ಮಂಡ್ಯ | ಇದು ಕೆರೆಯಲ್ಲ ಬಸ್ ನಿಲ್ದಾಣ; ರಾಜಕಾಲುವೆ ಒತ್ತುವರಿ ಸೃಷ್ಟಿಸಿದ ಅವಾಂತರ

Date:

ಸೋಮವಾರ ಸಂಜೆ‌ ಸುರಿದ ಮಳೆಯ ಪರಿಣಾಮ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಸಂಪೂರ್ಣ ಜಲಾವೃತಗೊಂಡಿದೆ. ನಿಲ್ದಾಣದಲ್ಲಿದ್ದ ಹೋಟೆಲ್‌, ಅಂಗಡಿಗಳಿಗೂ ನೀರು ತುಂಬಿಕೊಂಡು ಲಕ್ಷಾಂತರ ರೂ. ನಷ್ಟವಾಗಿದೆ. ರಾಜಕಾಲುವೆ ಒತ್ತುವರಿಯಾಗಿರುವುದೇ ಇದಕ್ಕೆಲ್ಲ ಪ್ರಮುಖ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.

ಕೆ.ಆರ್‌ ಪೇಟೆಯಲ್ಲಿ ನಿನ್ನೆ (ಸೋಮವಾರ) ಮಳೆ ಅಬ್ಬರಿಸಿದೆ. ಅಬ್ಬರಕ್ಕೆ ಪಟ್ಟಣದ ಬಸ್‌ ನಿಲ್ದಾಣ ತತ್ತರಿಸಿದೆ. ನಿಲ್ದಾಣದಲ್ಲಿ ಸರಾಗವಾಗಿ ನೀರು ಹರಿದುಹೋಗುವಂತೆ ಸರಿಯಾದ ರೀತಿಯಲ್ಲಿ ಕಾಮಗಾರಿ ನಡೆಯದೇ ಇರುವುದೇ ನೀರು ತುಂಬಿಕೊಳ್ಳಲು ಕಾರಣವೆಂದು ಹೇಳಲಾಗಿದೆ. ಈ ಹಿಂದೆಯೂ ಬಸ್‌ ನಿಲ್ದಾಣ ಇದೇ ರೀತಿ ಜಲಾವೃತವಾಗಿತ್ತು ಎಂಬುದು ಗಮನಾರ್ಹ.

ಇದೀಗ, ಬಸ್‌ ನಿಲ್ದಾಣ ಮತ್ತೆ ಜಲಾವೃತವಾಗಿದೆ. ಬಸ್‌ ನಿಲ್ದಾಣದಲ್ಲಿದ್ದ ಬೈಕ್‌ ಸ್ಟಾಂಡ್‌ ಕೂಡ ಜಲಾವೃತವಾಗಿದ್ದು, ಅಲ್ಲಿದ್ದ ಬೈಕ್‌ಗಳು ನೀರಿನಲ್ಲಿ ಮುಳುಗಿವೆ. ಬೈಕ್‌ಗಳ ಎಂಜಿನ್‌ಗಳಿಗೆ ಹಾನಿಯಾಗಿದ್ದು, ರಿಪೇರಿಗಾಗಿ ಬೈಕ್‌ ಮಾಲೀಕರು ಸಾವಿರಾರು ರೂಪಾಯಿ ವೆಚ್ಚ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2023 10 17 at 9.11.48 AM

ಬೈಕ್ ಸ್ಟಾಂಡ್‌ನಲ್ಲಿ ಯಾವುದೇ ಮೂಲ ಸೌಕರ್ಯವಿಲ್ಲದೇ ಇದ್ದರೂ, ದುಬಾರಿ ಶುಲ್ಕ ವಿಧಿಸಲಾಗುತ್ತಿದೆ. ಬೈಕುಗಳ ಸುರಕ್ಷತೆಗೆ ಯಾವುದೇ ನೆರಳಿನ ವ್ಯವಸ್ಥೆ ಮಾಡಿಲ್ಲ. ಬೈಕ್ ಕಳ್ಳತನವಾದರೆ ವಿಮಾ ಸೌಲಭ್ಯ ಒದಗಿಸಿಲ್ಲ ಎಂದು ಬೈಕ್‌ ಮಾಲೀಕರು ಕಿಡಿಕಾರಿದ್ದಾರೆ.

ಬಸ್‌ ನಿಲ್ದಾಣದಲ್ಲಿ ನೀರು ತುಂಬಿಕೊಳ್ಳುವುದಕ್ಕೆ ಮೂಲ ಕಾರಣ, ರಾಜಕಾಲುವೆ ಒತ್ತುವರಿಯಾಗಿರುವುದು. ಮಳೆಯ ನೀರು ಹೋರಹೋಗಲು ಸಾಧ್ಯವಾಗದೇ ಬಸ್ ನಿಲ್ದಾಣಕ್ಕೆ ನುಗ್ಗುತ್ತಿದೆ. ಈ ನೀರು ಬಸ್ ನಿಲ್ದಾಣದಿಂದ ಹೊರ ಹೋಗಲು ವೈಜ್ಞಾನಿಕ ಒಳಚರಂಡಿ ವ್ಯವಸ್ಥೆಯನ್ನೂ ಮಾಡಲಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತೀಚೆಗಷ್ಟೇ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಬಸ್‌ ನಿಲ್ದಾಣದಲ್ಲಿ ಒಳಚರಂಡಿ ವ್ಯವಸ್ಥೆ ಮಾಡಲಾಗಿದೆ. ಆದರೂ, ಯಾವುದೇ ಪ್ರಯೋಜನವಾಗಿಲ್ಲ. ಸಮಸ್ಯೆ ಹಾಗೇ ಉಳಿದಿದೆ ಎಂದು ಕಿಡಿಕಾರಿದ್ದಾರೆ.

WhatsApp Image 2023 10 17 at 9.11.48 AM 1

ಮಳೆ ನೀರು ಬಸ್ ನಿಲ್ದಾಣದಲ್ಲಿ ತುಂಬಿಕೊಂಡ ಹಿನ್ನೆಲೆಯಲ್ಲಿ ನಿಲ್ದಾಣದಲ್ಲಿರುವ ಬೇಕರಿಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ತಿಂಡಿ, ತಿನಿಸುಗಳು ನೀರಿನಲ್ಲಿ ತೋಯ್ದುಹೋಗಿವೆ. ದುಬಾರಿ ಬಾಡಿಗೆ ನಿಗದಿ ಮಾಡುವಲ್ಲಿ ನಿಸ್ಸೀಮರಾಗಿರುವ ಸಾರಿಗೆ ನಿಗಮ, ಬಾಡಿಗೆದಾರರ ಹಿತ ಕಾಯುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ನಷ್ಟಕ್ಕೆ ಒಳಗಾದ ತನ್ನ ಬಾಡಿಗೆದಾರರಿಗೆ ನಷ್ಟ ಪರಿಹಾರ ನೀಡಬೇಕು ಅಥವಾ ಕನಿಷ್ಠ ಬಾಡಿಗೆಯನ್ನಾದರೂ ಮನ್ನಾ ಮಾಡುವ ಬಗ್ಗೆ ಚಿಂತನೆ ಮಾಡಬೇಕು ಎಂದು ಬಸ್‌ ನಿಲ್ದಾಣದ ಅಂಗಡಿ ವರ್ತಕರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...