ಮಂಡ್ಯ | ರಸ್ತೆ ಬದಿ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಸ್ಥಳದಲ್ಲೇ ಸಾವು

Date:

ರಸ್ತೆ ಬದಿ ನಿಂತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ಗೆ ವೇಗವಾಗಿ ಬಂದ್ ಕಾರ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ಳೂರು ಕ್ರಾಸ್ ಬಳಿ ನಡೆದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆ ಎದುರು ರಸ್ತೆ ಬದಿ ನಿಂತಿದ್ದ ಕೆಎಸ್​ಆರ್​ಟಿಸಿ ಬಸ್​​​ಗೆ ​ಹಾಸನ ಕಡೆಯಿಂದ ಬಂದ KA-02 MM 1802 ನಂಬರಿನ ಸ್ವಿಫ್ಟ್ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ.

ವೇಗವಾಗಿ ಬಂದ ಕಾರು ಬಸ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ, ಮೂವರು ಪುರುಷರು ಸೇರಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂದಿನ ಅರ್ಧ ಭಾಗ ಬಸ್​ನೊಳಗೆ ಹೊಕ್ಕಿದೆ. ಇನ್ನು ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಮೃತರನ್ನು ಬೆಂಡಿಗನಹಳ್ಳಿ ನಮಿತಾ, ಇನ್ಫೋಸಿಸ್ ನೌಕರ ರಾಜಸ್ಥಾನದ ಪಂಕಜ್ ಶರ್ಮಾ, ವಂಶಿಕೃಷ್ಣ ಹೊಸಕೋಟೆ ಹಾಗೂ ರಘುನಾಥ್ ಭಜಂತ್ರಿ ಧಾರವಾಡ ಎಂದು ಗುರುತಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಎಂಟಿಸಿ ಆ್ಯಪ್ ಬಿಡುಗಡೆ ; ಬಸ್‌ಗಳ ನೈಜ ಸಮಯ ಲಭ್ಯ

ಘಟನೆ ವಿಷಯ ತಿಳಿದು ಸ್ಥಳಕ್ಕೆ ಬೆಳ್ಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...