ಮಂಗಳೂರು | ಬೈಕ್, ಟೆಂಪೊ ಮಧ್ಯೆ ಅಪಘಾತ; ಬೈಕ್‌ ಸವಾರ ಸಾವು

Date:

ಬೈಕ್‌ ಮತ್ತು ಟೆಂಪೊ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ನಡೆದಿದೆ.

ಮೃತ ಯುವಕನನ್ನು ಅಬೂಬಕ‌ರ್ ಸಿದ್ದೀಕ್ (22) ಎಂದು ಗುರುತಿಸಲಾಗಿದೆ. ದೇರಳಕಟ್ಟೆ ಕಡೆಯಿಂದ ತೆರಳುತ್ತಿದ್ದ ಸ್ಕೂಟರ್ ಮತ್ತು ಮುಡಿಪು ಕಡೆಯಿಂದ ತೊಕ್ಕೊಟ್ಟಿನತ್ತ ಬರುತ್ತಿದ್ದ ಏಸ್ ಟೆಂಪೊ ಮಧ್ಯೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಭಾಗಶಃ  ಟೆಂಪೊದೊಳಗೆ ನುಗ್ಗಿದ್ದು ನಜ್ಜುಗುಜ್ಜಾಗಿದೆ. ಈ ವೇಳೆ ಟೆಂಪೋದ ಮೇಲೆ ಎಸೆಯಲ್ಪಟ್ಟ ಅಬೂಬಕರ್ ಸಿದ್ದೀಕ್ ಗಂಭೀರವಾಗಿ ಗಾಯಗೊಂಡಿದ್ದರು. ಅವರು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಟೆಂಪೊ ಚಾಲಕ ಕೂಡಾ ಗಾಯಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮಂಗಳೂರು | ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿ ಕೇರಳದ ಶವಾಗಾರದಲ್ಲಿ ಜೀವಂತ!

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...