ಮಂಡ್ಯ | ಸಂವಿಧಾನ ಬಾಹಿರ ಆದೇಶಗಳ ವಿರುದ್ಧ ಛೀಮಾರಿ ಹಾಕಿ, ಜನ ಸಾಮಾನ್ಯರು ಜಾಗೃತರಾಗಬೇಕು: ರಾಮಣ್ಣ

Date:

ಸರ್ಕಾರಗಳು ಹಾಗೂ ಪೊಲೀಸ್ ಇಲಾಖೆಯು ಇತ್ತೀಚೆಗೆ ಕೆಆರ್‌ಎಸ್ ಪಕ್ಷದ ಮುಖಂಡರ ವಿರುದ್ಧವಾಗಿ ಹೊರಡಿಸುವ ಸಂವಿಧಾನ ಬಾಹಿರ ಆದೇಶಗಳ ವಿರುದ್ಧ ಛೀಮಾರಿ ಹಾಕಿ, ಜನ ಸಾಮಾನ್ಯರು ಜಾಗೃತರಾಗಬೇಕು ಎಂದು ಮಂಡ್ಯ ನಗರದ ಹೆಸರಾಂತ ನ್ಯಾಯವಾದಿಗಳಾದ ರಾಮಣ್ಣ ಅವರು ಪ್ರಜಾಪ್ರಭುತ್ವದಲ್ಲಿ ಜನಸಾಮಾನ್ಯರ ಜವಾಬ್ದಾರಿಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.

ಮಂಡ್ಯ ನಗರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ನಗರದ ಸುಭಾಷ್ ನಗರ 6ನೇ ಕ್ರಾಸ್‌ನಲ್ಲಿರುವ ಪಕ್ಷದ ಕಚೇರಿಯ ಆವರಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ ವೇಳೆ ಮಾತನಾಡಿದರು.

ಜನಸಾಮನ್ಯರ ಹಾಗೂ ‌ ಕೆಆರ್‌ಎಸ್ ಪಕ್ಷದ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳ ಸಮ್ಮುಖದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ ಕುಮಾರ ಹೆಚ್ ಮಲ್ಲೇಗೌಡ ಧ್ವಜಾರೋಹಣವನ್ನು ನೆರವೇರಿಸಿ ಅರುಣ ಕುಮಾರ ಹೆಚ್ ಮಲ್ಲೇಗೌಡ ಮಾತನಾಡಿ, ಭಾರತ ದೇಶದಲ್ಲಿ ಗಣರಾಜ್ಯ ರಚನೆಯಾದ ಹಾಗೂ ಗಣರಾಜ್ಯೋತ್ಸವ ಆಚರಣೆಗಳು ನಡೆದು ಬಂದ ಹಾದಿಯ ಬಗ್ಗೆ ವಿಚಾರಗಳನ್ನು ‌ಹಂಚಿಕೊಂಡು ರಾಷ್ಟ್ರಪಿತ ಮಹಾತ್ಮ ಗಾಂಧಿ, ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಹೋರಾಟಗಾರರನ್ನು, ಮಹನೀಯರನ್ನು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“1947ರ ಸ್ವಾತಂತ್ರ್ಯ ನಂತರದ ದೇಶಕ್ಕೆ ಸಂವಿಧಾನದ ಕರಡು ರಚನೆ ಕಾರ್ಯರೂಪಕ್ಕೆ ಬರಲು ಮೂರು ವರ್ಷಗಳನ್ನು ತೆಗೆದುಕೊಂಡಿತ್ತು. ಗಣರಾಜ್ಯದ ನಂತರ ಒಟ್ಟಾರೆಯಾಗಿ ಭಾರತ ಅಭಿವೃದ್ಧಿಯ ಪಥದತ್ತ ಸಾಗುತ್ತಿರುವುದು ಭಾರತೀಯರ ಪಾಲಿಗೆ ಅತ್ಯಂತ ಖುಷಿಯ ವಿಚಾರ‌. ಆದರೆ ಗಣರಾಜ್ಯ ಒಕ್ಕೂಟ ಭಾರತದ ಭಾಗವಾಗಿರುವ 29 ರಾಜ್ಯಗಳಿಗೆ, 7 ಕೇಂದ್ರಾಡಳಿತ ಪ್ರದೇಶಗಳಿಗೆ ಸಮಾನವಾದ ಅವಕಾಶಗಳನ್ನು ಕೇಂದ್ರ ಕಲ್ಪಿಸಬೇಕಿದೆ. ಹಾಗೆ ಒಕ್ಕೂಟ ಭಾರತಕ್ಕೆ ಪರೋಕ್ಷವಾಗಿ ಮಹತ್ತರ ಕೊಡುಗೆಗಳನ್ನು ಕೊಟ್ಟಿರುವ ಕರ್ನಾಟಕ ರಾಜ್ಯಕ್ಕೆ ದೊಡ್ಡಮಟ್ಟದಲ್ಲಿ ಮನ್ನಣೆ ಸಿಗಬೇಕಿದೆ” ಎಂಬ ಇಂಗಿತವನ್ನು ವ್ಯಕ್ತಪಡಿಸಿದರು.

