ಮಂಡ್ಯ | ಧ್ವಜ ವಿವಾದದ ಹಿನ್ನೆಲೆ; ಶಾಂತಿ ಕಾಪಾಡಲು ತಹಶೀಲ್ದಾರ್‌ಗೆ ಮನವಿ

Date:

ಈಕೆ ಆರ್‌ ಪೇಟೆ ಟಿಬಿ ವೃತ್ತದಲ್ಲಿ ಕೆಲವು ದಿನಗಳ ಹಿಂದೆ ನೀಲಿ ಧ್ವಜವನ್ನು ತೆರವುಗೊಳಿಸಿ ಕೇಸರಿ ಧ್ವಜವನ್ನು ಹಾರಿಸಿದ್ದರ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಇರುವ ಬಿಗುವಿನ ವಾತಾವರಣವನ್ನು ತಿಳಿಗೊಳಿಸಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಲಿತ ಮುಖಂಡರು ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಹಶೀಲ್ದಾರ್ ನಿಸರ್ಗಪ್ರಿಯ ಅವರಿಗೆ ಮನವಿ ಸಲ್ಲಿಸಿದರು.

ಕೆಆರ್‌ಪೇಟೆ ಪಟ್ಟಣದ ಸರಕಾರಿ ಬಸ್ ನಿಲ್ದಾಣದ ಎದುರು ಯಾವುದೇ ಅನುಮತಿ ಇಲ್ಲದೆ ದೊಡ್ಡ ಕಂಬ ನೆಟ್ಟು ಸಂಘಪರಿವಾರದ ಧ್ವಜ ಹಾರಿಸಿರುವುದನ್ನು ತೆರವುಗೊಳಿಸಬೇಕು. ತಾಲೂಕಿನಾದ್ಯಂತ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ವಿವಾದಿತ ಧ್ವಜವನ್ನು ಹಾರಿಸಲು ಅನುಮತಿ ನೀಡಬಾರದು ಹಾಗೂ ಅಂಬೇಡ್ಕರ್ ಪುತ್ಥಳಿ ಸ್ಥಾಪಿಸಲು ಅನುಮತಿ ಕೊಡಿ ಎಂದು ಒತ್ತಾಯಿಸಿದರು.

ಸಂಘ ಪರಿವಾರದವರು ಶಾಂತಿ ಸುವ್ಯವಸ್ಥೆಯನ್ನು ಕದಡುವ ಹುನ್ನಾರದ ಭಾಗವಾಗಿ ಧ್ವಜ ಹಾಗೂ ಕಳಸ ಪ್ರಕರಣವನ್ನು ಹುಟ್ಟು ಹಾಕಿ ವಿವಾದ ಮಾಡುತ್ತಿದ್ದಾರೆ. ಆದ್ದರಿಂದ ಇಂತಹ ಹುನ್ನಾರಗಳಿಗೆ ಅನುವು ಕೊಡದಂತೆ ತಾಲೂಕಿನಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್ | ಬಿಜೆಪಿ ಮಿತ್ರರಾದ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ತಮ್ಮ ರಾಜ್ಯಕ್ಕೆ ಗಳಿಸಿದ್ದೇನು?

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಬಸ್ತಿ ರಂಗಪ್ಪ , ಗಂಗಾಧರ್ , ಕಾರ್ತಿಕ್ , ಪುರಸಭಾ ಸದಸ್ಯರಾದ ಪ್ರೇಮ್ ಕುಮಾರ್, ಗಿರೀಶ್ , ದಸಂಸ ತಾಲೂಕು ಸಂಚಾಲಕ ರಂಗಸ್ವಾಮಿ, ಕತ್ತರಘಟ್ಟ ರಾಜೇಶ್, ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಮಾಂಬಳ್ಳಿ ಜಯರಾಮು , ತಾಲ್ಲೂಕು ಅಧ್ಯಕ್ಷ ಊಚನಹಳ್ಳಿ ನಟರಾಜು, ಭೀಮಸೇನೆ ತಾಲ್ಲೂಕು ಅಧ್ಯಕ್ಷ ಗಣೇಶ್, ದಲಿತ ಸೇನೆ ಜಿಲ್ಲಾಧ್ಯಕ್ಷ ನಾಟನಹಳ್ಳಿ ಮಂಜು, ಹರಿಹರಪುರ ನರಸಿಂಹ, ಮುದುಗೆರೆ ಮಹೇಂದ್ರ ಹಾಗೂ ಇತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...