​ಮಂಡ್ಯ | ಯುವಜನರ ಭಾವನೆಗಳ ಜತೆಗಿನ ರಾಜಕೀಯ ಚೆಲ್ಲಾಟ ನಿಲ್ಲಿಸಿ: ಸಿಪಿಐಎಂ

Date:

​ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗಾಗಿ ಭೂಮಿ ಪಡೆಯುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ನಡೆಸುತ್ತಿರುವ ಆರೋಪ-ಪ್ರತ್ಯಾರೋಪಗಳನ್ನು ತೀವ್ರ ಖಂಡನೀಯ. ಜಿಲ್ಲೆಯ ನಿರುದ್ಯೋಗಿ ಯುವಜನರ ಭವಿಷ್ಯದ ಜತೆ ರಾಜಕೀಯ ಮಾಡುವುದನ್ನು ಬಿಟ್ಟು, ಕೈಗಾರಿಕೆ ಸ್ಥಾಪನೆಯ ಕುರಿತು ನಿರ್ದಿಷ್ಟ ಮಾಹಿತಿಯನ್ನು ಜನರ ಮುಂದಿಡಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಒತ್ತಾಯಿಸಿದೆ.

ಮಂಡ್ಯ ಜಿಲ್ಲಾ ಕಾರ್ಯದರ್ಶಿ ​ಟಿ ಎಲ್ ಕೃಷ್ಣೇಗೌಡ, ಎನ್ ಎಲ್ ಭರತ್‌ರಾಜ್, ಬಿ ಹನುಮೇಶ್ ಮತ್ತು ಚಂದ್ರಶೇಖರ್ ಅವರು ​ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “​ಜಿಲ್ಲೆಯ ಯುವಜನತೆ ನಿರುದ್ಯೋಗದಿಂದ ಕಂಗಾಲಾಗಿದ್ದಾರೆ. ಈ ವೇಳೆ ಸಾರ್ವಜನಿಕ ವಲಯದಲ್ಲಿ ಆಧುನಿಕ ತಂತ್ರಜ್ಞಾನದ ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗಾವಕಾಶ ನೀಡುವ ಕೆಲಸವಾಗಬೇಕಿದೆ” ಎಂದರು.

“ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕೇವಲ ರಾಜಕೀಯ ಭಾಷಣ ಮಾಡದೆ, ಯಾವ ಕಂಪನಿ ಬರಲಿದೆ? ಎಷ್ಟು ಬಂಡವಾಳ ಹೂಡಿಕೆಯಾಗಲಿದೆ? ಎಷ್ಟು ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ? ಎಂಬ ನೀಲ ನಕ್ಷೆಯನ್ನು ಜನರ ಮುಂದೆ ಮಂಡಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​”ಈಗಾಗಲೇ ಇರುವ ಕೆಐಎಡಿಬಿ(KIADB) ನಿವೇಶನಗಳಲ್ಲಿ ಕೈಗಾರಿಕೆ ಆರಂಭಿಸಲಾಗುವುದೇ ಅಥವಾ ಹೊಸದಾಗಿ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುವುದೇ ಎಂಬ ಬಗ್ಗೆ ಸ್ಪಷ್ಟತೆ ನೀಡಬೇಕು” ಎಂದು ಒತ್ತಾಯಿಸಿದರು.

​ಜವಾಬ್ದಾರಿಯುತ ರಾಜಕಾರಣ: ʼರಾಜ್ಯ ಸರ್ಕಾರ ಭೂಮಿ ನೀಡುತ್ತಿಲ್ಲʼವೆಂಬ ಕೇಂದ್ರದ ಆರೋಪ ಮತ್ತು ʼಯಾವುದೇ ಪ್ರಸ್ತಾವನೆ ಬಂದಿಲ್ಲʼವೆಂಬ ರಾಜ್ಯದ ಪ್ರತ್ಯಾರೋಪಗಳ ನಡುವೆ ಜಿಲ್ಲೆಯ ಅಭಿವೃದ್ಧಿ ಬಲಿಯಾಗಬಾರದು ಎಂದರು.

​ಸಾರಿಗೆ ವ್ಯವಸ್ಥೆ ಖಾಸಗೀಕರಣಕ್ಕೆ ವಿರೋಧ: “​ಸಾರಿಗೆ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಗುಪ್ತ ಕಾರ್ಯಸೂಚಿಯನ್ನು ಸಿಪಿಐಎಂ ವಿರೋಧಿಸಿದೆ. ಹೊಸ ವಿದ್ಯುತ್ ಬಸ್ ಖರೀದಿಸಲು ನೀಡಲಾಗುತ್ತಿರುವ ₹2,000 ಕೋಟಿ ಸಬ್ಸಿಡಿಯನ್ನು ಟಾಟಾ, ವೋಲ್ವೋದಂತಹ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ ಘರ್ಷಣೆ ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ ಸೂಚನೆ

“ಈ ಹಣವನ್ನು ನೇರವಾಗಿ ಸರ್ಕಾರಿ ಸಾರಿಗೆ ನಿಗಮಗಳಿಗೆ ನೀಡಿದರೆ, ಸಾರಿಗೆ ವ್ಯವಸ್ಥೆ ಉತ್ತಮಗೊಳ್ಳುವುದಲ್ಲದೆ ಕಾಯಂ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಖಾಸಗಿ ಕಂಪೆನಿಗಳಿಗೆ ಲಾಭ ಮಾಡಿಕೊಡುವ ಜನವಿರೋಧಿ ಕ್ರಮಗಳನ್ನು ಕೂಡಲೇ ನಿಲ್ಲಿಸಬೇಕು” ಎಂದು ಸಮಿತಿ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...