ಗೆಜ್ಜಲಗೆರೆ ಗ್ರಾಪಂ ನಗರಸಭೆ ಸೇರ್ಪಡೆಗೆ ವಿರೋಧ: ಧರಣಿ ಸತ್ಯಾಗ್ರಹಕ್ಕೆ ಕೆಆರ್‌ಎಸ್ ಪಕ್ಷದ ಬೆಂಬಲ

Date:

​ಮದ್ದೂರು ತಾಲೂಕು ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಬುಧವಾರವೂ ಮುಂದುವರಿದಿದ್ದು, ಮಂಡ್ಯ ಜಿಲ್ಲಾ ಕೆಆರ್‌ಎಸ್ (ಕರ್ನಾಟಕ ರಾಷ್ಟ್ರ ಸಮಿತಿ) ಪಕ್ಷವು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಹೋರಾಟಕ್ಕೆ ಪೂರ್ಣ ಬೆಂಬಲ ಘೋಷಿಸಿದೆ.

​ಗೆಜ್ಜಲಗೆರೆಯಲ್ಲಿ ಕಳೆದ 23 ದಿನಗಳಿಂದ ನಿರಂತರವಾಗಿ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು, ವಯೋವೃದ್ಧರು, ಹೆಣ್ಣುಮಕ್ಕಳು ಹಾಗೂ ಗ್ರಾಮಸ್ಥರು ಮಳೆಯನ್ನೂ ಲೆಕ್ಕಿಸದೆ ಭಾಗವಹಿಸುತ್ತಿದ್ದಾರೆ. ವಿವಿಧ ಪ್ರಗತಿಪರ ಸಂಘಟನೆಗಳೂ ಸಹ ಈ ಹೋರಾಟಕ್ಕೆ ಧ್ವನಿಗೂಡಿಸಿವೆ. “ಗ್ರಾಮದ ಅಸ್ಮಿತೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಗೆಜ್ಜಲಗೆರೆಯನ್ನು ನಗರಸಭೆಗೆ ಸೇರಿಸುವ ನಿರ್ಧಾರವನ್ನು ಕೈಬಿಡಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

​ಈ ಸಂದರ್ಭದಲ್ಲಿ ಮಾತನಾಡಿದ ಕೆ.ಆರ್.ಎಸ್ ಪಕ್ಷದ ಮುಖಂಡರು, “ಜನರ ಭಾವನೆಗಳಿಗೆ ವಿರುದ್ಧವಾಗಿ ಸರ್ಕಾರ ಹಾಗೂ ಆಡಳಿತ ಮಂಡಳಿ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ. 23 ದಿನಗಳಿಂದ ಶಾಂತಿಯುತವಾಗಿ ಹೋರಾಟ ನಡೆಯುತ್ತಿದ್ದರೂ ಶಾಸಕರು ಇತ್ತ ಗಮನ ಹರಿಸದಿರುವುದು ವಿಷಾದನೀಯ. ಶಾಸಕರು ಕೂಡಲೇ ಮಧ್ಯಪ್ರವೇಶಿಸಿ ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸಲು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಡ್ಯ | ರೈತರು ಸಮಗ್ರ ಕೃಷಿ, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ

​ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ್ ಜಿ ಎಂ, ಮಂಡ್ಯ ಜಿಲ್ಲಾಧ್ಯಕ್ಷ ಡಿ ಜಿ ನಾಗರಾಜ್, ಜಿಲ್ಲಾ ಉಪಾಧ್ಯಕ್ಷ ಮಲ್ಲೇಶ್ ಹೆಬ್ಬಕವಾಡಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಪ್ರಮೋದ ಎಸ್, ರೈತ ಘಟಕದ ಪ್ರಧಾನ ಕಾರ್ಯದರ್ಶಿ ಹರೀಶ್, ಯುವ ಘಟಕದ ಪ್ರಧಾನ ಕಾರ್ಯದರ್ಶಿ ದೀಪಿಕಾ, ಮದ್ದೂರು ತಾಲೂಕು ಕಾರ್ಯದರ್ಶಿ ಮಲ್ಲಯ್ಯ ರಾಚಯ್ಯ ಹಾಗೂ ಪ್ರಮುಖರಾದ ತಿಮ್ಮೇಗೌಡ, ನಾಗರಾಜ್, ವೆಂಕಟೇಶ್ ಸೇರಿದಂತೆ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...