ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

Date:

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ ಯಶಸ್ಸಿನ ಉತ್ತುಂಗವನ್ನೇರಲು ಸಾಧ್ಯ. ಇದಕ್ಕೆ ಪೂರಕವಾಗಿ ಪುಸ್ತಕಗಳನ್ನು ಓದುವ ಅಭ್ಯಾಸ ಬೆಳಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಪಠ್ಯಕ್ಕಷ್ಟೇ ಸೀಮಿತವಾಗಿರದೆ, ವಿಚಾರ ಸಂಕಿರಣಗಳನ್ನು ಆಲಿಸಬೇಕು, ಪುಸ್ತಕಗಳನ್ನ ಓದಬೇಕು ಎಂದು ಹರಳಹಳ್ಳಿ ಪುಸ್ತಕದ ಮನೆ ಖ್ಯಾತಿಯ ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ತಮ್ಮ ಅಭಿಮತ ವ್ಯಕ್ತಪಡಿಸಿದರು.

ಶ್ರೀರಂಗಪಟ್ಟಣ ತಾಲೂಕಿನ ಚಿನ್ನಾಯಕನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶೇಷಾದ್ರಿಪುರಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಮೈಸೂರಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ, ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅವರು ಮಾತನಾಡಿದರು.

ಮತ್ತೋರ್ವ ಅತಿಥಿಯಾಗಿ ಆಗಮಿಸಿದ್ದ, ಬೆಂಗಳೂರಿನ ಗಾಂಧಿ ಸ್ಮಾರಕ ಭವನದ, ಹಿರಿಯ ಗಾಂಧಿ ವಾದಿ ಪ್ರೊ.ಶಿವರಾಜ್ ಮಾತನಾಡಿ, “ವಿದ್ಯಾರ್ಥಿ ದೆಸೆಯಲ್ಲೇ ಮಹಾತ್ಮ ಗಾಂಧೀಜಿಯವರು ಸಾಮಾಜಿಕ ಚಿಂತನೆಗಳನ್ನ ಒಳಗೊಂಡಿದ್ದರು. ಅಂತೆಯೇ ತಮ್ಮ ಸ್ವಾತಂತ್ರ್ಯ ಹೋರಾಟದ ಜೊತೆಗೆ ಸಬರಮತಿ ಆಶ್ರಮ ಸ್ಥಾಪಿಸಿ, ಕಲ್ಯಾಣ ಕಾರ್ಯಕ್ರಮಗಳನ್ನು ನಡೆಸುತ್ತಿದರು. ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿಯವರ ಚಿಂತನೆಗಳು ಪ್ರಸ್ತುತ ಅತ್ಯಂತ ಅತ್ಯಗತ್ಯ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳಿಗೆ ಶಿಬಿರದ ಅನುಭವಗಳ ಕುರಿತಂತೆ ಪ್ರಬಂಧ ಸ್ವರ್ಧೆ ಏರ್ಪಡಿಸಲಾಗಿದ್ದು, ಆಯ್ಕೆಯಾದ ನಾಲ್ಕು ವಿದ್ಯಾರ್ಥಿಗಳ ಪ್ರಬಂಧಗಳಿಗೆ ಶ್ರೀರಂಗಪಟ್ಟಣದ ಹಿರಿಯ ಗಾಂಧಿವಾದಿ ಡಾ.ಸುಜಯ ಕುಮಾರ್ ರವರು ಗಾಂಧೀಜಿ ಕುರಿತ ಪುಸ್ತಕಗಳನ್ನು ನೀಡಿ ಗೌರವಿಸಿದರು.

ಇದನ್ನೂ ಓದಿ: ಶ್ರೀರಂಗಪಟ್ಟಣ | ಪುರಾತತ್ವ ಇಲಾಖೆಯ ನಿರ್ಲಕ್ಷ್ಯ; ಕೋಟೆ ಪ್ರದೇಶದಲ್ಲಿ ನಿಯಮ ಉಲ್ಲಂಘನೆಯ ಆರೋಪ

ಜೆ.ಎಸ್.ಎಸ್ ಪದವಿ ಪೂರ್ವ ಕಾಲೇಜಿನ, ಉಪನ್ಯಾಸಕರಾದ ಧನಂಜಯ ರವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ.ಕೆ.ಎನ್.ರಾಜಾರಾವ್, ಮಾರ್ಗದರ್ಶಕರು, ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆ ಇವರು ವಹಿಸಿದ್ದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮಾಧಿಕಾರಿ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಡಾ. ರಾಘವೇಂದ್ರ, ಚಿಂತಕ ಕ್ಯಾತನಹಳ್ಳಿ ಚಂದ್ರಣ್ಣ, ಗ್ರಾಮದ ಮುಖಂಡರಾದ ಜಯರಾಮು, ದೇವರಾಜು, ಕರಿಯಣ್ಣ, ಜಯಕುಮಾರ, ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...

​ಮೊಬೈಲ್ ಗೀಳಿಗೆ ಬಿದ್ದು ಪುಸ್ತಕಗಳ ಕಡೆಗಣಿಸದಿರಿ: ವಿದ್ಯಾರ್ಥಿಗಳಿಗೆ ‘ಪುಸ್ತಕದ ಮನೆ’ ಅಂಕೆಗೌಡ ಕಿವಿಮಾತು

​ಪ್ರಪಂಚದ ಯಾವುದೇ ಕ್ಷೇತ್ರದಲ್ಲಿಯೂ ಹಣ, ಅಂತಸ್ತು ಸಂಪಾದನೆಗಿಂತ ಜ್ಞಾನ ಸಂಪಾದನೆ ಅತಿ...