“ಒಟ್ಟಾರೆಯಾಗಿ, ಭಾರತೀಯರಾದ ನಾವುಗಳು ರಾಷ್ಟ್ರೀಯ ಹಬ್ಬಗಳಲ್ಲಿ ‌ಒಂದಾದ ಗಣರಾಜ್ಯೋತ್ಸವವನ್ನು ಅತ್ಯಂತ ಗೌರವದಿಂದ ಆಚರಣೆ ಮಾಡುವುದು ಹೆಮ್ಮೆಯ ಸಂಗತಿ ಆದರೆ ಜನಸಾಮಾನ್ಯರು ಸರ್ಕಾರಿ ಕಚೇರಿಗಳಲ್ಲಿ ತಮ್ಮ ತಮ್ಮ ಕಾನೂನುಬದ್ಧ ಕೆಲಸಗಳನ್ನು ಮಾಡಿಸಿಕೊಳ್ಳುವಂತ ಸಂದರ್ಭದಲ್ಲಿ ಭ್ರಷ್ಟಾಚಾರವೆಸಗುವ ಅಧಿಕಾರಿಗಳನ್ನು ಪ್ರಶ್ನಿಸಬೇಕಾಗಿ ಮನವಿ ಮಾಡಿ ಇತ್ತೀಚಿಗೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಇಒ ಅಧಿಕಾರಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಮಲ್ಲೇಶ್ ಹೆಬ್ಬಕವಾಡಿ ಅವರಿಗೆ ಕರೆ ಮಾಡಿ ಧಮ್ಕಿ ಹಾಕಿರುವ ವಿಚಾರವಾಗಿ ಖಂಡಿಸಿ, ಸರ್ಕಾರಿ ಕಚೇರಿಗಳು ಜನಸಾಮಾನ್ಯರಿಗೆ ಸೇರಿದ್ದು. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ಕೆಲಸ ನಿರ್ವಹಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

“ಪಕ್ಷದ ವಿರುದ್ಧವಾಗಿ ಹೊರಡಿಸಿರುವ ಸರ್ಕಾರದ ಯಾವುದೇ ಆದೇಶಗಳಿಗೆ ತಲೆಕೆಡಿಸಿಕೊಳ್ಳದೆ ಎಂದಿನಂತೆ ನಿರಂತರವಾಗಿ ಕೆಆರ್‌ಎಸ್ ಪಕ್ಷದ ಹೋರಾಟಗಳು ಮುಂದುವರೆಯುತ್ತವೆ “ಎಂದರು.

ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ, ಮಂಡ್ಯ‌‌ ಜಿಲ್ಲಾ ಅಧ್ಯಕ್ಷ ಡಿ ಜಿ ನಾಗರಾಜ್, ಜಿಲ್ಲಾ ಉಪಾಧ್ಯಕ್ಷ ಮಲ್ಲೇಶ ಹೆಬ್ಬಕವಾಡಿ, ಜಿಲ್ಲಾ ಯುವ ಘಟಕ ಅಧ್ಯಕ್ಷ ಪ್ರಮೋದ್ ಎಸ್, ಜಿಲ್ಲಾ ಯುವ ಘಟಕ ಪ್ರಧಾನ‌‌ ಕಾರ್ಯದರ್ಶಿ ದೀಪಿಕಾ, ಮಂಡ್ಯ ತಾಲೂಕು ಅಧ್ಯಕ್ಷ ರವೀಂದ್ರ ಕೊತ್ತತ್ತಿ, ತಾಲೂಕು ಕಾರ್ಯದರ್ಶಿಗಳಾದ ಜಯರಾಮ್ ಚಂದಗಾಲ, ಮಲ್ಲೇಶ್, ಜಿಲ್ಲಾ ರೈತ ಘಟಕದ ಅಧ್ಯಕ್ಷ ಹರೀಶ್ ಕಂಪಲಾಪುರ, ನಾಗಮಂಗಲ ತಾಲೂಕು ಅಧ್ಯಕ್ಷ ಮಂಜುನಾಥ್ ಕೆ ಆರ್, ಹಲವು ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಹಾಜರಿದ್ದರು. ನೂತನವಾಗಿ ರಚನೆಯಾಗಿರುವ‌ ಅಂಗ‌‌ ಘಟಕಗಳಾದ ರೈತ‌ ಘಟಕ, ಮಹಿಳಾ ಹಾಗೂ ಯುವ ಘಟಕದ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...