ಮಂಗಳೂರು | ಬೆಂಗಳೂರಿಗೆ ತೆರಳಬೇಕಿದ್ದ ಏರ್‌ಇಂಡಿಯಾ ವಿಮಾನ ಕೊನೆ ಕ್ಷಣದಲ್ಲಿ ರದ್ದು: ಪ್ರಯಾಣಿಕರಿಂದ ಆಕ್ರೋಶ

Date:

ಶನಿವಾರ (ಡಿ.23) ರಾತ್ರಿ 8.15ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೇ ಕ್ಷಣದಲ್ಲಿ ರದ್ದು ಮಾಡಿದ ಹಿನ್ನೆಲೆಯಲ್ಲಿ, ಪ್ರಯಾಣಿಕರು ಆಕ್ರೋಶಗೊಂಡು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಘಟನೆಯ ಬಗ್ಗೆ ವರದಿಯಾಗಿದೆ.

ಮಂಗಳೂರಿನ ಬಜ್ಪೆ ಕೆಂಜಾರಿನಲ್ಲಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ಬೆಂಗಳೂರಿಗೆ ಹೊರಡಬೇಕಿತ್ತು. ಆದರೆ, ವಿಮಾನ ಬಾರದ ಕಾರಣದಿಂದ ಆಕ್ರೋಶಗೊಂಡಿದ್ದರು. ಇದರಿಂದ ಬೆಂಗಳೂರಿನ ಮೂಲಕ ಅಮೆರಿಕಕ್ಕೆ ಪ್ರಯಾಣ ಬೆಳೆಸಬೇಕಿದ್ದವರು, ಪರೀಕ್ಷೆ ಬರೆಯಲು ಹೊರಟವರು ಹಾಗೂ ಕ್ರಿಸ್‌ಮಸ್ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು, ವಿಮಾನ ಬಾರದ ಕಾರಣ ಮಂಗಳೂರು ವಿಮಾನ ನಿಲ್ದಾಣದಲ್ಲೇ ಬಾಕಿ ಆಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಯಾಣಿಕರೆಲ್ಲರೂ ಇನ್ನೇನು ವಿಮಾನ ಹತ್ತಬೇಕೆನ್ನುವ ಹೊತ್ತಿಗೆ ವಿಮಾನವೇ ಇಲ್ಲ ಎಂದು ತಿಳಿದು ಕಂಗಾಲಾಗಿ‌ದ್ದಾರೆ. ಈ ಹಿನ್ನೆಲೆಯಲ್ಲಿ ತಾಳ್ಮೆಯ ಕಟ್ಟೆ ಒಡೆದಿದ್ದು, ಸಿಬ್ಬಂದಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಿಬ್ಬಂದಿಗಳ ಮೇಲೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿರುವ ವಿಡಿಯೋವನ್ನು ಇತರೆ ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

ನಾವು ತುರ್ತಾಗಿ ಹೋಗಲೇಬೇಕು, ಪರ್ಯಾಯ ವ್ಯವಸ್ಥೆ ಮಾಡಿ ಎಂದು ವಿಮಾನ ಸಿಬ್ಬಂದಿ ಮೇಲೆ ಪ್ರಯಾಣಿಕರು ದುಂಬಾಲು ಬಿದ್ದಿದ್ದರು. ಸಿಬ್ಬಂದಿ ಪ್ರಯಾಣಿಕರನ್ನು ಸಮಾಧಾನ ಮಾಡಲೆತ್ನಿಸಿದರೂ ಯಾರೂ ಕೇಳುವ ಸ್ಥಿತಿಯಲ್ಲಿರಲಿಲ್ಲ. ಕೊನೆಗೆ, ಏರ್ ಇಂಡಿಯಾ ಸಿಬ್ಬಂದಿ ವಿಮಾನವು ತೊಂದರೆಗೀಡಾಗಿದ್ದು, ತಾಂತ್ರಿಕ ಅಡಚಣೆಯಿಂದ ಬೆಂಗಳೂರಿನಲ್ಲಿಯೇ ಉಳಿದಿದೆ ಎನ್ನಲಾಗಿದೆ.

ಬೆಳಗಿನ ಜಾವ 2.15ಕ್ಕೆ ಬೇರೆ ವಿಮಾನ
ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಕೊನೆಗೆ ಏರ್ ಇಂಡಿಯಾ ಪರ್ಯಾಯ ವ್ಯವಸ್ಥೆ ಮಾಡಿದ್ದು, ಬೆಳಗಿನ ಜಾವ 2.15ಕ್ಕೆ ಬೇರೊಂದು ವಿಮಾನದಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ.

ರಾತ್ರಿ 8.15ಕ್ಕೆ ಹೊರಡಬೇಕಿದ್ದ ವಿಮಾನಕ್ಕಾಗಿ ಬಂದಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆಗಾಗಿ ವಿಮಾನ ನಿಲ್ದಾಣದಲ್ಲಿಯೇ ನಡುರಾತ್ರಿಯವರೆಗೆ ಕಾದು ಕುಳಿತು ಬಳಿಕ ಪ್ರಯಾಣಿಸಿರುವುದಾಗಿ ವರದಿಯಾಗಿದೆ.

ಬೆಂಗಳೂರಿನಲ್ಲಿ ದಟ್ಟ ಮಂಜಿನಿಂದ ವಿಮಾನಗಳ ಹಾರಾಟ ವಿಳಂಬ

ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ದಟ್ಟ ಮಂಜು ಆವರಿಸಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 20ಕ್ಕೂ ಹೆಚ್ಚು ವಿಮಾನಗಳು ವಿಳಂಬಗೊಂಡಿದೆ.

ದೇವನಹಳ್ಳಿಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ 5 ರಿಂದ 7ರವರೆಗೆ ದಟ್ಟ ಮಂಜು ಆವರಿಸಿತ್ತು. ಇದರಿಂದಾಗಿ 20ಕ್ಕೂ ಹೆಚ್ಚು ವಿಮಾನಗಳ ಆಗಮನ ಮತ್ತು ನಿರ್ಗಮನದಲ್ಲಿ ವ್ಯತ್ಯಾಸಗಳಾಗಿದೆ. ಮಂಜು ಕಡಿಮೆಯಾದ ನಂತರ ವಿಮಾನ ಪ್ರಯಾಣವನ್ನು ಮುಂದುವರಿಸಲಾಯಿತಾದರೂ, ಕೆಲ ಪ್ರಯಾಣಿಕರು ಪ್ರಯಾಣ ರದ್ದು ಮಾಡಿ ವಾಪಸ್ ತೆರಳಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...