್ಲ ಮೂಲ ಸೌಲಭ್ಯ ಒದಗಿಸಬೇಕು. ಕುಡಿಯುವ ನೀರು, ಜಾನುವಾರುಗಳಿಗೆ ನೀರು, ನೆರಳು ಸೇರಿದಂತೆ ಹಲವು ಸೌಲಭ್ಯ ನೀಡಬೇಕು. ಕೇಂದ್ರಕ್ಕೆ ಬರುವ ರೈತರೊಂದಿಗೆ ಸಿಬ್ಬಂದಿ ಸೌಜನ್ಯಯುತವಾಗಿ ವರ್ತಿಸಬೇಕು” ಎಂದು ಸೂಚಿಸಿದರು.

“ಖರೀದಿ ಕೇಂದ್ರಕ್ಕೆ ಭತ್ತ ಮಾರಾಟ ಮಾಡಲು ಫ್ರೂಟ್‌ ಐಡಿ ಹಾಗೂ ಆಧಾರ್ ಕಾರ್ಡ್ ಜೋಡಣೆ ಆಗಿರಬೇಕು. ಜೋಡಣೆ ಆಗದ ರೈತರು ಕೂಡಲೇ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಐಡಿ ಜೋಡಣೆ ಮಾಡಿಸಬೇಕು. ಎನ್‌ಪಿಸಿಐ ಆ್ಯಕ್ಟೀವ್‌ ಇರುವ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಹಾಗೂ ಆಧಾರ್ ಕಾರ್ಡ್ ಪ್ರತಿ ಹಾಜರುಪಡಿಸಿ ಹೆಸರು ನೋಂದಣಿ ಮಾಡಿಕೊಳ್ಳಬೇಕು” ಎಂದು ತಿಳಿಸಿದರು.

ಡಿ.1ರಿಂದ ಭತ್ತ ಖರೀದಿ: “ಹೆಸರು ನೋಂದಣಿ ಮಾಡಿಕೊಂಡ ರೈತರಿಂದ ಡಿಸೆಂಬರ್‌ 1 ರಿಂದ 2024ರ ಮಾರ್ಚ್ 31ರವರೆಗೆ ಭತ್ತ ಖರೀದಿ ಮಾಡಲಾಗುವುದು. ಸಾಮಾನ್ಯ ಗುಣಮಟ್ಟದ ಭತ್ತ ಪ್ರತಿ ಕ್ವಿಂಟಲ್‌ಗೆ ₹ 2,183, ಉತ್ತಮ ಗುಣಮಟ್ಟದ ಎ ಗ್ರೇಡ್‌ ಭತ್ತ ಕ್ವಿಂಟಲ್‌ಗೆ ₹ 2,203ರಂತೆ ನಿಗದಿ ಮಾಡಲಾಗಿದೆ. ಪ್ರತಿ ಎಕರೆಗೆ ಕನಿಷ್ಠ 25 ಕ್ವಿಂಟಲ್ ಗರಿಷ್ಠ 40 ಕ್ವಿಂಟಾಲ್ ಖರೀದಿ ಮಾಡಲಾಗುವುದು” ಎಂದರು.

“ಭತ್ತದ ಗುಣಮಟ್ಟ ಪರಿಶೀಲಿಸಲು ಅವಶ್ಯವಿರುವ ಗ್ರೇಡರ್‌ಗಳನ್ನು ನೇಮಕ ಮಾಡಿ ಅವರಿಗೆ ತರಬೇತಿ ನೀಡಬೇಕು. ರೈತರು ತರುವ ಭತ್ತವನ್ನು ಪಾರದರ್ಶಕವಾಗಿ ಪರಿಶೀಲನೆ ನಡೆಸಿ ಗ್ರೇಡಿಂಗ್‌ ನೀಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಬರ ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಕೋಟ ಶ್ರೀನಿವಾಸ ಪೂಜಾರಿ

ಆಹಾರ ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಕುಮಾರ್ ಮಾತನಾಡಿ “ಕಳೆದ ಸಾಲಿನಲ್ಲಿ 17,642 ಮಂದಿ ರೈತರು ಹೆಸರು ನೋಂದಣಿ ಮಾಡಿಕೊಂಡಿದ್ದರು. 3,068 ಮಂದಿ ರೈತರಿಂದ 80,617 ಕ್ವಿಂಟಲ್ ಭತ್ತ ಖರೀದಿ ಮಾಡಲಾಗಿತ್ತು. ಜಿಲ್ಲೆಯಲ್ಲಿ 7.45 ಲಕ್ಷ ಕ್ವಿಂಟಲ್ ಭತ್ತ ದಾಸ್ತಾನು ಸಾಮರ್ಥ್ಯದ 9 ಗೋದಾಮುಗಳಿವೆ” ಎಂದು ಮಾಹಿತಿ ನೀಡಿದರು.

ಈ ವೇಳೆ ಕೃಷಿ ಇಲಾಖೆ ಜಂಟಿ ನಿರ್ದೆಶಕ ವಿ ಎಸ್‌ ಅಶೋಕ್‌, ಎಪಿಎಂಸಿ ಉಪನಿರ್ದೇಶಕ ಶ್ರೀನಿವಾಸ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...