ಗಾಯಾಳುಗಳಿಗೆ ಚಿಕಿತ್ಸೆ ನೀಡಲು ವೈದ್ಯರ ವಿಳಂಬ ಮಂಗಳ ಮುಖಿಯರ ಆಕ್ರೋಶ

Date:

ಚಿಂತಾಮಣಿ : ಚಾಲಕನ ಅಜಾಗರೂಕತೆ ಮತ್ತು ಅತಿವೇಗವು ಮತ್ತು ನಿರ್ಲಕ್ಷದಿಂದ ಕಾರು ಚಲಾಯಿಸಿಕೊಂಡು ಬಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಪಲ್ಟಿಯಾಗಿ ನಾಲ್ಕು ಜನ ಗಾಯಗೊಂಡಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಸಂದ್ರ ಸಮೀಪ ನಡೆದಿದೆ.

ಚಿಂತಾಮಣಿ ನಗರದಲ್ಲಿ ವಾಸಿಯಾಗಿರುವ ಮಂಗಳಮುಖಿಯರು ಅನ್ಯ ಕಾರ್ಯನಿಮಿತ್ತ ತ್ರಿಚಕ್ರ ವಾಹನದಲ್ಲಿ ಮಾಡಿಕೆರೆ ಕ್ರಾಸ್ ಗೆ ಹೋಗುತ್ತಿದ್ದ ವೇಳೆ ಎದುರುಗಡೆಯಿಂದ ಜೋರಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಂಗಳಮುಖಿಯರಾದ ಮಮತಾ ಸರೋಜ,ಶಬನಾ,ಆಟೋ ಚಾಲಕನಾದ ನವಾಜ್ ಇವರಿಗಳಿಗೆ ಗಂಭೀರ ಗಾಯಗಳಾಗಿದ್ದು,ಚಿಂತಾಮಣಿ ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಅಂಬುಲೆನ್ಸ್ ಮುಖಾಂತರ ದಾಖಲಿಸಲಾಯಿತು.

ಆ ವೇಳೆ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರು ಗಾಯಾಳುಗಳಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡದೆ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಮಂಗಳಮುಖಿಯರು ಆಸ್ಪತ್ರೆಯಲ್ಲಿ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ ಅವರು ಅಪಘಾತವಾಗಿ ಅರ್ಧ ಗಂಟೆಗಿಂತ ಹೆಚ್ಚು ಸಮಯವಾಗಿದ್ದರು ಆಸ್ಪತ್ರೆಗೆ ಬಂದ ಗಾಯಗಳುಗಳಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಿದೆ ವಿಳಂಬ ಮಾಡುತ್ತಿರುವುದಲ್ಲದೆ ವೈದ್ಯರ ವಿಳಂಬದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಗಾಯಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಎಕ್ಸರೇ ಮಾಡುವರು ಇರಲ್ಲ!ಎಂದು ವೈದ್ಯರು ಉಡಾಫೆ ಉತ್ತರ ನೀಡುತ್ತಿರುವುದಲ್ಲದೆ,ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪ್ರತಿಕ್ರಿಯಿಸಿದ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೈದ್ಯರು ರಾತ್ರಿ ವೇಳೆ ಎಕ್ಸರೇ ತೆಗೆಯುವ ಸಿಬ್ಬಂದಿ ಆಸ್ಪತ್ರೆಯಲ್ಲಿ ಇರುವುದಿಲ್ಲ ನಾವು ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದ್ದೇವೆ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಎಕ್ಸರೇ ಸಿಬ್ಬಂದಿ ಲಭ್ಯವಿಲ್ಲದೆ ಇರುವ ಕಾರಣಕ್ಕೆ ಚಿಕ್ಕಬಳ್ಳಾಪುರಕ್ಕೆ ಹೋಗಿ ಎಂದು ಹೇಳಿದ್ದೇವೆ ಎಂದು ಅವರು ಪ್ರತಿಕ್ರಿಯಿಸಿದರು.

ಇನ್ನೂ ಕೆಲ ಮಂಗಳಮುಖಿಯರು ಗ್ರಾಮಾಂತರ ಪೊಲೀಸ್ ಠಾಣೆ ಎದುರುಗಡೆ ಜಮಾಯಿಸಿ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದ ಹಿನ್ನೆಲೆಯಲ್ಲಿ ಮೂರು ಮಂಗಳಮುಖಿಯರು ಗಾಯಗೊಂಡಿದ್ದಾರೆ ಕಾರು ಚಾಲಕನ ವಿರುದ್ಧ ಕೂಡಲೆ ಕಠಿಣ ಕ್ರಮ ಜರುಗಿಸಬೇಕು,ಅಷ್ಟೇ ಅಲ್ಲದೆ ಅಪಘಾತದಲ್ಲಿ ಮಂಗಳಮುಖಿಯರಿಗೆ ಬೆನ್ನು ಮುರಿದಿದೆ ಅವರಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಪೊಲೀಸ್ ಠಾಣೆ ಎದುರುಗಡೆ ಕೆಲಕಾಲ ಮಂಗಳಮುಖಿಯರು ಹೈಡ್ರಾಮ ಮಾಡಿದರು.

ಇದನ್ನು ಓದಿದ್ದೀರಾ..? ಮಾರ್ಕಂಡೇಶ್ವರ ಜಾತ್ರಾ ಮಹೋತ್ಸವ ಭಕ್ತಾದಿಗಳಿಗೆ ನೀರು ಮಜ್ಜಿಗೆ ವಿತರಣೆಗೆ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ

ಘಟನೆ ತಿಳಿದ ತಕ್ಷಣ ಗ್ರಾಮಾಂತರ ಠಾಣೆಯ ಪೊಲೀಸರು ಆಸ್ಪತ್ರೆ ಹಾಗೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ…

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...