ಶ್ರೀರಂಗಪಟ್ಟಣದ ರೋಟರಿ ಸಂಸ್ಥೆ ಮತ್ತು ಶ್ರೀ ರಂಗನಾಯಕಿ ಸಮಾಜ ಹಾಗೂ ಕಾಮಧೇನು ಸ್ವಸಹಾಯ ಸ್ತ್ರೀ ಸಮಾಜದ ವತಿಯಿಂದ ಮೂರು ತಿಂಗಳ ಕಾಲ ನಡೆದ ಉಚಿತ ಹೊಲಿಗೆ ಯಂತ್ರ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಈ ಶಿಬಿರದಲ್ಲಿ ಸುಮಾರು 50ಕ್ಕೂ ಅಧಿಕ ಮಂದಿ ಮಹಿಳೆಯರು ತರಬೇತಿಯನ್ನು ಪಡೆದುಕೊಂಡರು, ಹಾಗೆಯೇ ತರಬೇತಿಯನ್ನು ಪಡೆದುಕೊಂಡ ಎಲ್ಲ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.
ಶ್ರೀರಂಗಪಟ್ಟಣ ರೋಟರಿ ಸಂಸ್ಥೆಯ ಅಧ್ಯಕ್ಷ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಡಾ. ರಾಘವೇಂದ್ರ ಅವರು ಕಾರ್ಯಕ್ರಮದ ಕುರಿತು ಮಾತನಾಡಿ, “ಹೊಲಿಗೆ ತರಬೇತಿಯು ಮಹಿಳೆಯರಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಮತ್ತು ಸಾಮಾಜಿಕ ಸ್ಥಾನಮಾನವನ್ನು ಹೆಚ್ಚಿಸುತ್ತದೆ. ಮಹಿಳೆಯರಿಗೆ ಆರ್ಥಿಕ ಸಬಲೀಕರಣ ಮತ್ತು ಮನೆಯಿಂದಲೇ ಸ್ವ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹವಾಗುವ ದೃಷ್ಟಿಯಿಂದ ಹೊಲಿಗೆ(ಟೈಲರಿಂಗ್) ತರಬೇತಿ ಶಿಬಿರವನ್ನು ಆಯೋಜನೆ ಮಾಡಲಾಯಿತು. ಶಿಬಿರಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲ್ಲಿ” ಎಂದು ಹಾರೈಸಿದರು.
ಈ ಸುದ್ದಿ ಓದಿದ್ದೀರಾ? ಮಂಗಳೂರು | ಸೋಷಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್‌ನ ದಶಮಾನೋತ್ಸವ
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕೃಪಾಸಿನಿ, ಕಾಮಧೇನು ಸ್ವಸಹಾಯ ಸ್ತ್ರೀ ಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೇಗೌಡ, ರಂಗನಾಯಕಿ, ಸ್ತ್ರೀ ಸಮಾಜದ ಅಧ್ಯಕ್ಷೆ ವಿಶಾಲಾಕ್ಷಿ, ರೋಟರಿ ಸಂಸ್ಥೆ ಕಾರ್ಯದರ್ಶಿ ನಾಗೇಂದ್ರ, ಸಹ ಕಾರ್ಯದರ್ಶಿ ರಾಜೇಶ್, ಖಜಾಂಚಿ ಸರಸ್ವತಿ, ನಿರ್ದೇಶಕಿ ಗಾಯಿತ್ರಿ, ನಳಿನಿ, ಗುಣಶೇಖರಿ, ತರಬೇತಿದಾರರಾದ ರೂಪ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಶಿಬಿರಾರ್ಥಿಗಳು ಇದ್ದರು.





