ಶ್ರೀರಂಗಪಟ್ಟಣ | ಐಕ್ಯ ಅಲಯನ್ಸ್ ವತಿಯಿಂದ ಗಾಂಧಿ ಹುತಾತ್ಮ ದಿನಾಚರಣೆ

Date:

ಐಕ್ಯ ಅಲಯನ್ಸ್ ಸಂಸ್ಥೆಯ ವತಿಯಿಂದ ಹುತಾತ್ಮ ದಿನವನ್ನು ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯ ನದಿ ತಟದಲ್ಲಿರುವ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮ ಬಿಟ್ಟ ಸ್ಥಳದ ಸ್ಮಾರಕದಲ್ಲಿ ಪುಷ್ಪಾರ್ಚನೆ ಮೂಲಕ ಭಾವಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಐಕ್ಯ ಅಲಯನ್ಸ್ ಸಂಸ್ಥೆಯ ಅಧ್ಯಕ್ಷೆ ಎನ್. ಸರಸ್ವತಿ, “ನನ್ನ ಜೀವನವೇ ನನ್ನ ಸಂದೇಶ” ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಪ್ರತಿಮ ನಾಣ್ಣುಡಿಯಾಗಿದ್ದು, ಅವರು ಬೋಧಿಸಿದ್ದಕ್ಕಿಂತ ಹೆಚ್ಚು ಬದುಕಿ ತೋರಿಸಿದ ಮಹಾನ್ ನಾಯಕರು ಎಂದರು. ಸತ್ಯ, ಅಹಿಂಸೆ, ಸರಳತೆ ಹಾಗೂ ಸ್ವಾವಲಂಬನೆ ಗಾಂಧೀಜಿಯವರ ದಿನನಿತ್ಯದ ಬದುಕಿನ ಭಾಗವಾಗಿದ್ದು, ಅವು ಕೇವಲ ಮಾತುಗಳಲ್ಲದೆ ಆಚರಣೆಯಾಗಿ ರೂಪುಗೊಂಡಿದ್ದವು ಎಂದು ಹೇಳಿದರು. ಮಹಾತ್ಮ ಗಾಂಧೀಜಿಯವರ ದೈವೈಕ್ಯ ದಿನಗಳನ್ನು ಸ್ವಾತಂತ್ರ್ಯ ಹೋರಾಟದ ವೀರರ ತ್ಯಾಗವನ್ನು ಸ್ಮರಿಸಲು ಹಾಗೂ ಅವರ ಆದರ್ಶಗಳನ್ನು ಪಾಲಿಸಲು ಮೀಸಲಿಡಲಾಗಿದೆ” ಎಂದು ತಿಳಿಸಿದರು.

ಶ್ರೀರಂಗಪಟ್ಟಣ ಪುರಸಭೆಯ ಮಾಜಿ ಸದಸ್ಯ ನಳಿನ ಅವರು ಮಾತನಾಡಿ, “ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಪಶ್ಚಿಮ ವಾಹಿನಿ ನದಿಯಲ್ಲಿ ಬಿಟ್ಟು ಸ್ಮರಣಾರ್ಥವಾಗಿ ಸ್ಥಾಪಿಸಿರುವ ಸ್ಮಾರಕವು ಸೂಕ್ತ ನಿರ್ವಹಣೆಯಿಲ್ಲದೆ ನೆನೆಗುಂದಿದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಗುರುತಿಸಿ, ಭೇಟಿಗರಿಗೆ ಸುವ್ಯವಸ್ಥಿತ ತಾಣವನ್ನಾಗಿ ರೂಪಿಸುವ ಜವಾಬ್ದಾರಿಯನ್ನು ಪಟ್ಟಣದ ಪುರಸಭೆ ವಹಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ​ಮಂಡ್ಯ | ಯುವಜನರ ಭಾವನೆಗಳ ಜತೆಗಿನ ರಾಜಕೀಯ ಚೆಲ್ಲಾಟ ನಿಲ್ಲಿಸಿ: ಸಿಪಿಐಎಂ

ಕಾರ್ಯಕ್ರಮದಲ್ಲಿ ಪ್ರಜ್ಞಾವಂತ ವೇದಿಕೆಯ ಅಧ್ಯಕ್ಷ ಸಿ.ಎಸ್. ವೆಂಕಟೇಶ್, ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ.ಎಸ್. ಜಯಶಂಕರ್, ಐಕ್ಯ ಅಲಯನ್ಸ್ ಸಂಸ್ಥೆಯ ಖಜಾಂಚಿ ಗಾಯತ್ರಿ, ಸದಸ್ಯರಾದ ಲಕ್ಷ್ಮೀದೇವಿ, ಪ್ರಿನ್ಸ್ ಅಧ್ಯಕ್ಷ ಪುಟ್ಟಸ್ವಾಮಿ, ಶಿಕ್ಷಕಿ ಎಚ್.ಜೆ. ಶೀಲಾ, ಶಿವಕುಮಾರ್, ಬಾಲು, ಸಿ. ನಾರಾಯಣ, ಚಿಕ್ಕತಮೇಗೌಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...