ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌; ಯುವಕನ ಬಂಧನ

Date:

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಫೊಸ್ಟ್‌ ಶೇರ್ ಮಾಡಿರುವ ಆರೋಪದಲ್ಲಿ ಯುವಕನೋರ್ವನನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್‌ ಬಂಧಿತ ಆರೋಪಿ.

ಆರೋಪಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಕಾಲಿಗೆ, ಪ್ರಧಾನಿ ನರೇಂದ್ರ ಮೋದಿ ಶೂ ತೊಡಿಸುತ್ತಿರುವ ಫೋಟೊವನ್ನು ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಬಿಜೆಪಿ ಕಾರ್ಯಕರ್ತರ ದೂರಿನ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿವಾದಕ್ಕೆ ಕಾರಣವಾದ ವಿದ್ಯಾರ್ಥಿನಿಯ ಪೋಸ್ಟ್‌

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಮಂಗಳೂರಿನ ವಿದ್ಯಾರ್ಥಿನಿಯೊಬ್ಬಳು ಹಾಕಿದ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಕೂಡಾ ವಿವಾದಕ್ಕೆ ಕಾರಣವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ರೇಷ್ಮಾ ಎನ್ ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹ್ಯಾಷ್ ಟ್ಯಾಗ್ “ಧಿಕ್ಕಾರ ಆಪರೇಷನ್ ಸಿಂಧೂರ್” ಎಂದು ಮೇ 8ರಂದು ಪೋಸ್ಟ್ ಹಾಕಿದ್ದರು. ವಿರೋಧ ವ್ಯಕ್ತವಾಗುತ್ತಿದ್ದಂತೆ ಯುವತಿ ಪೋಸ್ಟ್ ಡಿಲೀಟ್ ಮಾಡಿದ್ದಾಳೆ ಎನ್ನಲಾಗಿದೆ.

ರೇಷ್ಮಾ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. “ನನ್ನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ. ಅಲ್ಲಿ ನಂದಿ ಹೋಯಿತು ಬೆಳಕು” “ಅವನ ಮನೆಯ ಬೆಳಕಿಗೆ ನನ್ನೊಳಗಿನ ದೀಪ… ಬೆಳಕಿನ ವಿಜೃಂಭಣೆಗಾಗಿ ಹೋರಾಟ ಜಯಿಸಿದು ಕತಲು… ಎಲ್ಲೆಲ್ಲೂ ಕತ್ತಲು…!” #dikkaraoperationsindura ಹ್ಯಾಷ್ ಟ್ಯಾಗ್ ಮಾಡಿ ಪೋಸ್ಟ್ ಹಾಕಿದ್ದಾಳೆ.

ಪೋಸ್ಟ್ ವೈರಲ್ ಆದ ಬೆನ್ನಲ್ಲೇ ರೇಷ್ಮಾ ತನ್ನನ್ನು ತಾನು ಸಮರ್ಥಿಸಿಕೊಂಡಿದ್ದಾರೆ. “ಭಾರತ ದೇಶದ ಮೇಲೆ ಅಪಾರ ಪ್ರೀತಿ, ಗೌರವ ನನಗಿದೆ. ದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಯು ಸುಖ, ಶಾಂತಿ, ನೆಮ್ಮದಿ, ಸಮೃದ್ಧಿಯಿಂದ ಬದುಕಬೇಕು ಎಂಬುದು ನನ್ನ ಕಾಳಜಿ. ಈ ದೇಶದಲ್ಲಿ ಹುಟ್ಟಿರುವ ಬಗ್ಗೆ ಹೆಮ್ಮೆ ಇದೆ, ಏಕೆಂದರೆ ವೈವಿಧ್ಯತೆಯಲ್ಲಿ ಏಕತೆ ಇರುವ ದೇಶ ಭಾರತ. ಈ ದೇಶದ ಮಣ್ಣಿನ ಮಕ್ಕಳಾದ ನಾವು ದ್ವೇಷದ ಕಾರಣ, ಭಯೋತ್ಪಾದನೆಯ ಕಾರಣಕ್ಕಾಗಿ ಮಣ್ಣಾಗುವುದನ್ನು, ನೋವುಗಳನ್ನು ಅನುಭವಿಸುವುದು ನನಗಿಷ್ಟವಿಲ್ಲ.

ಯಾವುದೇ ಯುದ್ಧ ಆದಾಗ ಮಡಿಯುವವರು ಒಂದೆಡೆಯಾದರೆ ಆಯಾ ದೇಶದ ಬಹುತೇಕರು ವಿವಿಧ ಕಾರಣಗಳಿಗಾಗಿ ನೋವು ಅನುಭವಿಸುವಂತಾಗುತ್ತದೆ. ಭಾರತದ ಮೇಲೆ ಭಯೋತ್ಪಾದನೆಯ ಕರಿನೆರಳು ಬೀಳದಿರಲಿ, ಶಾಂತಿ, ಸೌಹಾರ್ದ ನೆಲೆಸಲಿ. ಭಯೋತ್ಪಾದನೆ ನಿರ್ಮೂಲನೆಯಾಗಲಿ. ಸಾವು ನೋವು ಇಲ್ಲದಾಗಲಿ ಎನ್ನುವುದಷ್ಟೇ ನನ್ನ ಉದ್ದೇಶ ಎಂದು ರೇಷ್ಮಾ ಹೊಸದಾಗಿ ಪೋಸ್ಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...