ಮಂಗಳೂರು | ಆ್ಯಸಿಡ್ ದಾಳಿ: ಕಠಿಣ ಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರ್ಕಾರಿ ಕಾಲೇಜು ಆವರಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ದುರದೃಷ್ಟಕರ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಜಿಲ್ಲಾ ಪೊಲೀಸರು ಈಗಾಗಲೇ ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಪರಿಹಾರ ಸೇರಿದಂತೆ ವೈದ್ಯಕೀಯ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಹಿಳೆಯರ ಮೇಲಿನ ಆ್ಯಸಿಡ್ ದಾಳಿಯಂತಹ ಅಮಾನವೀಯ ಘಟನೆಗಳು ಖಂಡನೀಯ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...