ಶ್ರೀರಂಗಪಟ್ಟಣ | ಐತಿಹಾಸಿಕ ರಾಕೆಟ್ ಕೋರ್ಟ್ ಆವರಣದಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Date:

ಶ್ರೀರಂಗಪಟ್ಟಣದ ಮೈಸೂರು ಕೋಟೆ ಬಳಿಯಿರುವ ಐತಿಹಾಸಿಕ ರಾಕೆಟ್ ಕೋರ್ಟ್ ಆವರಣದಲ್ಲಿ ಭಾನುವಾರ ​ಮೈಸೂರಿನ ಶೇಷಾದ್ರಿಪುರಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ‘ನನ್ನ ಭಾರತಕ್ಕಾಗಿ ಯುವಜನತೆ’ ಎಂಬ ಸಂದೇಶದಡಿ ಹಮ್ಮಿಕೊಂಡಿದ್ದ ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಯಶಸ್ವಿಗೊಳಿಸಿದರು.

​ಶಿಬಿರದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸತತ ಎರಡೂವರೆ ತಾಸಿಗೂ ಹೆಚ್ಚು ಕಾಲ ಶ್ರಮದಾನ ಮಾಡುವ ಮೂಲಕ ಕಸ ಮತ್ತು ಪ್ಲಾಸ್ಟಿಕ್‌ನಿಂದ ತುಂಬಿದ್ದ ಐತಿಹಾಸಿಕ ತಾಣವನ್ನು ಸ್ವಚ್ಛಗೊಳಿಸಿದರು.

​”ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರು ತಮ್ಮ ಆತ್ಮಕಥನ ‘ದಿ ವಿಂಗ್ಸ್ ಆಫ್ ಫೈರ್’ ಕೃತಿಯಲ್ಲಿ ಟಿಪ್ಪು ಸುಲ್ತಾನ್ ಅವರನ್ನು ‘ವಿಶ್ವದ ಮೊದಲ ರಾಕೆಟ್ ಉಡಾವಣೆಯ ಪಿತಾಮಹ’ ಎಂದು ಬಣ್ಣಿಸಿದ್ದಾರೆ. ಭಾರತವು ಯುದ್ಧಗಳಲ್ಲಿ ರಾಕೆಟ್ ತಂತ್ರಜ್ಞಾನದ ತವರು ಎನ್ನುವುದಕ್ಕೆ ಸಾಕ್ಷಿಯಾಗಿ, ಅಮೆರಿಕದ ನಾಸಾ ಸಂಸ್ಥೆಯಲ್ಲೂ ಶ್ರೀರಂಗಪಟ್ಟಣದ ಯುದ್ಧದಲ್ಲಿ ರಾಕೆಟ್ ಬಳಸುತ್ತಿರುವ ಚಿತ್ರವನ್ನು ಪ್ರದರ್ಶಿಸಲಾಗಿದೆ. ಇಂತಹ ಜಾಗತಿಕ ಹಾಗೂ ಐತಿಹಾಸಿಕ ಮಹತ್ವವಿರುವ ಸ್ಥಳದಲ್ಲಿ ನಮ್ಮ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯ ಕೈಗೊಂಡಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ” ಎಂದು ಎನ್‌ಎಸ್‌ಎಸ್ ಅಧಿಕಾರಿ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾ. ರಾಘವೇಂದ್ರ ಹರ್ಷ ವ್ಯಕ್ತಪಡಿಸಿದರು.

ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್ ಮಾತನಾಡಿ, “ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಇಂತಹ ಅಪರೂಪದ ಸ್ಮಾರಕಗಳ ಸ್ವಚ್ಛತೆಗೆ ವಿದ್ಯಾರ್ಥಿಗಳು ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ. ಮುಂದಿನ ತಲೆಮಾರುಗಳಿಗಾಗಿ ಸ್ಮಾರಕಗಳ ಸಂರಕ್ಷಣೆ ಅತ್ಯಗತ್ಯ. ‘ನನ್ನ ಭಾರತಕ್ಕಾಗಿ ಯುವಜನತೆ’ ಅಭಿಯಾನದಡಿ ಇಂತಹ ಕಾರ್ಯಗಳಲ್ಲಿ ಯುವಜನರು ಸಕ್ರಿಯವಾಗಿ ಪಾಲ್ಗೊಳ್ಳಬೇಕು” ಎಂದು ಕರೆ ನೀಡಿದರು.

ಇದನ್ನೂ ಓದಿದ್ದೀರಾ? ಮಹಿಳಾ ದಿನದ ವಿಶೇಷ | ಗ್ರಾಮೀಣ ಆರ್ಥಿಕತೆ: ಹೈನುಗಾರಿಕೆಯಲ್ಲಿ ಮಹಿಳಾ ಸಬಲೀಕರಣದ ಕಥೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ಈ ಸ್ವಚ್ಛತಾ ಅಭಿಯಾನದಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳಾದ ಮನೋಜ್, ತೇಜಸ್ವಿನಿ ಸೇರಿದಂತೆ ಹಲವರು ಉತ್ಸಾಹದಿಂದ ಪಾಲ್ಗೊಂಡು ಐತಿಹಾಸಿಕ ಸ್ಮಾರಕದ ಉಳಿವಿಗಾಗಿ ತಮ್ಮ ಅಮೂಲ್ಯ ಸಮಯ ಮೀಸಲಿಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...

​ಮೊಬೈಲ್ ಗೀಳಿಗೆ ಬಿದ್ದು ಪುಸ್ತಕಗಳ ಕಡೆಗಣಿಸದಿರಿ: ವಿದ್ಯಾರ್ಥಿಗಳಿಗೆ ‘ಪುಸ್ತಕದ ಮನೆ’ ಅಂಕೆಗೌಡ ಕಿವಿಮಾತು

​ಪ್ರಪಂಚದ ಯಾವುದೇ ಕ್ಷೇತ್ರದಲ್ಲಿಯೂ ಹಣ, ಅಂತಸ್ತು ಸಂಪಾದನೆಗಿಂತ ಜ್ಞಾನ ಸಂಪಾದನೆ ಅತಿ...