ಮಂಡ್ಯ ಭ್ರೂಣಹತ್ಯೆ ಪ್ರಕರಣ; ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿ ನರ್ಸ್‌

Date:

ಭ್ರೂಣಹತ್ಯೆ ಕುರಿತ ಹಲವಾರು ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾರೆ. ʼತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ ಹಾಗೂ 6 ತಿಂಗಳ ಮಗುವನ್ನೂ ಹೊರೆತೆಗೆದಿದ್ದೇನೆʼ ಎಂದು ತಪ್ಪೊಪ್ಪಿಕೊಂಡಿದ್ದಾಳೆ.

ಮಂಡ್ಯ, ಮೈಸೂರು ಭ್ರೂಣ ಹತ್ಯೆ ಪ್ರಕರಣದಲ್ಲಿ ಪೊಲೀಸರು ನರ್ಸ್ ಮಂಜುಳಾ ಎಂಬಾಕೆಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಮಾಹಿತಿಯನ್ನು ಆಕೆ ಬಹಿರಂಗಪಡಿಸಿದ್ದಾಳೆ.

“ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ. ಆ ಮಕ್ಕಳಿಗೆ ಜೀವ ಇರುತ್ತಿತ್ತು. 6 ತಿಂಗಳ ಮಗುವಿಗೆ ಧ್ವನಿ ಇರುವುದಿಲ್ಲ. ಮಗು ಹೊರಗೆ ತೆಗೆದ 5 ರಿಂದ 10 ನಿಮಿಷದಲ್ಲಿ ಸಾಯುತ್ತಿತ್ತು. ಅದನ್ನು ಪೇಪರ್‌ನಲ್ಲಿ ಸುತ್ತಿ ನಿಸಾರ್‌ಗೆ ಕೊಡುತ್ತಿದ್ದೆ. ನಿಸಾರ್ ಆ ಮಗುವನ್ನು ತೆಗೆದುಕೊಂಡು ಹೋಗಿ ಕಾವೇರಿ ನದಿಗೆ ಬಿಸಾಕಿ ಬರುತ್ತಿದ್ದ. 12 ವಾರ ಕಳೆದ ಮಕ್ಕಳನ್ನು ಅಬಾರ್ಷನ್ ಮಾಡಿ ಮೆಡಿಕಲ್ ವೇಸ್ಟ್‌ಗೆ ಹಾಕುತ್ತಿದ್ದೆವು. 4 ದಿನಕ್ಕೆ ಮೆಡಿಕಲ್ ವೇಸ್ಟ್‌ನಲ್ಲಿ ಮಗು ಕೊಳೆತು ಹೋಗುತ್ತಿತ್ತು” ಎಂದು ಹೇಳಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದೊಂದು ವರ್ಷದಿಂದ ನಾನು ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದೆ. ಈ ವೇಳೆ ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ. ಈ ಮೊದಲು ರೀಸ್ಮಾ ಅಬಾರ್ಷನ್ ಮಾಡುವ ಕೆಲಸವನ್ನು ಮಾಡುತ್ತಿದ್ದಳು. ಅವಳಾದ ಬಳಿಕ ನಾನು ಮಗುವನ್ನು ಅಬಾರ್ಷನ್ ಮಾಡುವುದಕ್ಕೆ ಸೇರಿಕೊಂಡಿದ್ದೆ. ಈ ವೇಳೆ 6 ತಿಂಗಳ ಮಗುವನ್ನೂ ಅಬಾರ್ಷನ್ ಮಾಡಿರುವ ಪ್ರಕರಣಗಳಿವೆ” ಎಂದು ಒಪ್ಪಿಕೊಂಡಿದ್ದಾಳೆ.

“ನಿಸಾರ್ ಮಗುವನ್ನು ಕಾವೇರಿ ನದಿಗೆ ಎಸೆದು ಬರುತ್ತಿದ್ದ. ಯಾವ ಜಾಗದಲ್ಲಿ ಆ ಮಗುವನ್ನು ಬಿಸಾಕುತ್ತಿದ್ದ ಎಂಬುದರ ಕುರಿತು ನನಗೆ ಮಾಹಿತಿ ಇಲ್ಲ. ನದಿಯನ್ನು ಬಿಟ್ಟು ಬೇರೆ ಜಾಗದಲ್ಲಿ ಬಿಸಾಕಿದರೆ ಅವಷೇಶಗಳು ಸಿಕ್ಕಿಬಿಡುತ್ತವೆಂದು ನಿಸಾರ್ ಮಗುವನ್ನು ನದಿಯಲ್ಲಿ ಬಿಸಾಕುವ ಕೆಲಸ ಮಾಡುತ್ತಿದ್ದ. ಭ್ರೂಣ ಹತ್ಯೆ ಮಾಡಿದ ಬಳಿಕ ತೀರಾ ರಕ್ತಸ್ರಾವ ಆಗುತ್ತಿತ್ತು. ಆಗ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳಲು ಆಗುತ್ತಿರಲಿಲ್ಲ. ಆರು ತಿಂಗಳ ಮಗುವನ್ನು ಅಬಾರ್ಷನ್ ಮಾಡುವುದಕ್ಕೆ ಬೇರೆಯೇ ಕಾರಣ ಇತ್ತು. ನಮ್ಮ ಬಳಿ ಅಡ್ವಾನ್ಸ್ ಸ್ಕ್ಯಾನಿಂಗ್ ಮೆಷಿನ್ ಇರಲಿಲ್ಲ. ಕೆಲವೊಮ್ಮೆ ಹೆಣ್ಣು ಭ್ರೂಣನಾ? ಗಂಡು ಭ್ರೂಣನಾ ಎಂದು ಗೊತ್ತಾಗುತ್ತಿರಲಿಲ್ಲ. ಲಿಂಗ ಪತ್ತೆಯಾಗದೇ ಇದ್ದಾಗ ತಿಂಗಳು ಬಿಟ್ಟು ಬರೋದಕ್ಕೆ ಹೇಳುತ್ತಿದ್ದೆವು. ಹೀಗಾಗಿ ಮಗುವನ್ನು ಕಂಡು ಹಿಡಿಯಲು ತಡ ಆದಾಗ 6 ತಿಂಗಳ ಮಗುವನ್ನು ಅಬಾರ್ಷನ್ ಮಾಡಲಾಗುತ್ತಿತ್ತು” ಎಂದು ತಿಳಿಸಿದ್ದಾಳೆ.

