ಮಂಡ್ಯ | ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರು ಕಾಮುಕ ಆರೋಪಿಗಳ ಬಂಧನ

Date:

ಅಪ್ರಾಪ್ತ ಬಾಲಿಕಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ತೊರೆಬೊಮ್ಮನಹಳ್ಳಿ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ನ.4ರಂದು ಸಮೂಹಿಕ ಅತ್ಯಾಚಾರ ನಡೆಸಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪುನೀತ್, ಮಂಜುನಾಥ್ ಹಾಗೂ ಸಿದ್ದಾರ್ಥ ಬಂಧಿತ ಆರೋಪಿಗಳು. ಈ ಮೂವರ ವಿರುದ್ಧ ಬಾಲಕಿಯ ಪೋಷಕರು ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. “ಮೂವರು ಕಾಮುಕರು ತಮ್ಮ ಮಗಳನ್ನು ಪುಸಲಾಯಿಸಿ ಕರೆದೊಯ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಮನೆಗೆ ಬಂದು ಕಿರುಕುಳ ನೀಡುತ್ತಿದ್ದಾರೆ” ಎಂದು ದೂರಿನಲ್ಲಿ ವಿರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ವಿವರ

ಬಾಲಕಿ ಮೈಸೂರಿನಲ್ಲಿ ನಡೆದ ಯುವ ದಸರಾದಲ್ಲಿ ಭಾಗಿಯಾಗಿದ್ದರು. ಆ ವೇಳೆ, ಪುನೀತ್ ಎಂಬಾತ ಆಕೆಗೆ ಪರಿಚಯವಾಗಿದ್ದ. ಆಕೆಯನ್ನು ಪ್ರೀತಿಸುತ್ತಿರುವುದಾಗಿ ಪೀಡಿಸುತ್ತಿದ್ದ.

ನ.4ರಂದು ಸುಮಾರು 11 ಗಂಟೆಗೆ ನನ್ನ ಮಗಳನ್ನು ಕೆ.ಎಂ ದೊಡ್ಡಿಯಿಂದ ಮದ್ದೂರಿಗೆ ಕರೆದೊತಯ್ದಿದ್ದ ಪುನೀತ್, ಮದ್ದೂರಿನಲ್ಲಿ ಹಣ್ಣಿನ ಜ್ಯೂಸ್ ಕುಡಿಸಿದ್ದಾನೆ. ಬಳಿಕ , ಆಕೆಯನ್ನು ಶಿವಪುರದ ಲಾಡ್ಜ್‌ವೊಂದಕ್ಕೆ ಕರೆದುದೊಯ್ದು ಪುನೀತ್ ಅತ್ಯಾಚಾರವೆಸಗಿದ್ದಾನೆ. ನಂತರ, ಆತನ ಸ್ನೇಹಿತ ಮಂಜುನಾಥ ಹಾಗೂ ಸಿದ್ಧಾರ್ಥ ಕೂಡ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಕೃತ್ಯವನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕಸಿಕೊಂಡು ಬೆದರಿಕೆ ಹಾಕಿದ್ದಾರೆ. ಕೃತ್ಯದ ಬಗ್ಗೆ ಯಾರಿಗಾದರೂ ಹೇಳಿದರೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್‌ಮೇಲೆ ಮಾಡಿದ್ದಾರೆ. ವಿಡಿಯೋವನ್ನು ಮಗಳಿಗೆ ಕಳುಹಿಸಿ ನಾವು ಕರೆದಾಗೆಲ್ಲ ಬರಬೇಕೆಂದು ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಪೋಷಕರು ವಿವರಿಸಿದ್ದಾರೆ.

ಮೂವರು ಅತ್ಯಾಚಾರಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 114, 323, 324, 363, 360, 367 ಮತ್ತು ಪೋಕ್ಸೋ ಹಾಗೂ ಅಟ್ರಾಸಿಟಿ ಪ್ರಕರಣ ದಾಖಲಿಕೊಂಡಿರುವ ಮದ್ದೂರು ಪೊಲೀಸರು, ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...