ಮಂಡ್ಯ | ಶಿಕ್ಷಕರು ಭವಿಷ್ಯದ ಉತ್ತಮ ಪ್ರಜೆಗಳನ್ನು ತಯಾರು ಮಾಡಿ: ಎನ್ ಚಲುವರಾಯಸ್ವಾಮಿ

Date:

ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಟ್ಟು, ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿ ತಯಾರು ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸಮಾಡಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿಯ ವತಿಯಿಂದ ನಾಗಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

“ಈ ಹಿಂದೆ ಶಿಕ್ಷಕರು ಶಾಲೆ ಇರುವ ಗ್ರಾಮದಲ್ಲೇ ವಾಸ್ತವ್ಯ ಹೂಡಿ ಮಕ್ಕಳಿಗೆ ಸಂಜೆ ಸಮಯದಲ್ಲೂ ಶಿಕ್ಷಣ ಹೇಳಿಕೊಡುತ್ತಿದ್ದರು. ಆದರೆ ಇಂದಿನ ಪರಿಸ್ಥಿತಿ ಹಾಗಿಲ್ಲ. ಬಹುತೇಕ ಶಿಕ್ಷಕರು ತಾಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿದ್ದು, ಶಾಲೆ ಬಿಟ್ಟ ಬಳಿಕ ಮನೆಗೆ ತೆರಳುತ್ತಾರೆ ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸುವುದಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಕ್ಷಕರು ಮಕ್ಕಳ ಭೋದನೆಗೆ ಹೆಚ್ಚು ಸಮಯ ನೀಡಿ. ಶಾಲೆ ಪ್ರಾರಂಭವಾಗುವ ಮುನ್ನವೇ ಶಾಲೆಗೆ ತೆರಳಿ. ಮಕ್ಕಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲೂ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಿ” ಎಂದರು.

“ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ ಗ್ರಾಮೀಣ ಪ್ರದೇಶದ ಮಕ್ಕಳು ಐಎಎಸ್, ಐಪಿಎಸ್ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳಾಗುವಂತೆ ಪ್ರೋತ್ಸಾಹಿಸುವ ಕೇಲಸವಾಗಬೇಕಿದೆ. ಜೊತೆಗೆ ಸಮಾಜದಲ್ಲಿ ಪ್ರಗತಿಪರ ಆಲೋಚನೆ ಮಾಡುವ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ, ಕಟ್ಟಡ ಕಾರ್ಮಿಕರ ಪ್ರತಿಭಟನೆ

“ಸರ್ಕಾರ ಶಿಕ್ಷಕರ ಪರವಾಗಿದೆ. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುತ್ತದೆ” ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ ನಾಗೇಶ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವರಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಹೆಚ್ ಬಿ, ಡಯಟ್ ಸಂಸ್ಥೆಯ ಉಪನಿರ್ದೇಶಕ ಪುರುಷೋತ್ತಮ, ಧನಲಕ್ಷ್ಮಿ ಚಲುವರಾಯಸ್ವಾಮಿ ಸೇರಿದಂತೆ ಇತರ ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...