“6 ತಿಂಗಳ ಮಗು ಅಬಾರ್ಷನ್ ಮಾಡಲು ನಮ್ಮದೇ ಕಾರಣ. ಕೆಲವೊಮ್ಮೆ 6 ತಿಂಗಳ ಮಗುವನ್ನು ಸಿಸೇರಿಯನ್ ಮೂಲಕ ಹೆರಿಗೆ ರೀತಿಯಲ್ಲಿ ಮಾಡುತ್ತಿದ್ದೆವು. ತಾಯಿಗೆ ಪ್ರಜ್ಞೆ ಇಲ್ಲದಂತೆ ಮಾಡಿ ಸಿ ಸೆಕ್ಷನ್ ಮೂಲಕ ಮಗುವನ್ನು ತೆಗೆದು ಟೇಬಲ್ ಮೇಲೆ ಇಡಲಾಗುತ್ತಿತ್ತು. 5 ರಿಂದ 10 ನಿಮಿಷಕ್ಕೆ ಆ ಮಗು ಸಾಯುತ್ತಿತ್ತು” ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

“ಅಸಲಿ ಡಾ. ಚಂದನ್ ಬಲ್ಲಾಳ್ ಎಂಬಿಬಿಎಸ್ ಡಾಕ್ಟರ್ ಅಲ್ಲವೇ ಅಲ್ಲ. ಅವನು ಸ್ಕ್ಯಾನಿಂಗ್ ಮಾಡೋ ಪಾಠವನ್ನೇ ಕಲಿತಿರಲಿಲ್ಲ. ಚಂದನ್ ಬಲ್ಲಾಳ್ ಬಿಎಎಂಎಸ್ ಓದಿರುವ ಡಾಕ್ಟರ್. ಈತ ಕೇವಲ ಆಯುರ್ವೇದದ ಚಿಕಿತ್ಸೆಯನ್ನು ಮಾತ್ರ ಕೊಡಬೇಕಿತ್ತು. ನರ್ಸಿಂಗ್ ಹೋಂ ತೆಗೆಯಲು ಈತನಿಗೆ ವಿದ್ಯಾರ್ಹತೆ ಇಲ್ಲ. ಆದರೂ ನರ್ಸಿಂಗ್ ಹೋಂ ತೆಗೆದಿದ್ದ” ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಹಿನ್ನೆಲೆ

ಅಕ್ಟೋಬರ್​​ನಲ್ಲಿ ಭ್ರೂಣಹತ್ಯೆ ಸಂಬಂಧ ಬೈಯಪ್ಪನಹಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದರು. ತನಿಖೆ ವೇಳೆ ಬೃಹತ್ ಜಾಲ ಇರುವುದು ಪತ್ತೆಯಾಗಿದೆ. ಅದರಂತೆ ವೈದ್ಯರು ಸೇರಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಾಗ ಎರಡು ವರ್ಷಗಳಲ್ಲಿ 900ಕ್ಕೂ ಅಧಿಕ ಭ್ರೂಣಹತ್ಯೆ ಮಾಡಿರುವ ಆಘಾತಕಾರಿ ವಿಚಾರಗಳು ಬಹಿರಂಗವಾಗಿವೆ.

ಈ ಸುದ್ದಿ ಓದಿದ್ದೀರಾ? ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

ಮಂಡ್ಯ ಮೂಲದ ನಾಲ್ವರು ವ್ಯಕ್ತಿಗಳು ಬೆಂಗಳೂರಿನ ಆಸ್ಪತ್ರೆಗಳಿಗೆ ಭ್ರೂಣ ಪತ್ತೆಗೆ ಬರುವವರ ಮಾಹಿತಿ ಕಲೆಹಾಕಿದ್ದರು. ಬಳಿಕ ಮಧ್ಯವರ್ತಿಗಳ ಸಹಾಯದಿಂದ ಮಂಡ್ಯ ತಾಲೂಕಿನ ಹುಲ್ಲೇನಹಳ್ಳಿ ಹಾಡ್ಯದಲ್ಲಿರುವ ಆಲೆಮನೆಗೆ ಗರ್ಭಿಣಿಯರನ್ನು ಕರೆಸಿಕೊಂಡು ಲಿಂಗ ಪತ್ತೆಮಾಡಿ ಹತ್ಯೆ ಮಾಡುತ್ತಿರುವ ವಿಚಾರವೂ ಬೆಳಕಿಗೆ ಬಂದಿತ್ತು. ಈ ಪ್ರಕರಣವನ್ನು ಇದೀಗ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...