ಶ್ರೀರಂಗಪಟ್ಟಣ | ನಿರಾಶ್ರಿತರಿಗೆ ಕಂಬಳಿ- ಉಣ್ಣೆ ಬಟ್ಟೆ ವಿತರಣೆ

Date:

ಚಳಿಗಾಲದ ಈ ಕಠಿಣ ಸಮಯದಲ್ಲಿ ಪಾದಚಾರಿ ಮಾರ್ಗ ಹಾಗೂ ರಸ್ತೆಬದಿಯನ್ನೇ ನಂಬಿ ಬದುಕುತ್ತಿರುವ ನಿರಾಶ್ರಿತರಿಗೆ ನೆರವಾಗುವ ನಿಟ್ಟಿನಲ್ಲಿ, ಶೇಷಾದ್ರಿಪುರಂ ಇಂಜಿನಿಯರಿಂಗ್ ಕಾಲೇಜಿನ ಎನ್‌ಎಸ್‌ಎಸ್ ಘಟಕ ಹಾಗೂ ಶ್ರೀರಂಗಪಟ್ಟಣದ ರೋಟರಿ ಸಂಸ್ಥೆಯ ಸಹಯೋಗದೊಂದಿಗೆ ಕಂಬಳಿ ಮತ್ತು ಉಣ್ಣೆ ಬಟ್ಟೆಗಳನ್ನು ವಿತರಿಸಲಾಯಿತು.

ಮಾನವೀಯತೆಯಿಂದ ​ಪಟ್ಟಣದಾದ್ಯಂತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಳಿಯ ತೀವ್ರತೆಯಿಂದ ರಕ್ಷಿಸಿಕೊಳ್ಳಲು ಯಾವುದೇ ಆಸರೆಯಿಲ್ಲದ ಬಡವರಿಗೆ ಹಾಗೂ ಅಸಹಾಯಕರಿಗೆ ಬೆಚ್ಚಗಿನ ಹೊದಿಕೆಗಳನ್ನು ನೀಡಲಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಎನ್‌ಎಸ್‌ಎಸ್ ಅಧಿಕಾರಿ ಡಾ. ರಾಘವೇಂದ್ರ, “ಸಾಮಾನ್ಯವಾಗಿ ಚಳಿಗಾಲದಲ್ಲಿ ಸಾವಿರಾರು ಜನರು ಸಾವನ್ನಪ್ಪುತ್ತಾರೆ ಎಂದು ಹೇಳಲಾಗುತ್ತದೆ. ಆದರೆ ವಾಸ್ತವವಾಗಿ ಇದು ಕೇವಲ ಚಳಿಯಿಂದಲ್ಲ, ಬದಲಾಗಿ ಚಳಿಯನ್ನು ತಡೆದುಕೊಳ್ಳಲು ಅಗತ್ಯವಿರುವ ಬೆಚ್ಚಗಿನ ಬಟ್ಟೆ ಮತ್ತು ಹೊದಿಕೆಗಳ ಕೊರತೆಯಿಂದ ಸಂಭವಿಸುವ ಸಾವುಗಳಾಗಿವೆ. ಫುಟ್‌ಪಾತ್ ಮತ್ತು ರಸ್ತೆ ಬದಿಗಳಲ್ಲಿ ಹರಿದ ಬಟ್ಟೆಗಳನ್ನು ಹೊದ್ದು ಮಲಗುವ ವೃದ್ಧರು ಹಾಗೂ ಬಡವರು ರಾತ್ರಿಯಿಡೀ ತಣ್ಣನೆಯ ಗಾಳಿಗೆ ನಲುಗುತ್ತಾರೆ. ಅಂತಹವರ ಜೀವ ಉಳಿಸುವ ಸಣ್ಣ ಪ್ರಯತ್ನ ಇದಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಶ್ರೀರಂಗಪಟ್ಟಣ | ‘ನ್ಯಾಯ’ ಪ್ರತಿಯೊಬ್ಬ ನಾಗರಿಕನ ಹಕ್ಕು: ಡಾ. ರಂಗಸ್ವಾಮಿ ಡಿ

“ಭಾರತದಂತಹ ದೇಶದಲ್ಲಿ ಇಂದಿಗೂ ಅನೇಕರು ಕನಿಷ್ಠ ಬಟ್ಟೆಗಳಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಬಟ್ಟೆ ದಾನ ಮಾಡುವುದು ಕೇವಲ ದಾನವಲ್ಲ, ಅದು ಹಿಂದುಳಿದವರ ಬದುಕಿಗೆ ಗೌರವ ನೀಡುವುದರ ಜೊತೆಗೆ ಮರುಬಳಕೆಯ ಪರಿಸರ ಸ್ನೇಹಿ ಪರಿಕಲ್ಪನೆಯನ್ನು ಉತ್ತೇಜಿಸುತ್ತದೆ” ಎಂದು ಅವರು ಅಭಿಪ್ರಾಯಪಟ್ಟರು.

​ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ಪದಾಧಿಕಾರಿಗಳು, ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಹಾಜರಿದ್ದು, ಸೇವೆಯಲ್ಲಿ ಪಾಲ್ಗೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...