ಒನ್ ಟೈಮ್ ಸೆಟಲ್ ಮೆಂಟ್ | ಬ್ಯಾಂಕ್‌ಗಳು ರೈತರಿಗೆ ಸೂಕ್ತ ಸಲಹೆ ನೀಡಲಿ: ಹೆಚ್ ಡಿ ಕುಮಾರಸ್ವಾಮಿ ಸೂಚನೆ

Date:

ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ಮಾಡಬೇಕು ಹಾಗೂ ಪುನಃ ಸಾಲ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬ್ಯಾಂಕುಗಳಿಗೆ ಸೂಚಿಸಿದರು.

ಮಂಡ್ಯದಲ್ಲಿ ನಡೆದ ಜಿಲ್ಲಾ ಬ್ಯಾಂಕರುಗಳ ಸಭೆಯಲ್ಲಿ ಆನ್‌ಲೈನ್ ವೇದಿಕೆ ಮೂಲಕ ಭಾಗಿಯಾಗಿ ಮಾತನಾಡಿದ ಸಚಿವರು, “ನಾನಾ ಉದ್ದೇಶಗಳಿಗೆ ರೈತರು ಪಡೆಯುವ ಸಾಲಗಳಿಗೆ ಬಡ್ಡಿ ಜಾಸ್ತಿ ಎನ್ನುವ ದೂರುಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ಅವರು ಏಕಕಾಲಕ್ಕೆ ತಮ್ಮ ಸಾಲವನ್ನು ಪಾವತಿ ಮಾಡಲು ಮುಂದಾಗುತ್ತಿದ್ದಾರೆ. ಅಂತಹ ರೈತರಿಗೆ ಬ್ಯಾಂಕುಗಳು ಸಹಕರಿಸಬೇಕು” ಎಂದು ಹೇಳಿದರು.

“ಕೃಷಿಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರ ಸಾಲದ ಬಡ್ಡಿ ಹೆಚ್ಚಾಗಿದೆ ಎಂದು ದಿನವೂ ದೂರುಗಳು ಬರುತ್ತಿವೆ. ಅದಕ್ಕಾಗಿಯೇ ಅವರು ಒಂದೇ ಬಾರಿಗೆ ಹಣ ಪಾವತಿ ಮಾಡಲು ಶ್ರಮಿಸುತ್ತಿದ್ದಾರೆ. ಅಂತಹ ಸಂದರ್ಭದಲ್ಲಿ ಬ್ಯಾಂಕುಗಳು ಸೌಜನ್ಯದಿಂದ ವರ್ತಿಸಬೇಕು. ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ಕಠಿಣವಾಗಿ ನಡೆದುಕೊಳ್ಳಬೇಡಿ” ಎಂದು ಕೇಂದ್ರ ಸಚಿವರು ಸ್ಪಷ್ಟ ಸೂಚನೆ ಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯುವಕರು, ಮಹಿಳೆಯರು, ಕೃಷಿಕರು ಕೇಂದ್ರದ ಯೋಜನೆಗಳ ಸೌಲಭ್ಯ ಪಡೆಯಲು ಬ್ಯಾಂಕುಗಳು ಸೇತುವೆಯಾಗಿವೆ. ಇದು ಮತ್ತಷ್ಟು ವಿಸ್ತೃತವಾಗಿ ಜನರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಸಚಿವರು ಸಲಹೆ ನೀಡಿದರು.

ಇದೇ ವೇಳೆ ವಾರ್ಷಿಕ ಆರ್ಥಿಕ ಕ್ರೆಡೀಡ್ ರಿಪೋರ್ಟ್ ಬಿಡುಗಡೆ ಮಾಡಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಜಿಲ್ಲೆಯ ಬ್ಯಾಂಕ್ ಗಳ ಮುಖ್ಯಸ್ಥರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕುವಂತೆ ಒತ್ತಾಯಿಸಿ ಪ್ರತಿಭಟನೆ

ರಾಜ್ಯದಲ್ಲಿ ಸಂಪೂರ್ಣ ಒಳಮೀಸಲಾತಿ ಜಾರಿ ಮಾಡುವಂತೆ ಹಾಗೂ ರಾಜ್ಯಪಾಲರು ಒಳಮೀಸಲಾತಿ ವಿಧೇಯಕಕ್ಕೆ...

SIRನಿಂದ ದಲಿತ-ಬುಡಗಟ್ಟು ಸಮುದಾಯದ ಹಕ್ಕುಗಳಿಗೂ ಅಪಾಯ; ಶಿವಸುಂದರ್‌ ಎಚ್ಚರಿಕೆ

ಭಾರತ ಚುನಾವಣಾ ಆಯೋಗದ ಮೂಲಕ ಕೇಂದ್ರ ಸರ್ಕಾರವು ವಿಶೇಷ ಮತದಾರರ ಪಟ್ಟಿ...

ಮಂಡ್ಯ | ಬೂದನೂರು ಉತ್ಸವ-2026: ಯುವಜನತೆ ನಗರದ ಚಿತ್ರಣವನ್ನು ಕಣ್ತುಂಬಿಕೊಳ್ಳಿ; ಎನ್ ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯ ಚಿತ್ರಣವನ್ನು ಪ್ರದರ್ಶನ ಮಾಡುವ ನಿಟ್ಟಿನಲ್ಲಿ ಹೆಲಿಪ್ಯಾಡ್ ಸವಾರಿ ಪ್ರದರ್ಶನ...

ಮಂಡ್ಯ | ಅತಿಯಾದ ಮೊಬೈಲ್ ಬಳಕೆ ಅನಾರೋಗ್ಯಗಳಿಗೆ ರಹದಾರಿ: ಡಾ ನಿಶ್ಚಲಾನಂದ ಸ್ವಾಮೀಜಿ

ಜನಸಾಮಾನ್ಯರು ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿರುವ ಪರಿಣಾಮವಾಗಿ, ಅವರ ದೈಹಿಕ ಮತ್ತು...